ಬಿಬಿಎಂಪಿ ಅಧಿಕಾರಿ ಬಳಿ ಅಪಾರ ಸಂಪತ್ತು!
Team Udayavani, Apr 25, 2023, 3:45 PM IST
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಬೆನ್ನಲ್ಲೇ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಯಲಹಂಕದಲ್ಲಿರುವ ಬಿಬಿಎಂಪಿ ನಗರ ಯೋಜನಾ ವಿಭಾಗದ ಯಲಹಂಕದ ವಲಯದ ಸಹಾಯಕ ನಿರ್ದೇಶಕ ಕೆ.ಐ.ಗಂಗಾಧರಯ್ಯಗೆ ಸಂಬಂಧಿಸಿದ ಯಲಹಂಕ, ಮಹಾಲಕ್ಷ್ಮೀ ಲೇಔಟ್ ಸೇರಿ 7 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಗಂಗಾಧರಯ್ಯರ ಮನೆಯಲ್ಲಿ ಬೆಳ್ಳಿ, ಬಂಗಾರ, ಸೀರೆ, ಆಸ್ತಿ ಪತ್ರಗಳು, ವಿದೇಶಿ ಕರೆನ್ಸಿಗಳು ಪತ್ತೆಯಾಗಿವೆ.
ಅಂದಾಜು 2 ಕೋಟಿಗೂ ಅಧಿಕ ಮೌಲ್ಯದ ಸಂಪತ್ತು ಪತ್ತೆಯಾಗಿದೆ ಎಂದು ಹೇಳಲಾಗಿದ್ದು, ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ. ಸದ್ಯ ಹಣದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಯಲಹಂಕ, ಜೆ.ಸಿ.ನಗರ, ಹೆಬ್ಟಾಳದಲ್ಲಿನ ಫ್ಲ್ಯಾಟ್‌ಗಳ ಸಹಿತ 12 ಮನೆಗಳು, ನೆಲಮಂಗಲದಲ್ಲಿ 1.5 ಕೋಟಿ ರೂ. ಮೌಲ್ಯದ 5 ಎಕರೆ ಜಮೀನು, ಮಲ್ಲೇಶ್ವರದಲ್ಲಿ 3.65 ಕೋಟಿ ರೂ. ಮೌಲ್ಯದ ನಿವೇಶನ, 1 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣಗಳು ಹಾಗೂ 1.40 ಕೋಟಿ ರೂ. ನಗದು ಪತ್ತೆಯಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.
ಇನ್ನು ಗಂಗಾಧರಯ್ಯ ಚುನಾವಣೆ ಕಾರ್ಯಕ್ಕೂ ಸಹ ನೇಮಕವಾಗಿದ್ದು, ಅವರ ಕಾರಿನ ಮೇಲೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಸ್ಟಿಕ್ಕರ್ ಸಹ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಗಂಗಾಧರಯ್ಯ ಮನೆಯಲ್ಲಿ ಸಿಕ್ಕಿರುವ ನಗದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.