40 ಪರ್ಸೆಂಟ್ ಸರಕಾರದ ಸ್ಥಾನವನ್ನು 40ಕ್ಕಿಳಿಸಿ: Rahul Gandhi
ರಾಮದುರ್ಗದಲ್ಲಿ ರೈತರೊಂದಿಗೆ ಸಂವಾದ; ಕಬ್ಬು ಬೆಳೆಗೆ ಸೂಕ್ತ ದರ
Team Udayavani, Apr 25, 2023, 6:55 AM IST
ಬೆಳಗಾವಿ/ರಾಮದುರ್ಗ: ಭ್ರಷ್ಟಾಚಾರದಲ್ಲಿ ಮುಳುಗಿರುವ 40 ಪರ್ಸೆಂಟ್ ಸರಕಾರವನ್ನು ಈ ಚುನಾವಣೆಯಲ್ಲಿ ಕೇವಲ 40 ಸ್ಥಾನಗಳಿಗೆ ಸೀಮಿತಗೊಳಿಸುವ ಮೂಲಕ ಬಿಜೆಪಿಗೆ ಬಿಸಿ ಮುಟ್ಟಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದರು.
ರಾಮದುರ್ಗದ ರಾಠಿ ರೆಸಾರ್ಟ್ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ಐದು ವರ್ಷಗಳಿಂದ 40 ಪರ್ಸೆಂಟ್ ಕಮಿಷನ್ ದಂಧೆಯಲ್ಲಿ ಮುಳುಗಿದೆ. ಹೀಗಾಗಿ ಕಾಂಗ್ರೆಸ್‌ಗೆ 150 ಸ್ಥಾನಗಳನ್ನು ಗೆಲ್ಲಿಸಿ ಕೊಟ್ಟು ಪೂರ್ಣ ಬಹುಮತದ ಸರಕಾರ ರಚಿಸಲು ಎಲ್ಲರೂ ಸಹಕರಿಸಬೇಕು ಎಂದರು.
ನರೇಂದ್ರ ಮೋದಿ ಸರಕಾರ ಇಬ್ಬರು ಕೋಟ್ಯ ಧೀಶರಿಗಷ್ಟೇ ರತ್ನಗಂಬಳಿ ಹಾಸಿ ದೇಶದ ಸಂಪತ್ತಿನ ಲಾಭ ಮಾಡಿಕೊಡುತ್ತಿದೆ. ಇದರಿಂದ ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೊಳಗಾಗಿದ್ದಾರೆ. ಬಹುತೇಕ ಸಂಪತ್ತು ಕೆಲವೇ ಕೆಲವು ಜನರ ಕೈ ಸೇರುತ್ತಿದೆ ಎಂದರು.
ಕೋಟ್ಯಧೀಶರ ಸಾಲ ಮನ್ನಾ
ಸರಕಾರ ಬಂಡವಾಳಶಾಹಿಗಳ ಸಾಲವನ್ನು ಮನ್ನಾ ಮಾಡುತ್ತದೆಯೇ ಹೊರತು ರೈತರ ಸಾಲವನ್ನಲ್ಲ. ಬಂಡವಾಳಶಾಹಿಗಳಿಗೆ ವ್ಯವಸ್ಥಿತವಾಗಿ ಸಾಲ ನೀಡಿ ಬಳಿಕ ಮನ್ನಾ ಮಾಡಲಾಗುತ್ತಿದೆ. 72 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ಆದರೆ ರೈತರ ಸಾಲ ಮನ್ನಾ ಮಾಡದೆ ರೈತರ ಹೊಟ್ಟೆ ಮೇಲೆ ಹೊಡೆಯುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಆರೋಪಿಸಿದರು.
ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ, ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ವಿಶ್ವನಾಥ ಚೌವ್ಹಾಣ್ ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ಸರಕಾರ ಬಂದರೆ ಜಿಎಸ್‌ಟಿ ವ್ಯವಸ್ಥೆ ಬದಲು
ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿ ಕಾರಕ್ಕೆ ಬಂದರೆ ಜಿಎಸ್‌ಟಿಯನ್ನು ಸಂಪೂರ್ಣವಾಗಿ ಬದಲಿಸಿ ಏಕರೂಪದ ತೆರಿಗೆ ಹಾಗೂ ಅತಿ ಕಡಿಮೆ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ಈಗಿರುವ ಐದು ರೀತಿಯ ತೆರಿಗೆಯಿಂದ ಜನರಿಗೆ ಅನ್ಯಾಯವಾಗುತ್ತಿದೆ. ಜಿಎಸ್‌ಟಿ ಎನ್ನುವುದು ಶ್ರೀಮಂತರನ್ನು ಮತ್ತಷ್ಟು ಶ್ರೀಮಂತರನ್ನಾಗಿ ಮಾಡುತ್ತಿದೆ ಎಂದು ರಾಹುಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.