BJPಯಿಂದ ರಾಜ್ಯದ ಅಭಿವೃದ್ಧಿ: ಸಂಗಣ್ಣ ಕರಡಿ
Team Udayavani, Apr 23, 2023, 6:40 AM IST
ಕೊಪ್ಪಳ: ರಾಜ್ಯದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಕ್ಷೇತ್ರದ ಜನತೆ ಬಿಜೆಪಿಗೆ ಮತ ಹಾಕಿ ಬೆಂಬಲಿಸಬೇಕು ಎಂದು ಸಂಸದ ಕರಡಿ ಸಂಗಣ್ಣ ಅವರು ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಅವರ ಪರ ತಾಲೂಕಿನ ಹುಲಗಿ, ಹಳೆ ಶಿವಪುರ, ಅಗಳಕೇರಿ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅ ಧಿಕಾರಕ್ಕೆ ಬಂದಾಗಿನಿಂದ ರಾಜ್ಯ ದಲ್ಲಿ ಹಲವಾರು ರಾಷ್ಟ್ರೀಯ ಹೆದ್ದಾರಿಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಸರಕು ಸಾಗಣೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಇದು ಬಿಜೆಪಿ ಸರಕಾರ ದಿಂದ ಸಾಧ್ಯವಾಗಿದೆ. ಕೊಪ್ಪಳ ಲೋಕ ಸಭಾ ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯದ ಸರಕಾರದ ಯೋಜನೆಯನ್ನು ಪರಿಪೂರ್ಣವಾಗಿ ಫಲಾನುಭವಿಗಳಿಗೆ ತಲುಪಿಸಿದೆ. ಉಜ್ವಲ ಯೋಜನೆಯಡಿ ಕ್ಷೇತ್ರದ ಮಹಿಳೆಯರಿಗೆ ಗ್ಯಾಸ್ ಸ್ಟವ್ ಹಾಗೂ ಸಿಲಿಂಡರ್ ನೀಡಲಾಗಿದೆ. ಈ ಮೂಲಕ ಮಹಿಳೆಯರ ಜೀವನಮಟ್ಟ ಸುಧಾರಿಸಲಾಗಿದೆ ಎಂದರು.
ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಮಾತನಾಡಿ, ಮಹಿಳೆಯರ ಸಮಸ್ಯೆಗಳನ್ನು ಅರಿತಿರುವ ಏಕೈಕ ಪಕ್ಷ ಬಿಜೆಪಿ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವತ್ಛ ಭಾರತ ಯೋಜನೆಯಡಿ ಬಯಲು ಶೌಚಾಲಯ ಮುಕ್ತ ರಾಜ್ಯವನ್ನಾಗಿ ಮಾಡಿದ್ದಾರೆ. ಮತದಾರರು ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಗಮನಿಸಿ ಬಿಜೆಪಿಗೆ ಮತ ನೀಡಬೇಕು ಎಂದರು.
ಉಡಿ ತುಂಬಿದ ಮಹಿಳೆಯರು
ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಅವರಿಗೆ ಬಂಡಿ ಹರ್ಲಾಪುರ ಜಿ.ಪಂ. ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವ ವೇಳೆ ಮಹಿಳೆಯರು ಉಡಿ ತುಂಬುವ ಮೂಲಕ ಆಶೀರ್ವಾದ ಮಾಡಿದರು.
ಪಕ್ಷಕ್ಕೆ ಸೇರ್ಪಡೆ
ಬೂದಿಹಾಳದ 50ಕ್ಕೂ ಅಧಿಕ ಯುವಕರು, ಮಹಿಳೆಯರು, ಮುಖಂಡರು ಸಂಸದ ಕರಡಿ ಸಂಗಣ್ಣ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.