ಧರ್ಮಸ್ಥಳ: ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ : 201 ಜೋಡಿ ಗೃಹಸ್ಥಾಶ್ರಮಕ್ಕೆ
ಈವರೆಗೆ 12,576 ಜೋಡಿ ವಿವಾಹ
Team Udayavani, May 2, 2023, 7:42 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮೇ 3ರಂದು ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ. ಈಗಾಗಲೇ ನೋಂದಣಿ ಮಾಡಿಕೊಂ ಡಿರುವ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿವೆ.
ಮೇ 2ರಂದು ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ವಧುವಿಗೆ ಸೀರೆ, ರವಿಕೆ ಕಣ ಮತ್ತು ವರನಿಗೆ ಧೋತಿ, ಶಾಲು ನೀಡಲಾಗುತ್ತದೆ. ಮೇ 3ರಂದು ಸಂಜೆ 5ರಿಂದ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ವಿವಾಹ ನೆರವೇರಲಿರುವ ಅಮೃತವರ್ಷಿಣಿ ಸಭಾ ಮಂಟಪಕ್ಕೆ ಭವ್ಯ ಮೆರವಣಿಗೆಯಲ್ಲಿ ಸಾಗುವರು.
ದರ್ಶನ್ ಭಾಗಿ
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಕನ್ನಡ ಚಲನಚಿತ್ರ ನಟ ದರ್ಶನ್ ತೂಗುದೀಪ ಅವರು ವಧೂ-ವರರಿಗೆ ಮಂಗಲಸೂತ್ರ ವಿತರಿಸುವರು. ವಿವಾಹ ಸಮಾರಂಭವು ಅವರವರ ಜಾತಿ ಸಂಪ್ರದಾಯದಂತೆ ಸಂಭ್ರಮದಿಂದ ನೆರವೇರಲಿದೆ. ಬಳಿಕ ಅನ್ನಪೂರ್ಣ ಭೋಜನಾಲಯದಲ್ಲಿ ವಿವಾಹ ಭೋಜನ ಇರಲಿದೆ.
ಈವರೆಗೆ 12,576 ಜೋಡಿ ವಿವಾಹ
ವರದಕ್ಷಿಣೆ ಹಾಗೂ ಮದುವೆಗಾಗಿ ಆಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಪ್ರಾರಂಭಿಸಿದೆವು. ಬಳಿಕ ಪ್ರತೀ ವರ್ಷ ನಡೆಯುತ್ತಿದೆ. ಕಳೆದ ವರ್ಷದವರೆಗೆ 12,576 ಜೋಡಿಗಳಿಗೆ ವಿವಾಹವಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.