Karnataka Polls 2023: ಬಿಜೆಪಿ ಬಂಡಾಯ ಅಭ್ಯರ್ಥಿ ತವಣಪ್ಪ ಅಷ್ಟಗಿ ಕಾಂಗ್ರೆಸ್ ಸೇರ್ಪಡೆ
Team Udayavani, Apr 23, 2023, 6:34 PM IST
ಧಾರವಾಡ: ಬಿಜೆಪಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಂಡಾಯವೆದ್ದು ಧಾರವಾಡ ಗ್ರಾಮೀಣ-71 ರ ವಿಧಾನಸಭಾ ಮತಕ್ಷೇತ್ರಕ್ಕೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ತವನಪ್ಪ ಅಷ್ಟಗಿ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಠಿಸಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತವನಪ್ಪ ಅಷ್ಟಗಿ ಬಿಜೆಪಿ ವರಿಷ್ಠರು ಮಣೆ ಹಾಕದೇ ಹಾಲಿ ಶಾಸಕ ಅಮೃತ ದೇಸಾಯಿ ಅವರಿಗೆ ಈ ಸಲವೂ ಟಿಕೆಟ್ ನೀಡಿದ್ದರಿಂದ ಅಷ್ಟಗಿ ಮುನಿಸಿಕೊಂಡಿದ್ದರು.
ಇದಲ್ಲದೇ ನಿಗಮ ಮಂಡಳಿ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದರ ಜತೆಗೆ ಬಂಡಾಯವೆದ್ದು ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದರು. ಇದೀಗ ರವಿವಾರ ಹೊಸ ಬೆಳವಣಿಗೆಯಲ್ಲಿ ತವನಪ್ಪ ಅಷ್ಟಗಿ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಒಂದು ಬಾರಿ ತವನಪ್ಪ ಅಷ್ಟಗಿ ಮತ್ತು ಅವರ ಪತ್ನಿ ಕಸ್ತೂರಿ ಅವರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಕ್ಷೇತ್ರದಲ್ಲಿ ತಮ್ಮದೇ ಆದ ಬೆಂಬಲಿಗರ ಪಡೆಯನ್ನು ಹೊಂದಿರುವ ಅಷ್ಟಗಿಯವರು ಇದೀಗ ಕಾಂಗ್ರೆಸ್ ಕೈ ಹಿಡಿದಿದದ್ದು ಗ್ರಾಮೀಣದಲ್ಲಿ ಇದರಿಂದ ಬಿಜೆಪಿಗೆ ತೀವ್ರ ಹಿನ್ನಡೆಯಾದಂತಾಗಿದೆ.
ಜಾರಕಿಹೊಳಿ ರಂಗ ಪ್ರವೇಶ : ಇಲ್ಲಿಯ ಸವದತ್ತಿ ರಸ್ತೆಯಲ್ಲಿರುವ ತವನಪ್ಪ ಅಷ್ಟಗಿ ಅವರ ನಿವಾಸಕ್ಕೆ ರವಿವಾರ ಬೆಳಿಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ವಿನಯ ಕುಲಕರ್ಣಿ ಸಹೋದರ, ಕಾಂಗ್ರೆಸ್ ಮುಖಂಡ ವಿಜಯ ಕುಲಕರ್ಣಿ ಅವರು ಬೇಟಿ ನೀಡಿದರು. ಈ ವೇಳೆ ಮಾತುಕತೆ ನಡೆಸಿ, ಅಷ್ಟಗಿ ಅವರ ಮನವೊಲಿಸುವ ಕೆಲಸ ಮಾಡಿದರು. ಇದಾದ ಬಳಿಕ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ ಜಾರಕಿಹೊಳಿ, ವರಿಷ್ಠರ ಸೂಚನೆ ಮೇರೆಗೆ ನಾನು ತವನಪ್ಪ ಅವರ ಮನೆಗೆ ಬಂದಿದ್ದೆ. ಇನ್ನು ಮುಂದೆ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ಇದು ಒಳ್ಳೆಯ ಬೆಳವಣಿಗೆ. ಮೊದಲು ನಾವೇ ಅಷ್ಟಗಿ ಅವರನ್ನು ಸಂಪರ್ಕ ಮಾಡಿದ್ದೆವು. ಈಗ ನಾವು ಬಂದು ವಿನಂತಿ ಮಾಡಿದ್ದಕ್ಕೆ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅಷ್ಟಗಿ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಪರಿಣಾಮ ಕ್ಷೇತ್ರದ ಜತೆಗೆ ಬೇರೆ ಕಡೆಯೂ ಆಗಲಿದೆ. ತವನಪ್ಪ ಸಣ್ಣ ಸಮಾಜದವರಾದರೂ ದೊಡ್ಡ ನಾಯಕರಾಗಿ
ಬೆಳೆಯುತ್ತಾರೆ ಎಂದರು.
ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಬಳಿಕ ಮಾತನಾಡಿದ ತವನಪ್ಪ ಅಷ್ಟಗಿ, ಬಿಜೆಪಿಯಲ್ಲಿ ನಮಗೆ ಸಾಮಾಜಿಕ ನ್ಯಾಯ ಸಿಗಲಿಲ್ಲ. ನಮ್ಮ ಗೌರವಕ್ಕೆ ಧಕ್ಕೆ ಬರುವ ಕೆಲಸವನ್ನು ಹಾಲಿ ಶಾಸಕ ಅಮೃತ ದೇಸಾಯಿ ಮಾಡಿದರು. ಆರು ಬಾರಿ ಸೋತವರನ್ನು ನಾವು ಶಾಸಕರನ್ನಾಗಿ ಮಾಡಿದೇವು. ತನು, ಮನ, ಧನದಿಂದ ಕಾರ್ಯಕರ್ತರೆಲ್ಲ ಸೇರಿ ಅವರನ್ನು ಆಯ್ಕೆ ಮಾಡಿದ್ದೆವು. ಆದರೆ, ಅಮೃತ ದೇಸಾಯಿ ಕಾರ್ಯಕರ್ತರನ್ನೂ ಕಡೆಗಣಿಸಿದರು ಎಂದು ದೂರಿದರು.
ಬಿಜೆಪಿಯಲ್ಲಿ ಒಂದು ವಿಶ್ವಾಸ ಮೇಲೆ ಇದ್ದೆ. ಆದರೆ, ಅಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ. ಇದೀಗ ಸತೀಶ ಜಾರಕಿಹೊಳಿ ಅವರು ನಮ್ಮ ಮನೆಗೆ ಬಂದು ಮನವೊಲಿಸಿ, ನಮಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರಿಂದ ನಾನು ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ಸೋಮವಾರ ನಾಮಪತ್ರ ವಾಪಸ್ ಪಡೆಯುತ್ತೇನೆ ಎಂದು ಸ್ಪಷ್ಟಪಡಿಸಿದರು.
ಸಾಮಾಜಿಕ ನ್ಯಾಯದ ವಿಶ್ವಾಸದಿಂದ ಕಾಂಗ್ರೆಸ್ ಸೇರಿದ್ದೇನೆ. ಯಾವುದೇ ಷರತ್ತು ವಿಽಸಿಲ್ಲ. ಗೌರವ ಬಯಸಿ, ಬಂದಿದ್ದೇನೆ. ಮೊದಲು ನಾನು ಕಾಂಗ್ರೆಸ್‌ನಲ್ಲೇ ಇದ್ದೆ. ಆ ಬಳಿಕ ಕೆಜೆಪಿ, ಬಿಜೆಪಿ ಸೇರ್ಪಡೆಗೊಂಡಿದ್ದೆ. ಈಗ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ.
-ತವನಪ್ಪ ಅಷ್ಟಗಿ
ಬಿಜೆಪಿ ಪಕ್ಷವನ್ನು ತೊರೆದು ತವನಪ್ಪ ಅಷ್ಟಗಿ ಅಽಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದು, ಅವರ ಶಕ್ತಿಗನುಗುಣವಾಗಿ ಅವರಿಗೆ ನಮ್ಮ ಪಕ್ಷದಲ್ಲಿ ಸ್ಥಾನಮಾನ ನೀಡಲಾಗುವುದು. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವ ಅವರು ಸೋಮವಾರ ಅದನ್ನು ವಾಪಸ್ ಪಡೆದು ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಲ್ಲುತ್ತಾರೆ.
-ಸತೀಶ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ
ಅಷ್ಟಗಿಗೆ ಬೆಲ್ಲದ ಟಾಂಗ್
ತವನಪ್ಪ ಅಷ್ಟಗಿ ಮೂಲತ: ವ್ಯಾಪಾರಿಯಾಗಿದ್ದು, ಲಾಭದ ಆಸೆಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಆದರೆ ಅವರು ಅಲ್ಲಿ ನಷ್ಟವನ್ನೇ ಅನುಭವಿಸಲಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷ, ಅದರ ನಾಯಕ ಅವರೊಂದಿಗೆ ಹಾಗೂ ಅವರ ಪತ್ನಿ ಜತೆಗೆ ಯಾವ ರೀತಿ ನಡೆದುಕೊಂಡಿತ್ತು ಎಂಬುದನ್ನು ಮರೆತಿದ್ದಾರೆ ಅಷ್ಟಗಿ. ಸ್ವಾಭಿಮಾನಿಯಾಗಿದ್ದರೆ ಎಂದಿಗೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿರಲಿಲ್ಲ. ಅವರಿಗೆ ತತ್ವ, ಸಿದ್ದಾಂತವಿಲ್ಲ.
-ಅರವಿಂದ ಬೆಲ್ಲದ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.