ಸೋತರೂ ಕೈಕಟ್ಟಿ ಕೂರದೇ ಜನರ ಕೆಲಸ ಮಾಡಿದ್ದೇನೆ


Team Udayavani, Apr 30, 2023, 3:28 PM IST

ಸೋತರೂ ಕೈಕಟ್ಟಿ ಕೂರದೇ ಜನರ ಕೆಲಸ ಮಾಡಿದ್ದೇನೆ

ನಾಗಮಂಗಲ: ಕಳೆದ ಚುನಾವಣೆಯಲ್ಲಿ ಸೋತರೂ ಕೈಕಟ್ಟಿ ಕೂರದೇ ಜನರ ನಡುವೆ ಇದ್ದು, ಹಿತಕಾಯ್ದುಕೊಂಡು ಬಂದಿದ್ದೇನೆ. ಹಾಗಾಗಿ, ಈ ಬಾರಿ ಪಕ್ಷಾತೀತವಾಗಿ ಬೆಂಬಲಿಸುವಂತೆ ಕಾಂಗ್ರೆಸ್‌ ಅಭ್ಯರ್ಥಿ ಎನ್‌. ಚಲುವರಾಯಸ್ವಾಮಿ ಮನವಿ ಮಾಡಿದರು.

ಪಟ್ಟಣದ ಹಲವು ವಾರ್ಡ್‌ಗಳಲ್ಲಿ ಬಿರು ಸಿನ ಪ್ರಚಾರ ನಡೆಸಿ, ನಂತರ ನಡೆದ ಬಣಜಿಗ ಸಮುದಾಯದ ಸಭೆಯಲ್ಲಿ ಮಾತನಾಡಿ, ನನ್ನ ಅವಧಿಯಲ್ಲಿ ನಾಗಮಂಗಲ ಪಟ್ಟಣ ಸೇರಿ ತಾಲೂಕು ಸಾಕಷ್ಟು ಅಭಿವೃದ್ಧಿ ಹೊಂದಿತ್ತು. ಇದಕ್ಕೆ ನೀವು ನೀಡಿದ್ದ ಬೆಂಬಲವೇ ಕಾರಣ ಎಂದು ಹೇಳಿದರು.

ಈ ಬಾರಿ ಆಯ್ಕೆ ಮಾಡಿ: ಮೂರು ಬಾರಿ ಶಾಸಕರನ್ನಾಗಿ ಮಾಡಿ ಒಮ್ಮೆ ಸಂಸದನ ನ್ನಾಗಿಯೂ ಆಯ್ಕೆ ಮಾಡಿದ್ದೀರಿ. ನಿಮ್ಮ ಋಣ ನನ್ನ ಮೇಲಿದೆ. ತಾಲೂಕಿನ ಜನರ ಹಿತದೃಷ್ಟಿಯಿಂದ ಜನಪರ ಕೆಲಸ ಮಾಡಬೇ ಕಾಗಿರುವುದರಿಂದ ಈ ಬಾರಿ ನನ್ನನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.

ಕೊರೊನಾ ಸಂದರ್ಭದಲ್ಲಿ ಒಂದು ಸರ್ಕಾರ ಅಥವಾ ಒಬ್ಬ ಜನಪ್ರತಿನಿಧಿ ಮಾಡಲಾಗದಂತಹ ಸಮಾಜಮುಖೀ ಕೆಲಸಗಳನ್ನು ನಾನು ಮಾಡಿದ್ದೇನೆ. ಕೊರೊನಾ ನಿಯಂತ್ರಣಕ್ಕೆ ಪೂರಕವಾಗಿ ಸಾವಿರಾರು ಕುಟುಂಬಗಳಿಗೆ ಉಚಿತ ಔಷಧಿ, ದಿನಸಿ ಕಿಟ್‌ ಗಳು, ಆಸ್ಪತ್ರೆಗಳ ಖರ್ಚುವೆಚ್ಚ, ಆ್ಯಂಬುಲೆನ್ಸ್‌ ವ್ಯವಸ್ಥೆ, ಅಗತ್ಯ ಸೌಕರ್ಯಗಳನ್ನು ಕಲ್ಪಿಸಲು ಹಗಲಿರುಳು ಶ್ರಮಿಸಿದ್ದೇನೆ ಎಂದು ವಿವರಿಸಿದರು.

ಪಕ್ಷಾತೀತವಾಗಿ ಆಶೀರ್ವದಿಸಿ: ತಾಲೂಕಿನ ಅಭಿವೃದ್ಧಿ ಒಂದು ಕಡೆಯಾದರೆ, ಎಲ್ಲ ವರ್ಗದ ಜನರ ಹಿತಕಾಯುವುದು ಮತ್ತೂಂದು ಕಡೆಯಾಗಿದೆ. ಎಲ್ಲ ಸಮುದಾಯದ ಮತ ದಾರರು ಪಕ್ಷಾತೀತವಾಗಿ ಮತಕೊಟ್ಟು ಆಶೀ ರ್ವದಿಸಬೇಕು ಎಂದು ಮನವಿ ಮಾಡಿದರು.

ಕೈ ಸರ್ಕಾರಕ್ಕೆ ಅಧಿಕಾರಕ್ಕೆ: ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್‌ ಪರ ಅಲೆ ಎದ್ದಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ಜನರು ಬೇಸತ್ತು ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರುವ ತವಕದಲ್ಲಿದ್ದಾರೆ. ಹಾಗಾಗಿ, ನಮ್ಮ ಪಕ್ಷದ ಸರ್ಕಾರ ಬರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಜನತೆಗೆ ಗೊತ್ತಿದೆ: ನಂತರ ಮಾತನಾಡಿದ ಸಮುದಾಯದ ಮುಖಂಡರು, ಚಲುವರಾಯಸ್ವಾಮಿ ಸಚಿವರಾಗಿದ್ದ ಅವಧಿಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿರುವಂತಹ ಹಲವು ಸರ್ಕಾರಿ ಕಚೇರಿ ಕಟ್ಟಡಗಳು, ಹೊಸದಾಗಿ ಶಾಲಾ ಕಾಲೇಜುಗಳು, ಆರೋಗ್ಯ ಕೇಂದ್ರಗಳು, ಪಶು ಆಸ್ಪತ್ರೆಗಳನ್ನು ತಾಲೂಕಿಗೆ ತಂದಿರುವುದು ಜನತೆಗೆ ಗೊತ್ತಿದೆ ಎಂದು ವಿವರಿಸಿದರು.

ಅಷ್ಟು ಮಾತ್ರವಲ್ಲದೆ, ಪಟ್ಟಣದಿಂದ ಹೊರಹೋಗುವ ಎಲ್ಲಾ ಪ್ರಮುಖ ರಸ್ತೆ ಗಳನ್ನು ಅಭಿವೃದ್ಧಿಪಡಿಸಿದ್ದೀರಿ, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಚಲುವರಾಯಸ್ವಾಮಿ ವಿರೋಧ ಪಕ್ಷದ ಶಾಸಕರಾಗಿದ್ದರೂ ನೀರಾವರಿ ಯೋಜನೆಗೆ 250 ಕೋಟಿ ರೂ. ಅನುದಾನ ತಂದು ಪಟ್ಟಣ, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಮುಖಂಡರಾದ ರಮೇಶ್‌, ತಿಮ್ಮಪ್ಪ, ಶಂಕರಪ್ಪ, ಡಿಷ್‌ಚಂದ್ರು, ನರಸಿಂಹ, ನಾರಾಯಣ ಹಲವರಿದ್ದರು.

ಟಾಪ್ ನ್ಯೂಸ್

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.