ನನ್ನನ್ನು ಅಪಹರಿಸಿ ಬಲವಂತವಾಗಿ ನಾಮಪತ್ರ ಹಿಂತೆಗೆಸಿಕೊಳ್ಳಲಾಗಿದೆ: ಅಲ್ತಾಫ್
ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದ ಪ್ರಕರಣಕ್ಕೆ ಟ್ವಿಸ್ಟ್
Team Udayavani, Apr 24, 2023, 4:39 PM IST
ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ. ಸದಾಶಿವ, ಪಕ್ಷದ ಪ್ರಮುಖರಾದ ನಜೀರ್ ಉಳ್ಳಾಲ್, ವಸಂತ ಪೂಜಾರಿ, ಅಶ್ರಫ್ ಸಾಜೀದ್, ಅಶ್ರಫ್ ಖಾಯಿ, ಯುವ ಜನತಾದಳದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಇದ್ದರು.
ಮಂಗಳೂರು(ಉಳ್ಳಾಲ)ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಸ್‌ಎಸ್‌ಎಫ್ ಮುಖಂಡ ಅಲ್ತಾಫ್ ಕುಂಪಲ ಪಕ್ಷದ ನಾಯಕರಿಗೆ ಮಾಹಿತಿ ನೀಡದೆ ನಾಮಪತ್ರ ಹಿಂಪಡೆದಿದ್ದರು.
ಜೆಡಿಎಸ್ ನಾಯಕರ ಪ್ರಕಾರ, ಅಲ್ತಾಫ್ ಅವರು ತಮ್ಮ ಮೊಬೈಲ್ ಫೋನನ್ನು ಸಹ ಸ್ವಿಚ್ ಆಫ್ ಮಾಡಿದ್ದರು, ಅವರ ನಿರ್ಧಾರ ಪಕ್ಷದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷದ ಬಿ ಫಾರಂ ಪಡೆಯಲು ಶಾಸಕ ಬಿ ಎಂ ಫಾರೂಕ್ ಅವರಿಗೆ ಅಲ್ತಾಫ್ ಮನವರಿಕೆ ಮಾಡಿದ್ದರು. ಆದರೆ, ನಾಮಪತ್ರ ಸಲ್ಲಿಸಿದ ಬಳಿಕ ಪಕ್ಷದ ಮುಖಂಡರ ಜತೆ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ.
ಎಪ್ರಿಲ್ 22 ರಂದು ಅವರು ನಾಮಪತ್ರ ಹಿಂತೆಗೆದುಕೊಳ್ಳುವ ಸೂಚನೆಯನ್ನು ಪೋಸ್ಟ್ ಮಾಡಲಾಗಿದ್ದು, ಸ್ಥಳೀಯರು ಈ ವಿಷಯದ ಬಗ್ಗೆ ಜೆಡಿಎಸ್ ಮುಖಂಡರಿಗೆ ತಿಳಿಸಿದ್ದಾರೆ. ಕುಂಪಲ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಅವರ ಫೋನ್ ಎರಡು ದಿನಗಳ ಕಾಲ ಸ್ವಿಚ್ ಆಫ್ ಆಗಿದೆ.ಈ ಹಿಂದೆ ಎಸ್‌ಎಸ್‌ಎಫ್‌ನಲ್ಲಿ ಸಕ್ರಿಯರಾಗಿದ್ದ ಕುಂಪಲ ಅವರು ಜೆಡಿಎಸ್‌ಗೆ ಸೇರಿ ಕಣದಿಂದ ಹಿಂದೆ ಸರಿದಿರುವುದು ಹಲವರನ್ನು ಅಚ್ಚರಿಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.