ನರಗುಂದ: 30 ವರ್ಷ ಮೇಲ್ಪಟ್ಟವರ ಆರೋಗ್ಯ ತಪಾಸಣೆ
ಸಂಸ್ಕರಿಸದ ರಕ್ತ ಪಡೆಯುವುದರಿಂದ ರೋಗ ಹರಡುತ್ತದೆ
Team Udayavani, Apr 28, 2023, 2:40 PM IST
ನರಗುಂದ: 30 ವರ್ಷ ಮೇಲ್ಪಟ್ಟ ಎಲ್ಲಾ ಜನರ ಆರೋಗ್ಯ ತಪಾಸಣೆ ಮಾಡುವುದು ಕಡ್ಡಾಯವಾಗಿದೆ. ಆರೋಗ್ಯ ಇಲಾಖೆಯಿಂದ ಗ್ರಾಮಗಳಲ್ಲಿ ಶಿಬಿರಗಳನ್ನು ಏರ್ಪಡಿಸಿ ಬಿಪಿ ಮತ್ತು ಸಕ್ಕರೆ ಕಾಯಿಲೆಗಳ ಬಗ್ಗೆ ತಪಾಸಣೆ ಮಾಡಿ ಮುಂದಾಗುವ ಅನಾಹುತಗಳನ್ನು ತಪ್ಪಿಸಲಾಗುತ್ತಿದೆ ಎಂದು ವೈದ್ಯಾಧಿಕಾರಿ ಡಾ|ನಿಖೀಲ ಪಾಟೀಲ ಹೇಳಿದರು.
ತಾಲೂಕಿನ ಬನಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಗನೂರ ಗ್ರಾಮದಲ್ಲಿ ತಾಲೂಕು ಆರೋಗ್ಯಾಕಾರಿಗಳ ಕಾರ್ಯಲಯ, ಗ್ರಾಮ ಪಂಚಾಯಿತಿ ಬನಹಟ್ಟಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಜಗಾಪೂರ ಅವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಹಾಗೂ ಆರೋಗ್ಯದ ಕುರಿತು ಮೂಗನೂರ ಗ್ರಾಮದಲ್ಲಿ ಕಾಮಗಾರಿ ಸ್ಥಳದಲ್ಲಿ ನಡೆದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಸಾಂಕ್ರಾಮಿಕ ರೋಗಗಳಾದ ಅಧಿಕ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್, ಪಾರ್ಶ್ವವಾಯುನಂತಹ ರೋಗಗಳು ಹರಡುವ ಬಗ್ಗೆ ಮಾಹಿತಿ ನೀಡಿದರು.
ತಂಬಾಕಿನ ವಿವಿಧ ಉತ್ಪನ್ನಗಳ ಬಳಕೆಯಿಂದಾಗಿ ಪುರುಷರಲ್ಲಿ ಬಾಯಿ ಕ್ಯಾನ್ಸರ್ ಹಾಗೂ ಮಹಿಳೆಯರು ಮುಟ್ಟಿನ ಸಂದರ್ಭದಲ್ಲಿ ಸುಚಿತ್ವದ ಕೊರತೆಯಿಂದಾಗಿ ಸ್ತನ ಹಾಗೂ ಗರ್ಭಕೋಶದ ಕ್ಯಾನ್ಸರ್‌ಗಳಿಗೆ ತುತ್ತಾಗುತ್ತಿದ್ದಾರೆ ಎಂದು ತಿಳಿಸಿದರು. ಅಲ್ಲದೇ, ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಿ.ವ್ಹಿ.ಕೊಣ್ಣೂರ ಅವರು ಮಾತನಾಡಿ, ಕೀಟಜನ್ಯ ರೋಗಗಳಾದ ಡೆಂಘೀ, ಚಿಕೂನ್
ಗುನ್ಯಾ, ಮಲೇರಿಯಾ, ಮೆದುಳು ಜ್ವರ ಮತ್ತು ಆನೆಕಾಲು ರೋಗಗಳನ್ನು ನಿಯಂತ್ರಿಸುವಲ್ಲಿ ಸೊಳ್ಳೆ, ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು.
ಎಸ್.ಬಿ.ಕುರಹಟ್ಟಿ ಅವರು ಮಾತನಾಡಿ, ಕ್ಷಯರೋಗ ಅತ್ಯಂತ ಪ್ರಮುಖ ಸಾಂಕ್ರಾಮಿಕ ರೋಗವಾಗಿದ್ದು, ಮೈಕೋಬ್ಯಾಕ್ಟಿರಿಯಂ ಟ್ಯೂಬರ್‌ಕ್ಯೂಲೋಸಿಸ್ ಎಂಬ ರೋಗಾಣುವಿನಿಂದ ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಕೆಮ್ಮು ಹಾಗೂ ಸೀನುವುದರಿಂದ ಹರಡುತ್ತದೆ.
ಎರಡು ವಾರ ಅಥವಾ ಅದಕ್ಕಿಂತ ಹೆಚ್ಚು ಸತತವಾದ ಕೆಮ್ಮು, ಕೆಮ್ಮಿನ ಜೊತೆ ಕಫ, ಕಫದೊಂದಿಗೆ ರಕ್ತ, ಎದೆನೋವು,
ಹಸಿವಾಗದೆ ಇರುವುದು, ತೂಕ ಕಡಿಮೆಯಾಗುವುದು, ಸಂಜೆ ವೇಳೆ ಜ್ವರ ಇವೆ ಮೊದಲಾದವುಗಳ ಕ್ಷಯರೋಗದ
ಲಕ್ಷಣಗಳಾಗಿವೆ ಎಂದರು.
ಇಂತಹ ಲಕ್ಷಣಗಳು ಕಂಡು ಬಂದಲ್ಲಿ ಆರೋಗ್ಯ ಸಿಬ್ಬಂದಿ, ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಕಫ ಪರೀಕ್ಷೆ ಮಾಡಿಸಬೇಕು. ಖಚಿತಪಟ್ಟಲ್ಲಿ 6ರಿಂದ 9 ತಿಂಗಳವರೆಗೆ ಉಚಿತ ಚಿಕಿತ್ಸೆ ನೀಡಿ ಗುಣಪಡಿಸಬಹುದು ಎಂದು ತಿಳಿಸಿದರು.
ಎನ್.ಎಲ್.ಮಡಿವಾಳರ ಮಾತನಾಡಿ, ಎಚ್‌ಐವ್ಹಿ, ಏಡ್ಸ್ ಹರಡುವ ವಿಧಾನಗಳಾದ ಅಸುರಕ್ಷಿತ ಲೈಂಗಿಕ ಕ್ರಿಯೆ, ಸಂಸ್ಕರಿಸದ ಸೂಜಿ, ಸಿರಿಂಜ್, ಸೋಂಕಿತ ತಾಯಿಯಿಂದ ಮಗುವಿಗೆ, ಸಂಸ್ಕರಿಸದ ರಕ್ತ ಪಡೆಯುವುದರಿಂದ ರೋಗ ಹರಡುತ್ತದೆ ಎಂದು ತಿಳಿಸಿದರು.
ಪಿಡಿಒ ಎಂ.ಎಂ.ಪೂಜಾರ ಮಾತನಾಡಿ, ಮೇ 10ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ತಿಳಿಸಿದರು. 150ಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಿದ್ದರು. 70 ಜನರಿಗೆ ಅಧಿಕ ರಕ್ತದೊತ್ತಡ, ಮಧುಮೇಹ ರೋಗಗಳ ತಪಾಸಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಎ.ಎಂ.ಕಾಡದೇವರಮಠ, ಲಕ್ಷಿ¾à ಮನಗೇನಿ, ಪದ್ಮಶ್ರೀ ಚೌಗಲೆ, ಅಜಯ್ ನೀಲವಾನಿ, ಶೋಭಾ ಮಲ್ಲನಗೌಡ್ರ, ಬಸವರಾಜ ಕಲ್ಲಾಪೂರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: 2019ರಲ್ಲೇ ಗದಗ ಹಾಲಕೆರೆ ಮಠದ 11.19 ಎಕರೆ ವಕ್ಫ್‌ಗೆ!
ಗದಗ: ಭೀಷ್ಮ ಕೆರೆಗೆ ಸಚಿವ ಎಚ್.ಕೆ. ಪಾಟೀಲ ಬಾಗಿನ ಅರ್ಪಣೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.