ಕುಕ್ಕೆಯಲ್ಲಿ ಗುಡುಗು ಸಹಿತ ಭಾರೀ ಗಾಳಿ-ಮಳೆ: ಹಾರಿ ಹೋದ ಮನೆಗಳ ಮೇಲ್ಛಾವಣಿ !
Team Udayavani, Apr 30, 2023, 7:00 AM IST
ಸುಬ್ರಹ್ಮಣ್ಯ: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಶನಿವಾರ ಸಂಜೆ ವೇಳೆಗೆ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ಸಂದರ್ಭ ರಸ್ತೆಗೆ ಬೃಹತ್ ಮರ ಉರುಳಿದ, ಮನೆಯೊಂದರ ಮೇಲ್ಛಾವಣಿ ಹಾರಿಹೋದ ಘಟನೆಯೂ ಸಂಭವಿಸಿದೆ.
ಸುಬ್ರಹ್ಮಣ್ಯದಲ್ಲಿ ಸಂಜೆ ಸುಮಾರು ಒಂದು ತಾಸು ಕಾಲ ಮಳೆಯಾಗಿದೆ. ರಸ್ತೆಗಳ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ವಾಹನಗಳು ಓಡಾಡಲು ಪರದಾಡಬೇಕಾಯಿತು. ಕುಮಾರಧಾರಾ ಬಳಿ ಮುಖ್ಯರಸ್ತೆಗೆ ಅಡ್ಡ ಬೃಹತ್ ಮರವೊಂದು ಬಿದ್ದು ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ನೂಚಿಲ ಕುಶಾಲಪ್ಪ ಅವರ ಮನೆಯ ಮೇಲ್ಛಾವಣಿ ಗಾಳಿ ಹಾರಿ ಹೋಗಿ ಸುಮಾರು 50 ಸಾವಿರ ರೂ. ನಷ್ಟ, ನೂಚಿಲದ ಭವಾನಿ ಕೆ.ಎಸ್.ಅವರ ಮನೆಗೆ ತೆಂಗಿನ ಮರ ಬಿದ್ದು ಅಂದಾಜು 30 ಸಾವಿರ ರೂ. ನಷ್ಟವಾಗಿದೆ.ಸುಬ್ರಹ್ಮಣ್ಯದ ವಿದ್ಯಾನಗರ ಪ್ರದೇಶದಲ್ಲಿ ಸುಮಾರು 7-8 ಬಾಡಿಗೆ ಮನೆಗಳ ಮೇಲ್ಛಾವಣಿಯ ಸಿಮೆಂಟ್ ಶೀಟು, ಹಂಚುಗಳು ಗಾಳಿಗೆ ಹಾರಿಹೋಗಿವೆ. ಹಲವೆಡೆ ವಿದ್ಯುತ್ ತಂತಿ, ಕಂಬಗಳ ಮೇಲೆ ಮರದ ಕೊಂಬೆಗಳು ಬಿದ್ದು ಹಾನಿ ಸಂಭವಿಸಿದೆ.
ಕುಮಾರಪರ್ವತ ಭಾಗದಲ್ಲಿ ಹಾಗೂ ಸುತಮುತ್ತಲ ಪ್ರದೇಶಗಳಲ್ಲಿ ಕೂಡ ಭಾರೀ ಗಾಳಿಯೊಂದಿಗೆ ಮಳೆ ಸುರಿಯಿತು. ದರ್ಪಣ ತೀರ್ಥದಲ್ಲೂ ಭಾರೀ ಮಳೆ ನೀರು ಹರಿದಿದೆ. ಸುಬ್ರಹ್ಮಣ್ಯ ಸುತ್ತಮುತ್ತಲಿನ ಸಣ್ಣ ಪುಟ್ಟ ಹಳ್ಳ, ತೋಡುಗಳು ಸ್ವಲ್ಪ ಮಟ್ಟಿಗೆ ತುಂಬಿ ಹರಿದಿವೆ.
ಸುಳ್ಯ ತಾಲೂಕಿನಲ್ಲಿ ಉತ್ತಮ ಮಳೆ
ಸುಳ್ಯ: ಸುಳ್ಯ ನಗರ ಸೇರಿದಂತೆ ತಾಲೂಕಿನ ಹಲವೆಡೆ ಶನಿವಾರ ಸಂಜೆ ವೇಳೆ ಒಂದು ತಾಸು ಗುಡುಗು, ಗಾಳಿ ಸಹಿತ ಧಾರಾಕಾರ ಮಳೆಯಾಯಿತು. ಮಳೆ ನೀರು ರಸ್ತೆಯಲ್ಲೇ ಹರಿದಿದ್ದು, ಕೆಲವೆಡೆ ಕೆಸರು ನೀರು ಸಂಗ್ರಹಗೊಂಡು ವಾಹನಗಳ ಮೇಲೆ ಸಿಂಚನವಾಯಿತು.
ಸುಳ್ಯ ನಗರ, ಜಾಲೂÕರು, ಪೈಚಾರು, ಕನಕಮಜಲು, ಐವರ್ನಾಡು, ಬೆಳ್ಳಾರೆ, ನಿಂತಿಕಲ್ಲು, ಗುತ್ತಿಗಾರು, ಕಲ್ಮಡ್ಕ, ಅರಂತೋಡು, ಸಂಪಾಜೆ, ಕಲ್ಲುಗುಂಡಿ ಸೇರಿದಂತೆ ಅಲ್ಲಲ್ಲಿ ಮಳೆಯಾಯಿತು.
ಪಯಸ್ವಿನಿಯಲ್ಲಿ ಹರಿವು
ಪಯಸ್ವಿನಿಯಲ್ಲಿ ನೀರಿನ ಮಟ್ಟ ಇಳಿದ ಹಿನ್ನೆಲೆಯಲ್ಲಿ ನಗರಕ್ಕೆ ಕುಡಿಯುವ ನೀರು ಪೂರೈಸಲು ಪಯಸ್ವಿನಿಯ ಜಾಕ್‌ವೆಲ್ ಬಳಿ ನೀರನ್ನು ಮಣ್ಣು ಹಾಕಿ ಹಿಡಿದಿಡಲಾಗಿತ್ತು. ಆದರೆ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಿಂದಾಗಿ ಪಯಸ್ವಿನಿಯಲ್ಲಿ ನೀರಿನ ಮಟ್ಟ ಮತ್ತೆ ತುಸು ಏರಿಕೆಯಾಗಿರುವ ಕಾರಣ ಸಂಗ್ರಹದಿಂದ ನೀರನ್ನು ಹೊರಕ್ಕೆ ಬಿಡಲಾಗಿದೆ. ಉತ್ತಮ ಮಳೆಯಿಂದಾಗಿ 20 – 25 ದಿನಗಳ ವರೆಗೆ ನಗರಕ್ಕೆ ನೀರಿನ ಸಮಸ್ಯೆ ದೂರವಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.