ಕೊಲ್ಲೂರು ಕ್ಷೇತ್ರದಲ್ಲಿ ದಾಖಲೆಯ ಭಕ್ತಸಮೂಹ: ಮೇ 2, 3 ರಂದು ಭಕ್ತರಿಗೆ ದರ್ಶನ ಇಲ್ಲ

Team Udayavani, Apr 25, 2023, 7:32 AM IST

ಕೊಲ್ಲೂರು ಕ್ಷೇತ್ರದಲ್ಲಿ ದಾಖಲೆಯ ಭಕ್ತಸಮೂಹ: ಮೇ 2, 3 ರಂದು ಭಕ್ತರಿಗೆ ದರ್ಶನ ಇಲ್ಲ

ಕೊಲ್ಲೂರು: ಕಳೆದ ಒಂದು ತಿಂಗಳಿನಿಂದೀಚೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ರವಿವಾರ ರಾತ್ರಿ ದಾಖಲೆ ಸಂಖ್ಯೆಯ 15 ಸಾವಿರಕ್ಕೂ ಮಿಕ್ಕಿ ಭಕ್ತರು ಆಗಮಿಸಿದ್ದರು.

ಕೆಲವು ದಿನಗಳಿಂದ ಪ್ರತೀ ದಿನ ಸರಾಸರಿ 15 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸುತ್ತಾರೆ. ರವಿವಾರ ಮಧ್ಯಾಹ್ನದ ಅನ್ನಪ್ರಸಾದ ಸ್ವೀಕರಿಸಲು 9 ಸಾವಿರದಷ್ಟು ಭಕ್ತರು ಇದ್ದರೆ ರಾತ್ರಿ ವೇಳೆ 15 ಸಾವಿರ ಮಂದಿ ಕ್ಷೇತ್ರಕ್ಕೆ ಆಗಮಿಸಿದ್ದರು. ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ ಆಗಮಿಸಿದ ಭಕ್ತರಿಂದಾಗಿ ವಸತಿಗೃಹಗಳು ತುಂಬಿದ್ದರಿಂದ ದೇಗುಲದ ಹೊರಭಾಗ ಹಾಗೂ ಸನಿಹದ ಅರಣ್ಯದ ಅಂಚಿನಲ್ಲೂ ಜನರು ಆಶ್ರಯ ಪಡೆದಿರುವುದು ಕಂಡುಬಂತು.

21 ವರ್ಷಗಳ ಬಳಿಕ ಬ್ರಹ್ಮಕಲಶೋತ್ಸವ
ಎ. 30ರಿಂದ ಮೇ 11ರ ತನಕ ಕೊಲ್ಲೂರು ದೇಗುಲದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಸಕಲ ಸಿದ್ಧತೆ ಭರದಿಂದ ಸಾಗುತ್ತಿದೆ. 1972 ರಲ್ಲಿ ಬ್ರಹ್ಮಕಲಶೋತ್ಸವ ನಡೆದಿತ್ತು. ಅನಂತರ 2002ರಲ್ಲಿ ನಡೆದಿದೆ. ಇದೀಗ 21 ವರುಷಗಳ ಅನಂತರ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ.

ಎ. 30ರಿಂದ ಧಾರ್ಮಿಕ ವಿ ಧಿ ವಿಧಾನ ನಡೆಯಲಿವೆ. ಮೇ 1ರಂದು ಪೀಠ ಚಲನೆ, ಮೇ 4ರಂದು ಸಹಸ್ರ ಕಲಶ ಸ್ಥಾಪನೆ, ಮೇ 5ರಂದು ಸಹಸ್ರ ಕಲಶದೊಂದಿಗೆ ಬ್ರಹ್ಮಕಲಶಾಭಿಷೇಕ, ಮೇ 9ರಂದು ಬ್ರಹ್ಮರಥೋತ್ಸವ ಹಾಗೂ ಮೇ 11ರಂದು ಪೂರ್ಣ ಕುಂಭಾಭಿಷೇಕ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹಾಗೂ ಕಾರ್ಯನಿರ್ವಹಣಾ ಕಾರಿ ಎಸ್‌.ಸಿ. ಕೊಟಾರಗಸ್ತಿ ತಿಳಿಸಿದ್ದಾರೆ.

ಮೇ 2, 3: ದರ್ಶನ ಇಲ್ಲ
ಬ್ರಹ್ಮಕಲಶೋತ್ಸವದ ಅಂಗವಾಗಿ ಪೀಠ ಚಲನೆ ಪ್ರಕ್ರಿಯೆ ನಡೆಯುವುದರಿಂದ ಮೇ 2 ಮತ್ತು 3ರಂದು ಭಕ್ತರಿಗೆ ಶ್ರೀ ದೇವಿಯ ದರ್ಶನಕ್ಕೆ ಅವಕಾಶವಿಲ್ಲ ಎಂದು ಕ್ಷೇತ್ರದ ಆಡಳಿತ ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.