May 10: ಮತದಾನದ ದಿನ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ
Team Udayavani, Apr 26, 2023, 4:48 PM IST
ಸಾಗರ: ಮೇ 10 ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಯ ನಿಮಿತ್ತ ಮತದಾರರು ತಪ್ಪದೇ ಮತ ಚಲಾಯಿಸುವ ಉದ್ದೇಶದಿಂದ ಸರ್ಕಾರ ರಜಾ ದಿನವಾಗಿ ಘೋಷಣೆ ಮಾಡಿದೆ. ಆದರೆ ಕೆಲವು ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದನ್ನು ಬಿಟ್ಟು ರಜಾ ಮಜಾ ಸವಿಯಲು ಪ್ರವಾಸಿ ತಾಣಗಳಿಗೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಮತದಾನದ ದಿನದಂದು ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ತಿಳಿಸಿದ್ದಾರೆ.
ಈ ಹಿಂದೆ ಮತದಾನ ದಿನಗಳಂದು ಜೋಗ ನಿರ್ವಹಣಾ ಪ್ರಾಧಿಕಾರದಲ್ಲಿ ದಾಖಲಾದ ಪ್ರವಾಸಿಗರ ಸಂಖ್ಯೆಯ ಅಂಕಿ ಅಂಶಗಳನ್ನು ಪರಿಶೀಲನೆ ಮಾಡುವುದರ ಜೊತೆಗೆ, ಮಾಧ್ಯಮಗಳು ಪ್ರವಾಸಿಗರ ಆಗಮನದ ವಿಷಯವನ್ನು ಗಮನ ಸೆಳೆದಿರುವ ಕಾರಣ ಈ ನಿರ್ಬಂಧ ಕ್ರಮವನ್ನು ಜಾರಿ ಮಾಡಲಾಗಿದೆ. ಚುನಾವಣೆ ದಿನದಂದು ನಿರ್ಬಂಧ ಹೇರದೇ ಇದ್ದ ಪಕ್ಷದಲ್ಲಿ ಬರುವ ಪ್ರವಾಸಿಗರಿಗಾಗಿ ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿ ಕರ್ತವ್ಯಪಾಲನೆ ಮಾಡಬೇಕಾಗುತ್ತದೆ. ಇವರಿಗೆ ಪೂರಕವಾಗಿ ಸ್ಥಳೀಯವಾಗಿರುವ ವ್ಯಾಪಾರಸ್ಥರು, ಛಾಯಾಚಿತ್ರಗಾರರು, ಸಣ್ಣ ಪುಟ್ಟ ಬೀದಿ ಬದಿ ವ್ಯಾಪಾರಿಗಳು, ಗೈಡ್‌ಗಳು, ಆಟೊ ಚಾಲಕರು, ಟ್ಯಾಕ್ಸಿ ಚಾಲಕರು, ಭದ್ರತಾ ಸಿಬ್ಬಂದಿ ಸೇರಿದಂತೆ ಅನೇಕರು ಕೊಂಡಿಯ ರೀತಿಯಲ್ಲಿ ಜೋಡಣೆಯಾಗಿ ಮತದಾನದಿಂದ ದೊಡ್ಡ ಪ್ರಮಾಣದಲ್ಲಿ ಇವರೆಲ್ಲಾ ಹೊರಗುಳಿಯುವ ಸಾಧ್ಯತೆಯಿದೆ. ಹೀಗಾಗಿ ಪ್ರಮುಖವಾಗಿ ಜಲಪಾತ ವೀಕ್ಷಣೆಗೆ ನಿರ್ಬಂಧವನ್ನು ಹೇರಲಾಗಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: 40% Commission; ಲಕ್ಷ್ಮಣ ಸವದಿ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು
ಜೋಗ ನಿರ್ವಹಣಾ ಪ್ರಾಧಿಕಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಪರ ಊರಿನಲ್ಲಿ ಮತ ಇದ್ದಲ್ಲಿ ಕಡ್ಡಾಯವಾಗಿ ಮತದಾನ ಮಾಡಿ ಬರಲು ತಿಳಿಸಲಾಗಿದೆ. ಪ್ರತಿಯೊಬ್ಬರು ತಪ್ಪದೇ ಮತದಾನದಲ್ಲಿ ಭಾಗವಹಿಸಿ ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಪ್ರಮುಖ ಘಟ್ಟವಾದ ಮತದಾನ ಪ್ರಕ್ರಿಯೆಯಲ್ಲಿ ಮುಂದಾಗಲು ಈ ಕ್ರಮ ಕೈಗೊಳ್ಳಲಾಗಿದೆ. ರಜಾ ದಿನದ ಮಹತ್ವವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಸದುದ್ದೇಶವನ್ನು ಪ್ರತಿಯೊಬ್ಬರು ಅರಿತು ನಡೆಯಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.