ಉಡುಪಿ- ಯಶ್‌ಪಾಲ್ ಸುವರ್ಣ ಪರ ಭರ್ಜರಿ ರೋಡ್‌ಶೋ; ಕೇಂದ್ರ ಸಚಿವ ವರ್ಮ ಭಾಗಿ
ಪಕ್ಷಕ್ಕಾಗಿ ಸಮರ್ಪಣ ಭಾವದಿಂದ ಕೆಲಸ ಮಾಡುವ ಕಾರ್ಯಕರ್ತರು ಬಿಜೆಪಿಯಲ್ಲಿದ್ದಾರೆ.
Team Udayavani, Apr 26, 2023, 4:45 PM IST
ಉಡುಪಿ: ಭ್ರಷ್ಟಾಚಾರದಿಂದ ನಲುಗಿ ಅಭಿವೃದ್ಧಿ ಮರೀಚಿಕೆಯಾಗಿದ್ದ ಭಾರತದಲ್ಲಿ ಜನಪರ ಆಡಳಿತ ನೀಡುವ ಮೂಲಕ ಬಿಜೆಪಿ ಜನರ ಪಕ್ಷವಾಗಿ ಗುರುತಿಸಿಕೊಂಡಿದೆ. ಕೇಂದ್ರ, ರಾಜ್ಯದಲ್ಲಿ ಒಂದೆ ಪಕ್ಷದ ಆಡಳಿತದಿಂದ ಪ್ರಸ್ತುತ ಕರ್ನಾಟಕದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿವೆ. ಉಡುಪಿ ಕ್ಷೇತ್ರದಲ್ಲಿ ಬಿಜೆಪಿಯನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು, ವಿಕಾಸ ಮತ್ತು ಅಭಿವೃದಿಟಛಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಸಹಕಾರ ಇಲಾಖೆ ರಾಜ್ಯ ಸಚಿವ ಬಿ. ಎಲ್. ವರ್ಮ ಹೇಳಿದರು.
ಸೋಮವಾರ ಸಂತೆಕಟ್ಟೆ ಜಂಕ್ಷನ್‌ನಲ್ಲಿ ಉಡುಪಿ ಬಿಜೆಪಿ ಅಭ್ಯರ್ಥಿಯ ಯಶ್‌ಪಾಲ್ ಸುವರ್ಣ ಅವರ ಪರವಾಗಿ ಬಿಜೆಪಿ ವತಿಯಿಂದ ಜರಗಿದ ರೋಡ್‌ಶೋನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಆಡಳಿತ ಚುಕ್ಕಾಣಿ ಹಿಡಿದ ಅನಂತರ ದೇಶದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿತು. 2014ರ ಹಿಂದಿನ ಭಾರತಕ್ಕೂ ಈಗಿನ ಭಾರತಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಕಳೆದ 60 ವರ್ಷದಲ್ಲಿ ಆಗದ ಅಭಿವೃದ್ಧಿ 8 ವರ್ಷದಲ್ಲಿ ಮೋದಿ ನಾಯಕತ್ವದಲ್ಲಿ ಮಾಡಿ ತೋರಿಸಿದ್ದೇವೆ. ರಾಜ್ಯದಲ್ಲಿ ಹಿಂದೆಂದೂ ಆಗಿರದ ಜನಪರ ಕಾರ್ಯಗಳು ಬಿಜೆಪಿ ಸರಕಾರದಲ್ಲಿ ನಡೆದಿದೆ ಎಂದರು.
ಪಿಎಂ ವಸತಿ ಯೋಜನೆ, ಜನ್‌ಧನ್, ಆಯುಷ್ಮಾನ್ ಭಾರತ್, ಉಚಿತ ಪಡಿತರ ಮಹತ್ವದ ಯೋಜನೆಗಳನ್ನು ಬಡವರಿಗಾಗಿ ಜಾರಿಗೊಳಿಸಲಾಗಿದೆ.ದೇಶದ ಅರ್ಥ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ 10ನೇ ಸ್ಥಾನದಲ್ಲಿತ್ತು. ಪ್ರಧಾನಿ ಅವರ ದೂರದೃಷ್ಟಿ ಕಾರ್ಯ ಚಟುವಟಿಕೆಯಿಂದ ಪ್ರಸ್ತುತ ಜಾಗತಿಕ ಮಟ್ಟದಲ್ಲಿ 5ನೇ ಸ್ಥಾನದಲ್ಲಿದೆ ಎಂದರು. ಪಕ್ಷಕ್ಕಾಗಿ ಸಮರ್ಪಣ ಭಾವದಿಂದ ಕೆಲಸ ಮಾಡುವ ಕಾರ್ಯಕರ್ತರು ಬಿಜೆಪಿಯಲ್ಲಿದ್ದಾರೆ.
ಶಾಸಕ ರಘುಪತಿ ಭಟ್ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರೂ ಏನನ್ನೂ ಯೋಚಿಸದೆ ಪಕ್ಷಕ್ಕಾಗಿ ತ್ಯಾಗ ಮನೋಭಾವನೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಪಕ್ಷ ನೀಡಲಿದೆ. ಉಡುಪಿ ಮತ್ತು ದೇಶದ ಅಭಿವೃದ್ಧಿಗೆ ಬಿಜೆಪಿಯನ್ನು ಮತದಾರರು ಗೆಲ್ಲಿಸಲಿದ್ದಾರೆ ಎಂದು ಹೇಳಿದರು.
ಭರ್ಜರಿ ರೋಡ್‌ಶೋ
ಸಂತೆಕಟ್ಟೆ ಆಶೀರ್ವಾದ ಚಿತ್ರಮಂದಿರ ಮುಂಭಾಗದಿಂದ ಸಂತೆಕಟ್ಟೆ ಜಂಕ್ಷನ್‌ವರೆಗೆ ರೋಡ್‌ಶೋ ನಡೆಸಲಾಯಿತು. ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡು ಬಿಜೆಪಿ, ಮೋದಿ ಪರ ಘೋಷಣೆ ಕೂಗಿದರು. ಇದೇ ವೇಳೆ ಕಾಡೆಕಾರು ಗ್ರಾ.ಪಂ. ಸದಸ್ಯ, ಕಾಂಗ್ರೆಸ್ ಕಾರ್ಯಕರ್ತ ಸತೀಶ್ ಕೋಟ್ಯಾನ್ ಅವರು ಕೇಂದ್ರ ಸಚಿವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ಮುಂಬಯಿ ಉತ್ತರ ಕ್ಷೇತ್ರದ ಸಂಸದ ಗೋಪಾಲ ಶೆಟ್ಟಿ, ಪಕ್ಷದ ಮುಖಂಡರಾದ ಮಟ್ಟಾರು ರತ್ನಾಕರ್ ಹೆಗ್ಡೆ, ಮಹೇಶ್ ಠಾಕೂರ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ವಿಜಯ ಕೊಡವೂರು, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜ್ಯೋತಿ ಶೇಟ್, ವೀಣಾ ನಾಯ್ಕ ಉಪಸ್ಥಿತರಿದ್ದರು.
ಉಡುಪಿಯಲ್ಲಿ ಬಿಜೆಪಿ ಆಡಳಿತ ಸುವರ್ಣಯುಗ ಕಂಡಿದೆ. ಹಿಂದಿನ ಅಭಿವೃದಿಟಛಿ ಕೆಲಸಗಳು ನಡೆದಂತೆ ಮುಂದೆಯೂ ನಡೆಯಲು ಯಶ್‌ಪಾಲ್ ಸುವರ್ಣ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು.
-ಕೆ. ರಘುಪತಿ ಭಟ್, ಶಾಸಕ, ಉಡುಪಿ
ದೇಶವು ಪ್ರಧಾನಿ ನರೇಂದ್ರ ಮೋದಿ ಅವರಂಥ ಸಮರ್ಥ ನಾಯಕತ್ವದಲ್ಲಿ ಮುನ್ನಡೆಯುತ್ತಿದೆ. ಅವರ ಕೈಯನ್ನು ಮತ್ತಷ್ಟು ಬಲಪಡಿಸಬೇಕು. ಇದಕ್ಕೆ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಬೇಕು. ಉಡುಪಿಯ ಅಭಿವೃದಿಟಛಿ ಮತ್ತು ಜನಪರ ಯೋಜನೆಗಳನ್ನು ಸಾಕಾರಗೊಳಿಸಲು ಜನರು ಬಿಜೆಪಿಯನ್ನು ಬೆಂಬಲಿಸಬೇಕು.
ಯಶ್‌ಪಾಲ್ ಎ. ಸುವರ್ಣ, ಉಡುಪಿ ಬಿಜೆಪಿ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.