ಪ್ರಚಾರದ ಅಖಾಡಕ್ಕಿಂದು ಘಟಾನುಘಟಿಗಳ ರಂಗಪ್ರವೇಶ
Team Udayavani, Apr 25, 2023, 6:10 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ವಾಪಸ್ ಸರ್ಕಸ್ ಮುಗಿದು ಅಖಾಡ ಸ್ಪಷ್ಟಗೊಂಡ ಬೆನ್ನಲ್ಲೇ ಘಟಾನುಘಟಿ ನಾಯಕರು ಪ್ರಚಾರದ “ರಂಗಪ್ರವೇಶ’ಕ್ಕೆ ಸಜ್ಜಾಗಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರದ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕಾಂಗ್ರೆಸ್‌ನ ಪ್ರಿಯಾಂಕ ವಾದ್ರಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸಹಿತ ನಾಯಕರು ಪ್ರಚಾರಕ್ಕೆ ಧುಮಕಲಿದ್ದಾರೆ.
ಪ್ರಿಯಾಂಕ ವಾದ್ರಾ ಅವರು ಮಂಗಳವಾರ ಟಿ.ನರಸೀಪುರದ ಹೆಳವರ ಹುಂಡಿಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಅನಂತರ ಹನೂರಿನಲ್ಲಿ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.30ಕ್ಕೆ ಕೆ. ಆರ್.ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ಬುಧವಾರ ಮಂಡ್ಯದಲ್ಲಿ ಮೊದಲ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ ವಿಜಯಪುರದ ಇಂಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಮಿತ್ ಶಾ ಅವರು ಮಂಗಳವಾರ ಬಿಜಾಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿಯಲ್ಲಿ ಪ್ರಚಾರ ಸಭೆ ಹಾಗೂ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ.
ಸಿದ್ದರಾಮಯ್ಯ ಅವರು, ಸವದತ್ತಿ, ಕಾಗವಾಡ, ಕುಡಚಿ, ರಾಯಭಾಗ, ನಿಪ್ಪಾಣಿಯಲ್ಲಿ ಪ್ರಚಾರ ಮಾಡಲಿದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪಿರಿಯಾಪಟ್ಟಣ ಹಾಗೂ ಕೆ.ಆರ್. ನಗರದಲ್ಲಿ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿಯವರ ಮೈಸೂರಿನ ಚಾಮರಾಜ, ವರುಣಾ ಸೇರಿ ಹಲವು ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.