ಸಮಾಜ ಒಡೆಯುವುದು ಕಾಂಗ್ರೆಸ್‌ ರಾಜಕೀಯದ ಒಂದು ಭಾಗ: CT Ravi ವ್ಯಂಗ್ಯ


Team Udayavani, Apr 25, 2023, 6:20 AM IST

ಸಮಾಜ ಒಡೆಯುವುದು ಕಾಂಗ್ರೆಸ್‌ ರಾಜಕೀಯದ ಒಂದು ಭಾಗ: ಸಿ.ಟಿ.ರವಿ ವ್ಯಂಗ್ಯ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರು ಲಿಂಗಾಯತ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಒಂದು ಬುದ್ಧಿ ಇದೆ. ತನಗಲ್ಲದ್ದು ಬೇರೆಯವರಿಗೂ ಧಕ್ಕಬಾರದು ಎಂಬುದು. ಈ ಕಾರಣಕ್ಕೆ ಅವರು ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬಾರದು ಎಂದು ಲಿಂಗಾಯತ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಮತ್ತೊಂದು ರೀತಿಯಲ್ಲಿ ನೋಡಿದರೆ ವರುಣಾ ಕ್ಷೇತ್ರದಲ್ಲಿ ಲಿಂಗಾಯತರು ಒಗ್ಗಟ್ಟಾಗಿದ್ದಾರೆ ಎಂಬ ಆಕ್ರೋಶ ಇರಬಹುದು. ಇಲ್ಲವೇ ಎರಡು ಕ್ಷೇತ್ರಕ್ಕೆ ಟಿಕೆಟ್‌ ಕೊಡಲಿಲ್ಲ ಎಂಬ ಸಿಟ್ಟೂ ಇರಬಹುದು ಎಂದರು.

ಲಿಂಗಾಯತ ಡ್ಯಾಂ ಒಡೆದಿದ್ದೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿ ಕೆಗೆ ಪ್ರತಿ ಕ್ರಿ ಯಿಸಿದ ರವಿ, ಸಮಾಜ ಒಡೆಯುವುದು ಅವರ ರಾಜಕೀಯದ ಒಂದು ಭಾಗ. ಆದರೆ ನಾವು ಬಸವಣ್ಣ, ಕನಕದಾಸರು, ಕೆಂಪೇಗೌಡರು, ಸಂಗೊಳ್ಳಿ ರಾಯಣ್ಣ ಮುಂತಾದವರ ಮೂಲಕ ಡ್ಯಾಂನ ಎತ್ತರವನ್ನು ಹೆಚ್ಚಿಸಿ ಭದ್ರಗೊಳಿಸಿದ್ದೇವೆ. ಅದು ಚುನಾವಣೆ ಫ‌ಲಿತಾಂಶದಲ್ಲಿ ಗೊತ್ತಾಗುತ್ತದೆ. ಅವೆಲ್ಲವನ್ನೂ ಹಿಂದುತ್ವದ ಮೂಲಕ ಗಟ್ಟಿಗೊಳಿಸಿದ್ದೇವೆ ಎಂದು ಹೇಳಿದರು.

ಸಿ.ಟಿ.ರವಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂದು ರಾಜ್ಯದ ಉದ್ದಕ್ಕೂ ಕೂಗಿದಾಗ ನಾನೂ ಸಿಎಂ ಆಗಬೇಕು ಎಂದು ಕೇಳುತ್ತೇನೆ. ಅದುವರೆಗೆ ಕೇಳುವುದಿಲ್ಲ. ಸೋಮಣ್ಣ ರಾಜ್ಯ ನಾಯಕರು. ಬಾದಾಮಿ, ಕೋಲಾರಕ್ಕೆ ಅನ್ವಯವಾಗದ ಹೊಸಬ ಎಂಬ ಪ್ರಶ್ನೆ ವರುಣಾಕ್ಕೆ ಯಾಕೆ ಅನ್ವಯಿಸುತ್ತದೆ ಎಂದ ಅವರು, ಜನಾಭಿಪ್ರಾಯ ತಡೆಯಲು ಯಾರಿಂದಲೂ ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಭೋಜೇಗೌಡರು ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿದ್ದಾರೆ. ಇದು ಚುನಾವಣ ಪೂರ್ವ ಹೊಂದಾಣಿಕೆಯೋ, ರಾಜಕೀಯ ವ್ಯಭಿಚಾರವೋ ಹೇಳಬೇಕು. ಬಹಿರಂಗವಾಗಿ ಮತಯಾಚಿಸುತ್ತಿದ್ದಾರೆ. ಇದು ಹೊಂದಾಣಿಕೆಯಾದರೆ ವರಿಷ್ಠರು ಕ್ರಮ ಕೈಗೊಳ್ಳುವುದಿಲ್ಲ. ಇಲ್ಲವಾದರೆ ಶಿಸ್ತು ಕ್ರಮ ಕೈಗೊಳ್ಳುತ್ತಾರೆ. ಬಹಳ ಮಂದಿ ನನ್ನನ್ನು ಟಾರ್ಗೆಟ್‌ ಮಾಡಿಕೊಂಡಿದ್ದಾರೆ. ಆದರೆ ಜನ ನನ್ನ ಪರವಾಗಿದ್ದಾರೆ.
-ಸಿ.ಟಿ.ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.