ಬಿಜೆಪಿ ಗೆದ್ದರೆ ವಾರ್ಡ್‌ಗಳ ಅಭಿವೃದ್ಧಿಗೆ ಒತ್ತು
Team Udayavani, Apr 26, 2023, 2:58 PM IST
ಚಾಮರಾಜನಗರ: ಪಟ್ಟಣದ 31 ವಾರ್ಡ್‌ಗಳ ಅಭಿವೃದ್ಧಿಗೆ ವಿಶೇಷ ಯೋಜನೆ ತಂದು ಮತ್ತೂಂದು ಗೋವಿಂದರಾಜನಗರ ಮಾಡಲು ಮುಂದಾಗಿರುವ ಬಿಜೆಪಿ ಅಭ್ಯರ್ಥಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸೋಣ ಎಂದು ನಗರಸಭಾ ಅಧ್ಯಕ್ಷೆ ಸಿ.ಎಂ.ಆಶಾ ನಟರಾಜು ಮನವಿ ಮಾಡಿದರು.
ನಗರದ 16, 17,18 ಹಾಗೂ 19ನೇ ವಾಡ್ ìಗಳಲ್ಲಿ ಚುನಾವಣಾ ಪ್ರಚಾರಕ್ಕೆ ಸಂತೇಮರಹಳ್ಳಿ ವೃತ್ತದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 15 ವರ್ಷಗಳಿಂದ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಶಾಸಕರು ಪಟ್ಟಣದ ಅಭಿವೃದ್ಧಿ ನಿರ್ಲಕ್ಷ್ಯ ವಹಿಸಿದ್ದಾರೆ. 15 ವರ್ಷಗಳಲ್ಲಿ ಅಧಿಕಾರ ಕೊಟ್ಟಿದ್ದೀರಿ. ಬಿಜೆಪಿಗೆ ಒಂದು ಬಾರಿ ಅವಕಾಶ ಕೊಡಿ. ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಬಗ್ಗೆ ಹೆಚ್ಚು ಕಾಳಜಿ ಹೊಂದಿರುವ ಸೋಮಣ್ಣ ಅವರು, ಕ್ಷೇತ್ರವನ್ನು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುತ್ತಾರೆ ಎಂದು ಮನವಿ ಮಾಡಿದರು.
ಬಿಜೆಪಿ ದಲಿತರ ಪರ: ಮಧ್ಯಪ್ರದೇಶ ಸಂಸದ, ಮಾಜಿ ಸಚಿವ ಬಿಜೆಪಿ ಎಸ್‌ಟಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಲಾಲ್‌ಸಿಂಗ್ ಆರ್ಯ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿ ದಲಿತರ ಪರವಾಗಿದ್ದು, ಅಭಿವೃದ್ಧಿಯ ಬಗ್ಗೆ ಹೆಚ್ಚು ಒತ್ತು ನೀಡುತ್ತಿದೆ. ಬಿಜೆಪಿ ಸರ್ಕಾರ ಬಂದರೆ ಸಂವಿಧಾನ ಬದಲಾಯಿಸುತ್ತೇವೆ ಎಂಬ ಸುಳ್ಳು ಹೇಳಿಕೆ ನೀಡುತ್ತಿದೆ. ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಡಬಲ್ ಎಂಜಿನ್ ಸರ್ಕಾರ ದಲಿತರ ಪರ ಯೋಜನೆಗಳನ್ನು ಜಾರಿ ಮಾಡಿ, ಅಭಿವೃದ್ಧಿಯತ್ತ ಸಾಗುತ್ತಿದೆ. ಮತ್ತೆ ಬಿಜೆಪಿ ಸರ್ಕಾರವನ್ನು ರಚನೆ ಮಾಡಲು ಮತ ನೀಡಬೇಕು ಎಂದು ಮನವಿ ಮಾಡಿದರು. ಬಳಿಕ ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಮನೆ ಮನೆಗೆ ಕರಪತ್ರಗಳನ್ನು ಹಂಚುವ ಮೂಲಕ ಸೋಮಣ್ಣ ಪರ ಮತಯಾಚನೆ ಮಾಡಿದರು.
ಮುಖಂಡರಾದ ಅಮ್ಮನಪುರ ಮಲ್ಲೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್, ಕಾಡಾ ಅಧ್ಯಕ್ಷ ನಿಜಗುಣರಾಜು, ಕೂಡ್ಲೂರು ಹನುಮಂತಶೆಟ್ಟಿ, ನಗರಸಭೆ ಮಾಜಿ ಅಧ್ಯಕ್ಷರಾದ ಮಹದೇವನಾಯಕ, ಸುರೇಶ್‌ನಾಯಕ, ಸದಸ್ಯರಾದ ಶಿವರಾಜು, ಮಂಜುನಾಥ್, ಗಾಯತ್ರಿ ಚಂದ್ರಶೇಖರ್, ಮಮತಾ ಬಾಲಸುಬ್ರಹ್ಮಣ್ಯ, ಕುಮುದಾ, ಶಿವಣ್ಣ, ನಟರಾಜು, ಬಸವರಾಜು, ಕೂಸಣ್ಣ, ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.