ಬಿಹಾರದ 59 ಕಾರಾಗೃಹದಲ್ಲಿ 62,000 ಕೈದಿಗಳು !
Team Udayavani, Apr 28, 2023, 7:52 AM IST
ನವದೆಹಲಿ: ಜೈಲು ಕಾನೂನು ತಿದ್ದುಪಡಿ ಅನ್ವಯ ಬಿಹಾರದಲ್ಲಿ 27 ಕೈದಿಗಳು ಬಿಡುಗಡೆಗೊಂಡಿರುವ ವಿಚಾರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಅಲ್ಲಿನ ಗೃಹ ಸಚಿವಾಲಯ ಇತ್ತೀಚೆಗೆ ಬಿಡುಗಡೆಗೊಳಿಸಿದ ವರದಿ ಆತಂಕ ಮೂಡಿಸಿದೆ. ಆ ರಾಜ್ಯದ ಒಟ್ಟು 59 ಜೈಲುಗಳಲ್ಲಿ 62,000 ಕೈದಿಗಳಿದ್ದು, ಇದು ಜೈಲುಗಳ ಸಾಮರ್ಥ್ಯ ಮೀರಿದ್ದು ಎಂದು ಸಚಿವಾಲಯ ತಿಳಿಸಿದೆ.
ವರದಿಗಳ ಪ್ರಕಾರ, 8 ಕೇಂದ್ರ ಕಾರಾಗೃಹಗಳು ಸೇರಿದಂತೆ 59 ಜೈಲುಗಳಲ್ಲಿನ ಒಟ್ಟು ಸಾಮರ್ಥ್ಯ 47,750 ಕೈದಿಗಳಾಗಿದೆ. ಆದರೆ 61,891 ಕೈದಿಗಳು ಈ ಜೈಲುಗಳಲ್ಲಿದ್ದಾರೆ. ಇದರರ್ಥ ಜೈಲುಗಳು ತಮ್ಮ ಸಾಮರ್ಥ್ಯಕ್ಕಿಂತ ಶೇ.30ರಷ್ಟು ಹೆಚ್ಚು ಕೈದಿಗಳನ್ನು ಹೊಂದಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೈದಿಗಳ ಸಂಖ್ಯೆ ಇಳಿಮುಖಗೊಳಿಸುವುದು ಅಗತ್ಯ ಎನ್ನಲಾಗಿದೆ.
ಇನ್ನು ಸಾಮರ್ಥ್ಯ ಮೀರಿದ ಕೈದಿಗಳನ್ನು ಹೊಂದುವ ಮೂಲಕ ಅತೀ ನಿಕೃಷ್ಟ ಪರಿಸ್ಥಿತಿ ಎದುರಿಸುತ್ತಿರುವುದು ಬಿಹಾರದ ಜಾಮುಯಿ ಜಿಲ್ಲಾ ಕೇಂದ್ರ ಕಾರಾಗೃಹವಾವಾಸಿಗಳು. 188 ಕೈದಿಗಳಿಗೆ ಮೀಸಲಾದ ಈ ಜೈಲಿನಲ್ಲಿ ಮಾ.31ರವರೆಗೆ 822 ಕೈದಿಗಳಿದ್ದಾರೆ ಎನ್ನಲಾಗಿದೆ. ಇಂಥ ಪರಿಸ್ಥಿತಿ ನಿವಾರಣೆಗಾಗಿ ಹಲವು ಕ್ರಮ ಕೈಗೊಳ್ಳಲಾಗಿದೆ. ಆ ಪೈಕಿ 14 ವರ್ಷದ ಮೇಲೆ ಜೈಲು ಶಿಕ್ಷೆ ಅನುಭವಿಸಿರುವವರನ್ನು ಬಿಡುಗಡೆಗೊಳಿಸುವುದು ಕೂಡ ಇಂಥದ್ದೇ ಕ್ರಮ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.