Mangaluru: ಅತ್ಯಾಚಾರ ಪ್ರಕರಣ… ಆರೋಪಿ ಖುಲಾಸೆ
Team Udayavani, Apr 25, 2023, 6:40 AM IST
ಮಂಗಳೂರು: ಪುತ್ರಿಯರೇ ತಮ್ಮ ತಂದೆಯ ಮೇಲೆ ಆರೋಪ ಮಾಡಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಾಟಿಪಳ್ಳದ ನಿವಾಸಿ ಅಬ್ದುಲ್ ಹಕೀಂ(48) ಖುಲಾಸೆಗೊಂಡ ಆರೋಪಿ. ತಾವು ಅಪ್ರಾಪ್ತರಾಗಿದ್ದ ಸಂದರ್ಭದಲ್ಲಿ ತಮ್ಮ ಮೇಲೆ ತಂದೆ ಅತ್ಯಾಚಾರ ಎಸಗಿರುವ ಬಗ್ಗೆ ಇಬ್ಬರು ಮಕ್ಕಳು ಮಂಗಳೂರಿನ ಮಹಿಳಾ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದರು. ಈ ಪೈಕಿ ಕಿರಿಯ ಮಗಳ ಆರೋಪ ಪ್ರಕರಣದಲ್ಲಿ ನ್ಯಾಯಾಲಯ ಎರಡು ತಿಂಗಳ ಹಿಂದೆ ಆರೋಪಿಯನ್ನು ಖುಲಾಸೆಗೊಳಿಸಿತ್ತು. ಹಿರಿಯ ಮಗಳ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎರಡನೇ ಎಫ್ಟಿಎಸ್ಸಿ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಂ.ರಾಧಾಕೃಷ್ಣ ಅವರು ವಿಚಾರಣೆ ನಡೆಸಿ ಆರೋಪಿಯ ಮೇಲೆ ಆರೋಪ ಸಾಬೀತು ಮಾಡಲು ಯಾವುದೇ ಸರಿಯಾದ ಸಾಕ್ಷ್ಯಾಧಾರಗಳು ಇಲ್ಲ ಎಂದು ನಿರ್ಧರಿಸಿ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶ ನೀಡಿದ್ದಾರೆ.
ಆರೋಪಿಯ ಪರವಾಗಿ ಲೆಕ್ಸ್ ಜ್ಯೂರಿಸ್ ಲಾ ಚೇಂಬರ್ ಮಂಗಳೂರಿನ ನ್ಯಾಯವಾದಿಗಳಾದ ಆಸಿಫ್ ಬೈಕಾಡಿ, ಮಹಮ್ಮದ್ ಅಸ್ಗರ್ ಮುಡಿಪು, ರುಬಿಯ ಅಖ್ತರ್, ಶ್ರೀನಿಧಿ ಪ್ರಕಾಶ್, ನಿರೀಕ್ಷಾ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.