ಶಿಂಧೆ ಬಣಕ್ಕೆ ಶಿವಸೇನೆ ಆಸ್ತಿ ವರ್ಗಾಹಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
Team Udayavani, Apr 28, 2023, 7:03 PM IST
ನವದೆಹಲಿ: ಉದ್ಧವ್ ಠಾಕ್ರೆ ಬಣ ಹೊಂದಿರುವ ಶಿವಸೇನೆ ಪಕ್ಷದ ಎಲ್ಲಾ ಆಸ್ತಿಯನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ವರ್ಗಾಯಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಅರ್ಜಿದಾರ ಆಶೀಷ್ ಗಿರಿ ಎಂಬ ವಕೀಲರ ಸ್ಥಾನವನ್ನು ಪ್ರಶ್ನಿಸಿ ಅವರ ಮನವಿಯನ್ನು ವಜಾಗೊಳಿಸಿದೆ. “ನೀವು ಯಾರು? ನಿಮ್ಮ ಸ್ಥಾನ ಏನು,” ಎಂದು ಪೀಠವು ಕೇಳಿತು.
ಉದ್ಧವ್ ಠಾಕ್ರೆ ಮತ್ತು ಶಿಂಧೆ ಬಣಗಳ ನಡುವಿನ ವೈಷಮ್ಯಕ್ಕೆ ಸಂಬಂಧಿಸಿದಂತೆ ವಿವಿಧ ಅರ್ಜಿಗಳನ್ನು ಆಲಿಸಿದ ಕಾರಣ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಆಶೀಷ್ ಗಿರಿ ಹೇಳಿದರು. ಪಕ್ಷದ ಆಸ್ತಿಯನ್ನು ಶಿಂದೆ ಬಣಕ್ಕೆ ಶಿವಸೇನೆ ಪಕ್ಷದ ಆಸ್ತಿಯನ್ನು ವರ್ಗಾಯಿಸಬೇಕು’ ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ “ಇದು ಯಾವ ರೀತಿಯ ಅರ್ಜಿ ಮತ್ತು ಪಕ್ಷದಲ್ಲಿ ನೀವು ಏನು?ಈ ರೀತಿಯ ಅರ್ಜಿಯನ್ನು ಪುರಸ್ಕರಿಸಲಾಗುವುದಿಲ್ಲ” ಎಂದು ಪೀಠ ಹೇಳಿ ಅರ್ಜಿಯನ್ನು ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.