ಉಡುಪಿ: ಕುಡಿಯುವ ನೀರಿನ ಸಮಸ್ಯೆ ಉಲ್ಬಣ
Team Udayavani, May 2, 2023, 7:00 AM IST
ಉಡುಪಿ: ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಗ್ರಾಮೀಣ ಭಾಗದಲ್ಲಿ ವಾರಕ್ಕೆ 2 ಎರಡು ದಿನ ನೀರು ಪೂರೈಕೆಯೂ ಕಷ್ಟವಾಗುತ್ತಿದೆ. ನಗರ ಪ್ರದೇಶದ ಪರಿಸ್ಥಿತಿಯೂ ಭಿನ್ನವಾಗಿಲ್ಲ.
ಜಿಲ್ಲೆಯ 155 ಗ್ರಾ.ಪಂ.ಗಳಲ್ಲಿ 46 ಗ್ರಾ.ಪಂಗಳು ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿವೆ. ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಅನುದಾನದ ಕೊರತೆಯಿಂದ ಕೆಲವು ಗ್ರಾ.ಪಂ.ಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆಯೂ ಕಷ್ಟವಾಗುತ್ತಿದೆ.
ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸರಕಾರದಿಂದ ಅನುದಾನ ಬರುತ್ತಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಬರಪೀಡಿತ ತಾಲೂಕುಗಳ ಘೋಷಣೆಯೂ ಆಗಿಲ್ಲ. ಹೀಗಾಗಿ ಗ್ರಾ.ಪಂ.ಗಳು ತಮ್ಮ ಸ್ವಂತ ನಿಧಿಯಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ.
ಬೋರ್ ಕೊರೆಯಲು ಅವಕಾಶ ಇಲ್ಲ
ಜಲ ಜೀವನ್ ಮಿಷನ್ ಅಡಿಯಲ್ಲಿ ಜಿಲ್ಲೆಯಲ್ಲಿ 31 ಬೋರ್‌ವೆಲ್‌ಗಳನ್ನು ಕೊರೆಯಲಾಗಿದೆ. ಅದರಲ್ಲಿ 28 ಫಲ ನೀಡಿದ್ದು, 3ರಲ್ಲಿ ನೀರು ಸಿಕ್ಕಿಲ್ಲ. ಈಗ ಹೊಸದಾಗಿ 148 ಬೋರ್‌ವೆಲ್ ಕೊರೆಯಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಅನುಮತಿ ಸಿಕ್ಕಿಲ್ಲ.
ಮೇ ಮೊದಲ ವಾರದೊಳಗೆ ಮಳೆ ಬಾರದೇ ಇದ್ದರೆ ಸಮಸ್ಯೆ ಇನ್ನಷ್ಟು ಉಲ್ಬಣಗೊಳ್ಳಲಿದೆ. ಉಡುಪಿ ನಗರದಲ್ಲೂ ನೀರಿನ ಸಮಸ್ಯೆ ದಿನೇದಿನೆ ಹೆಚ್ಚುತ್ತಿದೆ. ಎರಡು-ಮೂರು ದಿನಕ್ಕೆ ಒಮ್ಮೆ ನೀರು ಬಿಡಲಾಗುತ್ತಿದೆ. ಸ್ವರ್ಣಾ ನದಿಯ ಒಡಲು ಬರಿದಾಗುತ್ತಿದೆ. ಬಿಸಿಲಿನ ತಾಪವೂ ಹೆಚ್ಚಿರುವುದರಿಂದ ಅಣೆಕಟ್ಟು ಪ್ರದೇಶದಲ್ಲಿ ಶೇಖರಿಸಿರುವ ನೀರು ಹೆಚ್ಚಿನ ಪ್ರಮಾಣದಲ್ಲಿ ಆವೆಯಾಗುತ್ತಿವೆ. ಜಿಲ್ಲೆಯ ಕುಂದಾಪುರ, ಕಾರ್ಕಳ, ಬೈಂದೂರು ಹಾಗೂ ಕಾಪು ಭಾಗದಲ್ಲಿ ಸಮಸ್ಯೆ ಹೆಚ್ಚಿದೆ. ಎಲ್ಲದಕ್ಕೂ ಮಳೆಯೇ ಪರಿಹಾರ ಎಂಬಂತಾಗಿದೆ.
ನಿರ್ವಹಣೆ ಸವಾಲು
ರಾಜ್ಯ ಸರಕಾರದಿಂದ ಕುಡಿಯುವ ನೀರಿನ ನಿರ್ವಹಣೆಗೆ ಗ್ರಾ.ಪಂ.ಗಳಿಗೆ ಅನುದಾನ ಬಾರದೇ ಇರುವುದರಿಂದ ಸ್ವಂತ ಆದಾಯ ಕಡಿಮೆ ಇರುವ ಪಂಚಾಯತ್‌ಗಳು ಟ್ಯಾಂಕರ್ ನೀರು ಪೂರೈಕೆಗೆ ಕಷ್ಟಪಡುತ್ತಿವೆ. ಆದಾಯ ಚೆನ್ನಾಗಿರುವ ಗ್ರಾ.ಪಂ.ಗಳು ಹೇಗೂ ನಿರ್ವಹಣೆ ಮಾಡುತ್ತಿವೆ. ನೀರಿನ ಮೂಲವೇ ಬರಿದಾಗುತ್ತಿರುವುದರಿಂದ ನೀರು ಎಲ್ಲಿಂದ ಹೊಂದಿಸಿ ಮನೆ ಮನೆಗೆ ಒದಗಿಸುವುದು ಎಂಬ ಚಿಂತೆ ಬಹುತೇಕ ಗ್ರಾ.ಪಂ.ಗಳಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.