ಸೂಡಾನ್ ಸಂಘರ್ಷ: ವೀರಾಜಪೇಟೆ ತಾಲೂಕಿನ ಕುಟುಂಬ ಸುರಕ್ಷಿತ
Team Udayavani, May 1, 2023, 7:12 AM IST
ಮಡಿಕೇರಿ: ಸೇನೆ ಹಾಗೂ ಅರೆ ಸೇನಾಪಡೆಗಳ ನಡುವಿನ ಸಂಘಷìದಿಂದ ಬಳಲಿರುವ ಸೂಡಾನ್ ದೇಶದಲ್ಲಿ ಸಿಲುಕಿದ್ದ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಒಂದು ಕುಟುಂಬವನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.
ವೀರಾಜಪೇಟೆಯ ಮೊಹಿದ್ದೀನ್ ಅವರ ಕುಟುಂಬ ಸೂಡಾನಿನ ತೀವ್ರ ಸಂಘರ್ಷದ ಪ್ರದೇಶವಾದ ಖಾರ್ತೋಮ್‌ನಲ್ಲಿ ಸಿಲುಕಿತ್ತು. ಜಿಲ್ಲಾ ವಿಪತ್ತು ನಿರ್ವಹಣ ಕೇಂದ್ರಕ್ಕೆ ಈ ಬಗ್ಗೆ ಮಾಹಿತಿ ಬಂದ ಕೂಡಲೆ ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ್ ಅವರು ಜಿಲ್ಲಾ ವಿಪತ್ತು ನಿರ್ವಹಣ ಪರಿಣಿತ ಆರ್.ಎಂ. ಅನನ್ಯ ವಾಸುದೇವ್ ಅವರಿಗೆ ಈ ಕಾರ್ಯಾಚರಣೆಯ ಜವಾಬ್ದಾರಿಯನ್ನು ವಹಿಸಿದ್ದರು.
ಮೊಹಿದ್ದೀನ್ ಅವರ ಕುಟುಂಬದ ಜತೆಗೆ ನಿರಂತರವಾದ ಸಂಪರ್ಕ ಸಾಧಿಸಿ ಧೈರ್ಯ ತುಂಬಿದ ಅನನ್ಯ ವಾಸುದೇವ್, ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರ ಹಾಗೂ ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ನಿರಂತರ ಸಂಪರ್ಕ ಸಾಧಿಸಿದ್ದರು. ಪರಿಣಾಮ 8 ತಿಂಗಳ ಹಾಗೂ 2.5 ವರ್ಷದ ಮಕ್ಕಳು ಸೇರಿದಂತೆ ಮೊಹಿದ್ದೀನ್ ಅವರ ಕುಟುಂಬದ 6 ಸದಸ್ಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕ್ಷೇಮವಾಗಿ ಕರೆತರುವಲ್ಲಿ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ ಯಶಸ್ವಿಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.