Congress ಬಂಡಾಯ: ಉಡುಪಿಯಲ್ಲಿ ನಾಮಪತ್ರ ಹಿಂಪಡೆದುಕೊಂಡ ಕೆ.ಕೃಷ್ಣಮೂರ್ತಿ ಆಚಾರ್ಯ
Team Udayavani, Apr 24, 2023, 5:14 PM IST
ಉಡುಪಿ: ಉಡುಪಿ ಜಿಲ್ಲೆೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 7 ನಾಮಪತ್ರಗಳನ್ನು ಸೋಮವಾರ ಹಿಂಪಡೆಯಲಾಗಿದೆ.
ವಿಧಾನಸಭೆ ಚುನಾವಣೆಗೆ ಉಡುಪಿ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ನಾಮಪತ್ರವನ್ನು ಹಿಂದಕ್ಕೆ ತೆಗದುಕೊಂಡಿದ್ದಾರೆ.
ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ನಾಮಪತ್ರ ಹಿಂದಕ್ಕೆ ತೆಗೆದುಕೊಳ್ಳಲು ಸೋಮವಾರ ( ಎ.24 ರಂದು) ಕೊನೆಯ ದಿನವಾಗಿತ್ತು. ಉಡುಪಿಯಿಂದ ಕಾಂಗ್ರೆಸ್ ನಿಂದ ಟಿಕೆಟ್ ಗೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್ ಕೈತಪ್ಪಿತ್ತು. ಇದರಿಂದ ಸಹಜವಾಗಿ ಅಸಮಾಧನಾಗೊಂಡಿದ್ದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದರು.
ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದ ಅವರು ತಮ್ಮ ಬೆಂಬಲಿಗರೊಂದಿಗೆ ನಾಮಪತ್ರವನ್ನು ಸಲ್ಲಿಸಿದ್ದರು. ಇದೀಗ ನಾಮಪತ್ರವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.
ಉಡುಪಿಯಿಂದ ಕಾಂಗ್ರೆಸ್ ಪಕ್ಷದಿಂದ ಪ್ರಸಾದ್ ರಾಜ್ ಕಾಂಚನ್ ಅವರು ಸ್ಪರ್ಧಿಸುತ್ತಿದ್ದಾರೆ.
ಉಡುಪಿ ಜಿಲ್ಲೆೆ: 7 ನಾಮಪತ್ರ ಹಿಂತೆಗೆತ: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 7 ನಾಮಪತ್ರಗಳನ್ನು ಸೋಮವಾರ ಹಿಂಪಡೆಯಲಾಗಿದೆ.
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜಯರಾಜ, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ದೀನ ಪ್ರಭಾಕರ ಸಾಲ್ಯಾನ್, ಕೆ.ಕೃಷ್ಣಮೂರ್ತಿ ಆಚಾರ್ಯ, ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಬ್ದುಲ್ ರಝಕ್ ಶಾಬನ್ ಅಹ್ಮದ್, ಅಬ್ದುಲ್ ರಹಿಮಾನ್, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕೃಷ್ಣ ಶೆಟ್ಟಿ, ಕೆ.ಹರೀಶ್ ಅಧಿಕಾರಿ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಯಾರೂ ನಾಮಪತ್ರ ಹಿಂಪಡೆಯಲಿಲ್ಲ. ನಾಮಪತ್ರ ಹಿಂಪಡೆಯಲು ಎ.24 ಕೊನೆಯ ದಿನವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.