5ಕೆಜಿ ಅಕ್ಕಿ, ಪ್ರತಿದಿನ ಅರ್ಧ ಲೀ. ಹಾಲು: ಬಿಜೆಪಿ ಪ್ರಣಾಳಿಕೆ ಬಿಡುಗಡೆ


Team Udayavani, May 1, 2023, 3:31 PM IST

5ಕೆಜಿ ಅಕ್ಕಿ, ಪ್ರತಿದಿನ ಅರ್ಧ ಲೀ. ಹಾಲು: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರಜಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಪ್ರಜಾ ಪ್ರಣಾಳಿಕೆ ಬಿಡುಗಡೆ  ಮಾಡಿದರು.

ಬಿಜೆಪಿಯ 16 ಪ್ರಮುಖ ಭರವಸೆಗಳು:

ಅನ್ನ:

  1. ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ಕಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ ಗಳನ್ನು ಉಚಿತವಾಗಿ ವಿತರಿಸುತ್ತೇವೆ.
  2. ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್ ಗಳಲ್ಲಿ ‘ಆಟಲ್ ಆಹಾರ ಕೇಂದ್ರ’ ವನ್ನು ಸ್ಥಾಪಿಸುತ್ತೇವೆ.
  3. “ಪೋಷಣೆ” ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀಅನ್ನ  ಸಿರಿಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.

ಅಭಯ:

  1. ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.
  2. ರಾಜ್ಯದಾದ್ಯಂತ ನಿವೇಶನ ರಹಿತ ವಸತಿ ರಹಿತ ನಿವಾಸಿಗಳಿಗೆ, “ಸರ್ವರಿಗೂ ಸೂರು ಯೋಜನೆ”ಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
  3. ಒನಕೆ ಓಬವ ಸಾಮಾಜಿಕ ನ್ಯಾಯ ನಿಧಿ” ಯೋಜನೆಯನ್ನು ಪ್ರಾರಂಭಿಸುತ್ತೇನೆ ಈ ಯೋಜನೆಯಡಿ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರು ಐದು ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ 210 ಸಾವಿರದವರೆಗೆ ತಾಳೆಯಾಗುವ ಠೇವಣಿ ನೀಡುತ್ತೇವೆ.
  4. ಬೆಂಗಳೂರಿನ ಅಪಾರ್ಟ್‌ ಮೆಂಟ್‌ಗಳಲ್ಲಿ ‘ಸುಲಲಿತ ಜೀವನ’ಕ್ಕೆ ಕರ್ನಾಟಕ ಅಪಾರ್ಟ್‌ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.

ಅಕ್ಷರ:

  1. ‘ವಿಶ್ವೇಶ್ವರಯ್ಯ ವಿದ್ಯಾ ಯೋಜನೆ’ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.
  2. ‘ಸಮನ್ವಯ ಯೋಜನೆ’ ಇದರಡಿ ತ್ವರಿತಗತಿಯಲ್ಲಿ ಖMಉ ಗಳು ಮತ್ತು ಐಖಐ ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.
  3. ಐಎಎಸ್/ಕೆಎಎಸ್/ಬ್ಯಾಂಕಿಂಗ್ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾಂಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.

ಆರೋಗ್ಯ:

  1. “ಮಿಷನ್ ಸ್ವಾಸ್ಥ್ಯ ಕರ್ನಾಟಕ’ದ ಅಡಿ ಸರ್ಕಾರಿ ಆಸ್ಪತ್ರೆ/ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್ ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.

ಅಭಿವೃದ್ಧಿ:

  1. ನಮ್ಮಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ‘ರಾಜ್ಯ ರಾಜಧಾನಿ ಪ್ರದೇಶ’ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‌ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.
  2. ಕರ್ನಾಟಕವನ್ನು ಎಲೆಕ್ಟಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾರ್ಜಿಂಗ್‌ ಸ್ಟೇಷನ್‌ಗಳ ಸ್ಥಾಪನೆ, 1,000 ಸ್ಟಾರ್ಟ್‌ ಅಪ್‌ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‌ಗಳನ್ನು ಎಲೆಕ್ಟಿಕ್ ಬಸ್‌ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇವಿ ಸಿಟಿ ಅಭಿವೃದ್ಧಿ
  3. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 130,000 ಕೋಟಿ ಮೊತ್ತದ ‘ಕೆ ಫಂಡ್’ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್ ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್ ಗಳನ್ನು ಸ್ಥಾಪಿಸುತ್ತೇವೆ.

ಆದಾಯ:

  1. ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒದಗಿಸಿ ಕರ್ನಾಟಕವನ್ನು ದೇಶದ ಅತ್ಯಂತ ಮೆಚ್ಚಿನ ಪ್ರವಾಸಿ ತಾಣವನ್ನಾಗಿ ರೂಪಿಸಲು ಕಲ್ಯಾಣ ಸರ್ಕ್ಯೂಟ್, ಬನವಾಸಿ ಸರ್ಕ್ಯೂಟ್, ಪರಶುರಾಮ್‌ ಸರ್ಕ್ಯೂಟ್ ಮತ್ತು ಕಾವೇರಿ ಸರ್ಕ್ಯೂಟ್, ಗಾಣಗಾಪುರ ಕಾರಿಡಾರ್ ಅನ್ನು ಅಭಿವೃದ್ಧಿಪಡಿಸಲು 7 1,500 ಕೋಟಿ ವಿನಿಯೋಗಿಸುತ್ತೇವೆ.
  2. ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಬೆಂಗಳೂರಿನ ಆಚೆ ಸೃಷ್ಟಿಸುವ ಲಾಜಿಸ್ಟಿಕ್ಸ್, ಕೈಗಾರಿಕಾ ಕ್ಲಸ್ಟರ್‌ಗಳು, ಸಂಪರ್ಕ ಮತ್ತು ರಫ್ತು ಸೌಲಭ್ಯಗಳನ್ನು ಒಳಗೊಂಡ ಸಮಗ್ರ ಯೋಜನೆಯನ್ನು ಸಂಯೋಜಿಸುವ ಮೂಲಕ “ಉತ್ಪಾದನಾ ಆಧರಿತ ಪ್ರೋತ್ಸಾಹ” ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸುತ್ತೇವೆ ಎಂದಿದೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸಚಿವರಾದ ಆರ್. ಅಶೋಕ್, ಡಾ. ಸುಧಾಕರ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಜರಿದ್ದರು.

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.