WFI ಜಂತರ್ ಮಂತರ್‌ನಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಿದ ಅಗ್ರ ಕುಸ್ತಿಪಟುಗಳು
ನಮಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುತ್ತೇವೆ...
Team Udayavani, Apr 23, 2023, 8:16 PM IST
ಹೊಸದಿಲ್ಲಿ : ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಅಂತಾರಾಷ್ಟ್ರೀಯ ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂತರ್ ನಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI ) ಮತ್ತು ಅದರ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತಮ್ಮ ಪ್ರತಿಭಟನೆಯನ್ನು ಭಾನುವಾರ ಸಂಜೆಯಿಂದ ಪುನರಾರಂಭಿಸಿದ್ದಾರೆ.
WFI ಮತ್ತು ಅಧ್ಯಕ್ಷರ ವಿರುದ್ಧ ತಮ್ಮ ಹೋರಾಟ ಆರಂಭಿಸುವ ಮೂಲಕ ಕೋಲಾಹಲವನ್ನು ಸೃಷ್ಟಿಸಿದ 3 ತಿಂಗಳ ನಂತರ ಕುಸ್ತಿಪಟುಗಳು ಮತ್ತೆ ಪ್ರತಿಭಟನಾ ಸ್ಥಳಕ್ಕೆ ಮರಳಿದ್ದಾರೆ.
ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್, ಅಪ್ರಾಪ್ತ ವಯಸ್ಕಳು ಸೇರಿದಂತೆ ಹಲವಾರು ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳದ ಕುರಿತು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸರು ವಿಫಲವಾದ ನಂತರ ಜಂತರ್ ಮಂತರ್‌ಗೆ ಮರಳಬೇಕಾಯಿತು. ಶುಕ್ರವಾರ ನವದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂದು ಕುಸ್ತಿಪಟುಗಳು ಹೇಳಿಕೊಂಡಿದ್ದಾರೆ.
“ನಾವು ಸಿಪಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇವೆ. ಎರಡು ದಿನಗಳು ಕಳೆದಿವೆ, ಆದರೆ ಇನ್ನೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಏಳು ಮಹಿಳೆಯರು ದೂರು ನೀಡಿದ್ದಾರೆ, ಅದರಲ್ಲಿ ಅಪ್ರಾಪ್ತ ವಯಸ್ಕಳೂ ಸಹ ಸೇರಿದ್ದಾರೆ. ಇದು ಪೋಸ್ಕೋ ಪ್ರಕರಣಕ್ಕೆ ಕಾರಣವಾಗುತ್ತದೆ, ಆದರೆ ಇನ್ನೂ ಏನೂ ಮಾಡಲಾಗಿಲ್ಲ,” ಎಂದು ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಹೇಳಿದರು.
ಜನವರಿಯಲ್ಲಿ ಕುಸ್ತಿಪಟುಗಳು ಬೀದಿಗಿಳಿದಾಗ, ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.