Congress ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರ: ರಾಜ್ಯಾದ್ಯಂತ ತೀವ್ರ ಆಕ್ರೋಶ
Team Udayavani, May 2, 2023, 5:45 PM IST
ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರ ಪ್ರಸ್ತಾಪವಾಗಿರುವುದು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಚಿವ ವಿ.ಸುನಿಲ್ ಕುಮಾರ್ ಅವರು, ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖ.ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುವುದು ಸೇರಿದಂತೆ ಕಾನೂನು ಕ್ರಮ ತೆಗೆದುಕೊಳ್ಳುವ ವಿಚಾರವನ್ನು ಕಾಂಗ್ರೆಸ್ ಪ್ರಸ್ತಾಪಿಸಿದೆ.
ಮಾನ್ಯ ಡಿಕೆಶಿ ಹಾಗೂ ಸಿದ್ದರಾಮಯ್ಯನವರೇ, ನಾವು ಪಿಎಫ್ ಐ ನಿಷೇಧ ಮಾಡಿದ್ದೇವೆಂಬ ಸಂಕಟ ಹಾಗೂ ದ್ವೇಷವನ್ನು ಭಜರಂಗದಳ ನಿಷೇಧದ ಮೂಲಕ ತೀರಿಸಿಕೊಳ್ಳಲು ಹೊರಟಿದ್ದೀರಾ ? ನಿಮ್ಮ ಹಿಂದೂ ವಿರೋಧಿ ನಿಲುವಿಗೆ ಧಿಕ್ಕಾರ ಎಂದು ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಹ್ಲಾದ ಜೋಶಿ, ದೇಶ ವಿಭಜನೆ ಮಾಡಲು ಹೊರಟ ದೇಶದ್ರೋಹಿ ಪಿಎಫ್ಐ ಅನ್ನು ಬ್ಯಾನ್ ಮಾಡಿದಕ್ಕೆ ಇದೀಗ ಕಾಂಗ್ರೆಸ್ ಪಕ್ಷವು ತುಷ್ಟಿಕರಣ ರಾಜಕಾರಣಕ್ಕಾಗಿ ದೇಶ ಭಕ್ತ ಸಂಘಟನೆ ಭಜರಂಗದಳ ನಿಷೇಧ ಮಾಡುವುದಾಗಿ ಘೋಷಿಸಿದೆ. ಆ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ದೇಶವನ್ನು ಏನೂ ಮಾಡಲು ಹೊರಟ್ಟಿದ್ದಾರೆ ಎಂದು ಕಿಡಿಕಾರಿದರು.
ಮಲೆನಾಡಿನ ಮನೆಗಳ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ಅವರ ಮೇಲೆ ನಾಯಿ ಬಿಡಲಾಗುವುದು ಎಂದು ಎಚ್ಚರಿಕೆಯ ಬೋರ್ಡ್ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.