Election 215 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ CPI ಬೆಂಬಲ; 7ಕಡೆ ಸೌಹಾರ್ದ ಸ್ಪರ್ಧೆ
ಬಿಜೆಪಿ ವಿರುದ್ಧದ ಹೋರಾಟಕ್ಕೆ ಬೆಂಬಲ...
Team Udayavani, Apr 23, 2023, 5:53 PM IST
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) 215 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದೆ.
”ರಾಜ್ಯಾದ ಮೂಡಿಗೆರೆ, ಆಳಂದ, ಜೇವರ್ಗಿ, ಕೂಡ್ಲಗಿ, ಕೆಜಿಎಫ್, ಸಿರಾ, ಮಡಿಕೇರಿ ಸೇರಿದಂತೆ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸಿಪಿಐ ಸ್ಪರ್ಧಿಸುತ್ತಿದ್ದು, ಉಳಿದ 215 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಿಪಿಐ ಬೆಂಬಲಿಸಲಿದೆ” ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾಟಿ ಸುಂದರೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೇಲುಕೋಟೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಗೆ ಮತ್ತು ಬಾಗೇಪಲ್ಲಿಯಲ್ಲಿ ಸಿಪಿಐ(ಎಂ) ಅಭ್ಯರ್ಥಿಗೆ ಸಿಪಿಐ ಬೆಂಬಲ ನೀಡಲಿದೆ ಎಂದು ಸುಂದರೇಶ್ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರೂ ಈ ಬೆಳವಣಿಗೆಯನ್ನು ಖಚಿತಪಡಿಸಿದ್ದು, 7 ಸ್ಥಾನಗಳಲ್ಲಿ ಸೌಹಾರ್ದ ಸ್ಪರ್ಧೆ ನಡೆಯಲಿದೆ ಎಂದಿದ್ದಾರೆ.”ಸಿಪಿಐ ಪಕ್ಷದವರು 7 ಅಭ್ಯರ್ಥಿಗಳನ್ನು ನಿಲ್ಲಿಸಿದ್ದಾರೆ. 7 ಸ್ಥಾನಗಳಲ್ಲಿ ಸೌಹಾರ್ದ ಸ್ಪರ್ಧೆ ನಡೆಯಲಿದೆ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಉಳಿದ ಎಲ್ಲಾ 197 ಸ್ಥಾನಗಳಲ್ಲಿ,ಪೂರ್ಣ ಪ್ರಮಾಣದಲ್ಲಿ ಸಿಪಿಐ ಕಾರ್ಯಕರ್ತರು ಪೂರ್ಣ ಹೃದಯದಿಂದ, ಯಾವುದೇ ಪೂರ್ವ ಷರತ್ತು ಅಥವಾ ನಿರೀಕ್ಷೆಯಿಲ್ಲದೆ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ ಎಂದು ಸುರ್ಜೇವಾಲಾ ಭಾನುವಾರ ಹೇಳಿದ್ದಾರೆ.
In a historic move that will
strengthen our fight against the #40PercentSarkara i.e Bommai Govt in Karnataka, the @cpofindia has extended support to Congress candidates across 215 assembly seats.This is a partnership based on our shared vision of progressive and transparent… pic.twitter.com/YGQH3xO4iV
— Randeep Singh Surjewala (@rssurjewala) April 23, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.