ಮೇ 3ರಂದು ಮೂಲ್ಕಿಯಲ್ಲಿ ಮೋದಿ ಸಮಾವೇಶ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ
Team Udayavani, May 1, 2023, 10:45 PM IST
ಮಂಗಳೂರು: ಮೂಲ್ಕಿಯಲ್ಲಿ ಮೇ 3ರಂದು ನಡೆಯಲಿರುವ ಪಿಎಂ ನರೇಂದ್ರ ಮೋದಿ ಸಮಾವೇಶ ಹಿನ್ನೆಲೆಯಲ್ಲಿ ಭದ್ರತಾದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆ ಹಿತದೃಷ್ಟಿಯಿಂದ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಾವೇಶ ಸ್ಥಳದ ವ್ಯಾಪ್ತಿಯಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ನಗರದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಬೆಳಗ್ಗೆ ಸುಮಾರು 10.30ರ ನಂತರ ಮೋದಿಯವರು ಕೊಲ್ನಾಡು ಹೆಲಿಪ್ಯಾಡ್‌ನಿಂದ ಕಾರ್ಯಕ್ರಮ ಸ್ಥಳಕ್ಕೆ ಹೋಗುವ ವರೆಗೆ ಹಳೆಯಂಗಡಿ ಜಂಕ್ಷನ್ ಬಳಿಯಿಂದ ಹಾಗೂ ಕಾರ್ನಾಡು ಬೈಪಾಸ್ ಬಳಿಯಿಂದ ಕಾರ್ಯಕ್ರಮದ ಸ್ಥಳದವರೆಗೆ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ವಾಹನ ಸಂಚಾರ ನಿಷೇಧಿಸಲಾಗಿದೆ.
ಪರ್ಯಾಯ ಸಂಚಾರ ವ್ಯವಸ್ಥೆ
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುವ ಎಲ್ಲ ರೀತಿಯ ವಾಹನಗಳು ಮೂಲ್ಕಿ ವಿಜಯ ಸನ್ನಿಧಿಯ ಬಳಿ ಎಡಕ್ಕೆ ಚಲಿಸಿ ಕಿನ್ನಿಗೋಳಿ, ಕಟೀಲ್, ಬಜಪೆ, ಕಾವೂರು ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಸಬೇಕು.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುವ ಎಲ್ಲ ರೀತಿಯ ವಾಹನಗಳು ಕೆ.ಪಿ.ಟಿ ಜಂಕ್ಷನ್‌ನಲ್ಲಿ ಬಲಕ್ಕೆ ಚಲಿಸಿ ಬೊಂದೇಲ್ – ಕಾವೂರು, ಬಜಪೆ, ಕಟೀಲು, ಕಿನ್ನಿಗೋಳಿ – ಮುಲ್ಕಿ ಕಡೆಗೆ ಸಂಚರಿಸಬಹುದು. ಕೂಳೂರು ಜಂಕ್ಷನ್‌ನಿಂದಲೂ ಕಾವೂರು ಮೂಲಕ ಸಂಚರಿಸಬಹುದು. ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ ಎಸ್-ಕೋಡಿ ಮಾರ್ಗವಾಗಿ ಮೂಲ್ಕಿ ಸಾಗಬಹುದು.
ವಾಹನ ಸಂಚಾರ ನಿಷೇಧಿತ ಸ್ಥಳಗಳು
ಮೇ 3ರಂದು ಬೆಳಗ್ಗೆ 7ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಹಳೆಯಂಗಡಿ ಜಂಕ್ಷನ್‌ನಿಂದ ಮೂಲ್ಕಿ ವಿಜಯ ಸನ್ನಿಧಿವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ಎರಡು ಬದಿಯ ರಸ್ತೆಗಳಲ್ಲಿ ಸಭಾ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಇತರೆ ಎಲ್ಲ ವಾಹನ ಸಂಚಾರ ನಿಷೇಧಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಕೊಲ್ನಾಡು ಜಂಕ್ಷನ್‌ನಿಂದ ಕೈಗಾರಿಕಾ ಪ್ರದೇಶಕ್ಕೆ ಹಾಗೂ ಕೆ.ಎಸ್. ರಾವ್ ನಗರಕ್ಕೆ ಹೋಗುವ ರಸ್ತೆಗಳಲ್ಲಿ ಸಭಾ ಕಾರ್ಯಕ್ರಮಕ್ಕೆ ಬರುವ ವಾಹನ ಹೊರತುಪಡಿಸಿ ಇತರೆ ಎಲ್ಲ ವಾಹನಗಳ ಸಂಚಾರ ನಿಷೇಧಿಸಿದೆ. ತುರ್ತು ಸೇವೆಯ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿದೆ.
ವಾಹನ ನಿಲುಗಡೆ ನಿಷೇಧಿಸಿದ ಸ್ಥಳಗಳು
ಹಳೆಯಂಗಡಿ ಜಂಕ್ಷನ್‌ನಿಂದ ಮೂಲ್ಕಿ ವಿಜಯ ಸನ್ನಿಧಿವರೆಗಿನ ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಕೆ.ಎಸ್. ರಾವ್ ನಗರಕ್ಕೆ ಹೋಗುವ ರಸ್ತೆ, ಕೊಲ್ನಾಡು ಜಂಕ್ಷನ್‌ನಿಂದ ಕೈಗಾರಿಕಾ ಪ್ರದೇಶಕ್ಕೆ ಹಾಗೂ ಕೆ.ಎಸ್. ರಾವ್ ನಗರಕ್ಕೆ ಹೋಗುವ ರಸ್ತೆ ಹಾಗೂ ಕಾರ್ನಾಡು ಬೈಪಾಸಿನಿಂದ ಕಾರ್ನಾಡು ಜಂಕ್ಷನ್‌ಗೆ ತೆರಳುವ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ವಾಹನ ನಿಲುಗಡೆ ಸ್ಥಳಗಳು
ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಬೆಳಗ್ಗೆ 9 ಗಂಟೆಯ ಒಳಗೆ ಸಾರ್ವಜನಿಕರನ್ನು ಕಾರ್ಯಕ್ರಮ ಸ್ಥಳದ ಸಾರ್ವಜನಿಕರ ಪ್ರವೇಶ ದ್ವಾರದ ಬಳಿ ಇಳಿಸಿ ಜಾಗತಿಕ ಬಂಟರ ಸಂಘದ ಬಳಿ ವಾಹನ ನಿಲುಗಡೆ ಸ್ಥಳದಲ್ಲಿ ನಿಲುಗಡೆ ಮಾಡಬೇಕು.
ಉಡುಪಿ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಕಾರ್ನಾಡು ಬೈಪಾಸಿನಲ್ಲಿ ಸಾರ್ವಜನಿಕರನ್ನು ಯು-ಟರ್ನ್ ಮಾಡಿ ಜಾಗತಿಕ ಬಂಟರ ಸಂಘದ ಬಳಿಯ ಪಡುಬೈಲು ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬೇಕು.
ಮಂಗಳೂರು -ಉಡುಪಿ ಕಡೆಯಿಂದ ಬರುವ ಸಾರ್ವಜನಿಕ ಲಘುವಾಹನಗಳು ಹಾಗೂ ದ್ವಿ-ಚಕ್ರ ವಾಹನಗಳು ಕಾರ್ಯಕ್ರಮ ಸ್ಥಳದ ಎದುರಿನ ಅಂದರೆ, ಉಡುಪಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎಡ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಬೇಕು.
ಮಂಗಳೂರು ಕಡೆಯಿಂದ ಆಗಮಿಸುವ ಸಾರ್ವಜನಿಕ ಲಘುವಾಹನಗಳು ಹಾಗೂ ದ್ವಿ-ಚಕ್ರ ವಾಹನಗಳು ಮಂಗಳೂರು- ಉಡುಪಿ ರಸ್ತೆಯ ಎಡಬದಿಯಲ್ಲಿರುವ ಸುಂದರ್‌ರಾಮ್ ಶೆಟ್ಟಿ ಕನ್ವೆನ್ಶನ್ ಹಾಲ್ ಬಳಿಯ ವಾಹನ ನಿಲುಗಡೆ ಸ್ಥಳದಲ್ಲಿ ನಿಲುಗಡೆ ಮಾಡಬೇಕು.
ವಿ.ಐ.ಪಿ ವಾಹನಗಳು ಕಾರ್ಯಕ್ರಮ ಸ್ಥಳದ ಪಶ್ಚಿಮ ಬದಿಯಲ್ಲಿನ ಅಂದರೆ ಮಂಗಳೂರು ಉಡುಪಿ ರಸ್ತೆಯ ಎಡಬದಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಟೇಕ್‌ಆಫ್ ಆಗದೆ ಹೆಲಿಪ್ಯಾಡ್ ನಲ್ಲೇ ನಿಂತ ಪ್ರಧಾನಿ ಭದ್ರತೆಗೆ ಬಂದ ಸೇನಾ ಹೆಲಿಕಾಪ್ಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.