ಕ್ಷೇತ್ರದ ಅಭಿವೃದ್ಧಿಗಾಗಿ ಕಾರ್ಯಮಗ್ನನಾಗಿದ್ದೇನೆ: ಅಬಕಾರಿ ಸಚಿವ ಕೆ. ಗೋಪಾಲಯ್ಯ
Team Udayavani, Apr 27, 2023, 10:18 AM IST
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಂದಿನಿ ಬಡಾವಣೆ ಕಂಠೀರವ ನಗರ ಹಾಗೂ ಪರಿಮಳ ನಗರದಲ್ಲಿ ಮನೆ ಮನೆಗೆ ಭೇಟಿ ನೀಡಿ ತಮ್ಮೆಲ್ಲರ ಬೇಡಿಕೆಗಳನ್ನು ಅರಿತು ಕ್ಷೇತ್ರದ ಅಭಿವೃದ್ಧಿಗಾಗಿ ಕಾರ್ಯಮಗ್ನನಾಗಿದ್ದೇನೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ. ಗೋಪಾಲಯ್ಯರವರು ಮತಯಾಚನೆ ನಡೆಸಿದರು.
ಕುಡಿಯುವ ನೀರಿನ ಘಟಕ, ನವ ನಂದಿನಿ ಪಾರ್ಕ್, ಆರೋಗ್ಯದ ಕಾಳಜಿಯಿಂದ ಉತ್ತಮ ಆಸ್ಪತ್ರೆಗಳು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ನವ ನಂದಿನಿ ಉದ್ಯಾನವನ ನಿರ್ಮಾಣ ಹಾಗೂ ಕೋವಿಡ್ ಅವಧಿಯಲ್ಲಿ 350 ಕ್ಕೂ ಹೆಚ್ಚಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಿ ಕ್ಷೇತ್ರದ ಜನತೆಯ ಉಳಿವಿಗಾಗಿ ಶ್ರಮವಹಿಸಿ ಕಾರ್ಯನಿರ್ವಹಣೆ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮುಂದೆ ಇಟ್ಟು ಮಾನ್ಯ ಸಚಿವರು ಮತಯಾಚನೆಯನ್ನು ಮಾಡಿದರು.
ಸರ್ಕಾರಿ ಶಾಲೆ. ಸುಮಾರು ಒಂದುವರೆ ಸಾವಿರ ಮಕ್ಕಳು ಪ್ರವೇಶವನ್ನು ಪಡೆದುಕೊಳ್ಳುತ್ತಿದ್ದಾರೆ. ಉಚಿತವಾಗಿ ಶಿಕ್ಷಣವನ್ನು ಕೊಡಲು ಮುಖಂಡರುಗಳು ಕ್ರಮ ವಹಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮಾಜಿ ಬಿಬಿಎಂಪಿ ಸದಸ್ಯ ರಾಜೇಂದ್ರ ಕುಮಾರ್, ಮಾನ್ಯಳ್ ನಾಗರಾಜು, ಪ್ರಸನ್ನ ಕುಮಾರ, ಪ್ರಸನ್ನ, ಹನುಮಂತು, ಹನುಮಂತರಾಯಪ್ಪ, ಮರಿಯಣ್ಣ, ಸುರಭಿ ನಾಗರಾಜು, ಅಂಬರೀಶ್, ಪುಟ್ಟಸ್ವಾಮಿ, ನಾರಾಯಣಸ್ವಾಮಿ ಹಾಗೂ ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.