ರಾಷ್ಟ್ರೀಯ ಪಕ್ಷಗಳನ್ನು ನಂಬಬೇಡಿ: H.D ದೇವೇಗೌಡರ ಮನವಿ
Team Udayavani, Apr 26, 2023, 7:39 AM IST
ಮೈಸೂರು: ರಾಜ್ಯದ ನೀರಾವರಿ ಯೋಜನೆಗಾಗಿ ಕೈ ನಡುಗುತ್ತಿದ್ದರೂ ರಾಜ್ಯಸಭೆಯಲ್ಲಿ ಹೋರಾಟ ಮಾಡಿದ ನನ್ನ ಕೈಯನ್ನು ಹಿಡಿದ ಪ್ರಧಾನಮಂತ್ರಿ ತಮಿಳುನಾಡಿನಲ್ಲಿ ಅತೀ ಹೆಚ್ಚು ಸಂಸದರು ಹೊಂದಿರುವುದರಿಂದ ನಾನು ನಿಮಗೆ ಸಹಾಯ ಮಾಡಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಿ ಎಂದು ತಿಳಿಸಿದ್ದರೆಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ನೆನಪುಗಳನ್ನು ಮೆಲುಕು ಹಾಕಿದರು.
ಕೆ.ಆರ್. ನಗರ ವಿಧಾನಸಭಾ ವ್ಯಾಪ್ತಿಯ ಸಾಲಿಗ್ರಾಮ ತಾಲೂಕಿನ ಮಿಲೇì, ಸಾಲಿಗ್ರಾಮ, ಹೊಸೂರು ಗ್ರಾಮಗಳಲ್ಲಿ ಚುನಾವಣ ಪ್ರಚಾರ ನಡೆಸಿ ಮಾತನಾಡಿದರು. ರಾಷ್ಟ್ರೀಯ ಪಕ್ಷಗಳು ಎಂದಿಗೂ ರಾಜ್ಯಕ್ಕೆ ಅನುಕೂಲ ಮಾಡದೇ ಮಲತಾಯಿ ಧೋರಣೆ ಅನುಸರಿಸಿದವು. ಎಂದಿಗೂ ಅವನ್ನು ನಂಬಬೇಡಿ ಎಂದರು.
ರಾಜ್ಯದಲ್ಲಿ ಮಹಿಳಾ ಮೀಸಲಾತಿ, ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಕೊಟ್ಟಿದ್ದರಲ್ಲಿ ನಮ್ಮ ಕೊಡುಗೆ ಇದೆ. ಈ ರಾಜ್ಯದಲ್ಲಿ ಪರಿಶಿಷ್ಟ ಪಂಗಡ, ಮುಸ್ಲಿಂ ಸಮುದಾಯ, ಮಹಿಳೆಯರು ಸ್ಥಳೀಯ ಸಂಸ್ಥೆಯಲ್ಲಿ ಮೀಸಲಾತಿ ಪಡೆದಿದ್ದರೆ ಅದಕ್ಕೆ ನಾನು ಕಾರಣ ಎಂಬುದನ್ನು ಮರೆಯದಿರಿ ಎಂದು ಮನವಿ ಮಾಡಿದರು.
ಕ್ಷೇತ್ರದ ಬಹುತೇಕ ಬರಡು ಭೂಮಿಗೆ ನೀರೊದಗಿಸುವ ಹಾರಂಗಿ ನಾಲೆಯನ್ನು ನಿರ್ಮಾಣ ಮಾಡಲು ಕೇಂದ್ರದ ಯಾವುದೇ ಅನುದಾನವಿಲ್ಲದೇ ಕರ್ನಾಟಕದ ರೈತರ ಸರ್ಕಾರದ ಹಣದಿಂದಲೇ ನಾನು ಮತ್ತು ಪಕ್ಷ ಮಾಡಿದ್ದು ಎಂಬುದನ್ನು ಈ ಭಾಗದ ಜನತೆ ಅರಿತುಕೊಳ್ಳಬೇಕಾಗಿದೆ ಎಂದು ಇದೇ ಸಂದರ್ಭದಲ್ಲಿ ದೇವೇಗೌಡರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.