ಕಣದಲ್ಲಿ ತಾರಕಕ್ಕೇರಿದ ವಿಷದ ಮಾತು

Team Udayavani, Apr 29, 2023, 8:02 AM IST

KHARGE MODI

ಪ್ರಧಾನಿ ನರೇಂದ್ರ ಮೋದಿ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ “ವಿಷ ಸರ್ಪ’ದ ಮಾತಿನಿಂದ ಬಿಜೆಪಿಗೆ ಪ್ರಬಲ ಅಸ್ತ್ರವೇ ಸಿಕ್ಕಂತಾಗಿದ್ದು, ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದಿದೆ. ಈ ನಡುವೆ ಸೋನಿಯಾ ಗಾಂಧಿ ಕುರಿತಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲರ “ವಿಷಕನ್ಯೆ” ಹೇಳಿಕೆಯೂ ಕಾಂಗ್ರೆಸ್‌ನಲ್ಲಿ ಆಕ್ರೋಶ ಮೂಡಿಸಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ನ ಪ್ರಮುಖ ನಾಯಕರ “ವಿಷದ ಮಾತು” ಚುನಾವಣ ಕಣದಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ.

ಪ್ರಧಾನಿ ಮೋದಿ ನೀಲಕಂಠ: ಸಿಎಂ
ಕಲಬುರಗಿ: ಪ್ರಧಾನಿ ಮೋದಿ ಅವರನ್ನು ವಿಷ ಸರ್ಪ ಅಂತ ಕಲ್ಯಾಣ ಕರ್ನಾಟಕದ ಹಿರಿಯ ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಸರ್ಪ ನೀಲಕಂಠನ ಸಂಕೇತ. ಮೋದಿ ದೇಶದ ಭಯೋತ್ಪಾದನೆ, ಭ್ರಷ್ಟಾಚಾರ, ಬಡತನವನ್ನು ಒಧ್ದೋಡಿಸಿ ಸಶಕ್ತ ಭಾರತ ಕಟ್ಟಲು ಹಲವಾರು ರೀತಿಯ ವಿಷವನ್ನು ನುಂಗಿ ನೀಲಕಂಠ ಆಗಿದ್ದಾರೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸೇಡಂನಲ್ಲಿ ರೋಡ್‌ ಶೋ ವೇಳೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆಗೆ ದಿನಕ್ಕೊಂದು ಬಾರಿ ಮೋದಿ ಹೆಸರು ಹೇಳದಿದ್ದರೆ ನಿದ್ರೆ ಬರದು. ಇದು ಮೋದಿ ಬಗ್ಗೆ ಅವರಿಗಿರುವ ಭೀತಿಗೆ ಸಾಕ್ಷಿಯಾಗಿದೆ. ಮೋದಿ ನೇತೃತ್ವದಲ್ಲಿ ಎಲ್ಲೆಲ್ಲಿ ಚುನಾವಣೆ ಆಗಿದೆಯೋ ಅಲ್ಲೆಲ್ಲ ಕಾಂಗ್ರೆಸ್‌ ನಿರ್ಮೂಲವಾಗಿದೆ. ಈಗ ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಸೋಲುವ ಸ್ಥಿತಿ ಬಂದಿದ್ದು, ರಾಜ್ಯದಲ್ಲಿ ಬಿಜೆಪಿಯ ಸುನಾಮಿ ಎದ್ದಿದೆ ಎಂದರು.

ಪ್ರಧಾನಿ ಮೋದಿಯವರ ಬಗ್ಗೆ “ವಿಷ ಸರ್ಪ’ ಹೇಳಿಕೆ ನೀಡಿ ಕಾಂಗ್ರೆಸ್‌ನ ಸಂಸ್ಕೃತಿ ಎಂಥದ್ದು ಎನ್ನುವುದನ್ನು ಖರ್ಗೆ ಬಹಿರಂಗಪಡಿಸಿದ್ದಾರೆ. ಕಾಂಗ್ರೆಸ್ಸಿಗರ ಮನಸ್ಸಿನಲ್ಲೇ ವಿಷವಿದೆ. ಖರ್ಗೆ ಹೇಳಿಕೆಯನ್ನು ಉಗ್ರವಾಗಿ ಖಂಡಿಸುವೆ. ಅವರ ಮಾತು ನಾಗರಿಕ ಸಮುದಾಯಕ್ಕೆ ಗೌರವ ಕೊಡುವಂಥದ್ದಲ್ಲ. ಪ್ರಧಾನಿಯವರ ಬಗೆಗಿನ ಈ ಹೇಳಿಕೆ ದೇಶವನ್ನು ಅವಮಾನಿಸಿದಂತಾಗಿದೆ.
– ವಿ. ಸುನಿಲ್‌ಕುಮಾರ್‌, ಸಚಿವ

ಮೋದಿ ಟೀಕಿಸಿದ ಖರ್ಗೆ ಗೌರವ ಮಣ್ಣುಪಾಲು
ಶಿವಮೊಗ್ಗ: ಖರ್ಗೆಗೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಒಂದು ತೂಕವಿತ್ತು. ಆದರೆ ಇಡೀ ವಿಶ್ವವೇ ಮೆಚ್ಚಿರುವ ಪ್ರಧಾನಿ ಮೋದಿಯವರನ್ನು ವಿಷ ಸರ್ಪಕ್ಕೆ ಹೋಲಿಸುವ ಮೂಲಕ ಅವರೇ ತಮ್ಮ ಗೌರವವನ್ನು ಮಣ್ಣುಪಾಲು ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರಾಗಿರುವ ಖರ್ಗೆ ಇಂತಹ ಹೇಳಿಕೆ ನೀಡಿರುವುದು ದುರಂತ. ಖರ್ಗೆ ಅವರು ಪ್ರಧಾನಿ ಮೋದಿ ಬಗ್ಗೆ ಆ ರೀತಿ ಹೇಳಿಕೆ ನೀಡಿದ್ದಾರಾ ಎಂಬ ಅನುಮಾನ ಇನ್ನೂ ಕಾಡುತ್ತಿದೆ. ಇದುವರೆಗೆ ಖರ್ಗೆಯವರನ್ನು ನಾವು ಕೂಡ ತಂದೆ ಸ್ವರೂಪದಲ್ಲಿ ಗೌರವಿಸುತ್ತಿದ್ದೆವು. ಆದರೆ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆಂದು ಭಾವಿಸಿರಲಿಲ್ಲ. ಅವರಿಗೆ ಈ ದುಃಸ್ಥಿತಿ ಯಾಕೆ ಬಂತೆಂಬುದು ನನಗೂ ಅರ್ಥವಾಗುತ್ತಿಲ್ಲ ಎಂದರು.

-ಕೆ. ಎಸ್‌. ಈಶ್ವರಪ್ಪ

ಬಿಜೆಪಿ ದೇಶದಲ್ಲಿ ಬರೀ ಬೆಂಕಿ ಹಚ್ಚುವ, ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ರಾಹುಲ್‌ ಗಾಂಧಿ, ಡಿ.ಕೆ.ಶಿವಕುಮಾರ್‌ ಅಂಥವರನ್ನು ಟಾರ್ಗೆಟ್‌ ಮಾಡಿ ದ್ವೇಷ ಸಾ ಧಿಸುತ್ತಿದ್ದಾರೆ. ಸಮಾಜದ ನೆಮ್ಮದಿ ಹಾಳು ಮಾಡುವ ಬಿಜೆಪಿಯ ಎಲ್ಲ ವಿಷ ಜಂತುಗಳಿಗೆ ಪಾಠ ಕಲಿಸಬೇಕಾಗಿದೆ.
-ಉಮಾಶ್ರೀ, ಮಾಜಿ ಸಚಿವೆ

ಮೋದಿ ಅವರ ಬಗ್ಗೆ ಖರ್ಗೆ ಹೇಳಿಕೆ ಅವರ ಕೀಳು ಮಟ್ಟದ ಅಭಿರುಚಿ ತೋರಿಸುತ್ತದೆ. ಕಾಂಗ್ರೆಸ್‌ ದೇಶದ ಎಲ್ಲೆಡೆ ಅಸ್ತಿತ್ವ ಕಳೆದುಕೊಂಡಿದ್ದು, ಕರ್ನಾಟಕದಲ್ಲೂ ಕೊನೆಯುಸಿರು ಎಳೆಯುತ್ತಿದೆ. ಇಂತಹ ಪಕ್ಷದಲ್ಲಿ ಇದುವರೆಗೂ ಸಜ್ಜನ ಎಂದೇ ಹೆಸರಾಗಿದ್ದ ಖರ್ಗೆಯವರೂ ಸೋನಿಯಾ ಗಾಂಧಿ ಕುಟುಂಬವನ್ನು ಓಲೈಸಲು ಈ ರೀತಿಯ ಶಬ್ದಗಳನ್ನು ಪ್ರಯೋಗಿಸಿದ್ದಾರೆ.
– ಕ್ಯಾ| ಗಣೇಶ್‌ ಕಾರ್ಣಿಕ್‌, ಬಿಜೆಪಿ ರಾಜ್ಯ ವಕ್ತಾರ

ಖರ್ಗೆಯವರು ದೇಶದ ಪ್ರಧಾನಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ, ಅವರು 140 ಕೋಟಿ ಭಾರತೀಯರನ್ನು ಅವಮಾನಿಸಿ¨ªಾರೆ. ವಿಶ್ವ ಮನ್ನಣೆ ಪಡೆದ ಪ್ರಧಾನಿಯನ್ನು ವಿಷ ಸರ್ಪಕ್ಕೆ ಹೋಲಿಸಿರುವುದು ರಾಜಕೀಯ ದಿವಾಳಿತನ ಮತ್ತು ಅವರ ವ್ಯಕ್ತಿತ್ವ ತೋರಿಸುತ್ತದೆ. ಚುನಾವಣೆಯಲ್ಲಿ ವೈಯಕ್ತಿಕ ನಿಂದನೆ ಸರಿಯಲ್ಲ.
-ಡಾ| ಕೆ.ಸುಧಾಕರ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.