ಆರು ಕಡೆ ಮೋದಿ ಶೋ: 3 ದಿನ ಮೋದಿ, ನಡ್ಡಾ, ಶಾ ರಾಜ್ಯಕ್ಕೆ ಲಗ್ಗೆ
Team Udayavani, Apr 26, 2023, 8:27 AM IST
ಬೆಂಗಳೂರು: ಚುನಾವಣೆ ಪ್ರಚಾರ ಈಗಾಗಲೇ ಬಿರುಸು ಪಡೆದುಕೊಂಡಿದ್ದು, ಈ ನಡುವೆ ಬಿಜೆಪಿ ತನ್ನ ಪ್ರಚಾರ ಅಭಿಯಾನವನ್ನು ಇನ್ನಷ್ಟು ಆಕ್ರಮಣಕಾರಿಯಾಗಿಸಲಿದೆ.
ರಾಜ್ಯದಲ್ಲಿ ಮೇ 7ರ ತನಕ ಪ್ರಧಾನಿ ನರೇಂದ್ರ ಮೋದಿ ದಿನಕ್ಕೆ ನಾಲ್ಕು ಕಾರ್ಯಕ್ರಮಗಳಂತೆ ಆರು ದಿನ ಪ್ರಚಾರ ನಡೆಸಲಿದ್ದಾರೆ. ಅಧಿಕಾರ ಉಳಿಸಿ ಕೊಳ್ಳಲೇಬೇಕು ಎಂದು ಹಠ ತೊಟ್ಟಿರುವ ಬಿಜೆಪಿ ವರಿಷ್ಠರು ತೀವ್ರಗತಿಯ ಪ್ರಚಾರಕ್ಕೆ ಮುಂದಾಗಿದ್ದಾರೆ. ಮೂರು ದಿನಗಳ ಕಾಲ ರಾಜ್ಯದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಏಕಕಾಲದಲ್ಲಿ ಪ್ರಚಾರ ನಡೆಸುವುದು ಕಣದಲ್ಲಿ ಇನ್ನಷ್ಟು ಕಾವೇರಿಸಲಿದೆ.
ಪ್ರಧಾನಿಯ ಮೊದಲ ಕಾರ್ಯಕ್ರಮ ಹುಮನಾಬಾದ್‌ನಲ್ಲಿ ಎ. 29ರಂದು ನಡೆಯಲಿದೆ. ಸದ್ಯದ ವೇಳಾಪಟ್ಟಿ ಪ್ರಕಾರ ಅಂದು ಬೆಳಗ್ಗೆ 11ಕ್ಕೆ ಪ್ರಧಾನಿ ಮೋದಿ ಬಹಿರಂಗ ಸಭೆಯಲ್ಲಿ ಭಾಗ ವಹಿಸಲಿದ್ದಾರೆ. ಆ ಬಳಿಕ ವಿಜಯಪುರ ಹಾಗೂ ಕುಡಚಿಯಲ್ಲಿ ಆಯೋಜಿಸಿರುವ ಸಭೆಗಳಲ್ಲಿ ಪಾಲ್ಗೊಳ್ಳುವರು. ಸಂಜೆ ಬೆಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಡೆಸುವರು. ಅಂದು ಬೆಂಗ ಳೂರಿನಲ್ಲಿ ವಾಸ್ತವ್ಯವಿದ್ದು, ರಾಜ್ಯ ಮುಖಂಡರ ಜತೆ ಚುನಾವಣ ತಂತ್ರಗಾರಿಕೆ ಬಗ್ಗೆ ಚರ್ಚಿಸುವರು.
ಎ. 30ರಂದು ಕೋಲಾರದಲ್ಲಿ ಬಹಿರಂಗ ಸಭೆಯ ಬಳಿಕ ಚನ್ನಪಟ್ಟಣ, ಬೇಲೂರಿನ ಸಭೆಯಲ್ಲಿ ಪಾಲ್ಗೊಳ್ಳುವರು. ಬಳಿಕ ಮೈಸೂರಿ ನಲ್ಲಿ ರೋಡ್ ಶೋ ನಡೆಸಿ ಹೊಸದಿಲ್ಲಿಗೆ ವಾಪಾಸ್ ಆಗಲಿದ್ದಾರೆ.
ಈ 2 ದಿನಗಳಲ್ಲಿ ಮೋದಿ ದಿನಕ್ಕೆ ತಲಾ 3 ಸಭೆ, ಒಂದು ರೋಡ್ ಶೋ ನಡೆಸಲಿದ್ದಾರೆ.
ಮತ್ತೂಂದೆಡೆ ಎ. 29ರಂದು ಅಮಿತ್ ಶಾ ರಾಣೆಬೆನ್ನೂರು, ಬ್ಯಾಡಗಿ, ಹಳಿಯಾಳ ಹಾಗೂ ಶಿವಮೊಗ್ಗ; ಜೆ.ಪಿ. ನಡ್ಡಾ ಅವರು ಮುದ್ದೇಬಿಹಾಳ, ಕಲಘಟಗಿ, ರೋಣ, ಹರಪನಹಳ್ಳಿಗಳಲ್ಲಿ ಬಹಿರಂಗ ಸಭೆ, ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿ ಕಾರ್ಯಕ್ರಮ
ಎ. 29: ಹುಮನಾಬಾದ್, ವಿಜಯಪುರ, ಕುಡಚಿ, ಬೆಂಗಳೂರು ಉತ್ತರ
ಎ. 30: ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರು
ಮೇ 2: ಚಿತ್ರದುರ್ಗ, ವಿಜಯನಗರ, ಸಿಂಧನೂರು, ಕಲಬುರಗಿ
ಮೇ 3: ಮೂಲ್ಕಿ-ಮೂಡುಬಿದಿರೆ ಕ್ಷೇತ್ರ ವ್ಯಾಪ್ತಿಯ ಕೊಲಾ°ಡು, ಕಾರವಾರ, ಕಿತ್ತೂರು
ಮೇ 6: ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ
ಮೇ 7: ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಕೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.