ಒಂದು ಕೋ.ರೂ. ಸಾಲ ನೀಡುವುದಾಗಿ ಹೇಳಿ 10.14 ಲ.ರೂ. ಪಡೆದು ವಂಚನೆ
Team Udayavani, May 4, 2023, 5:55 AM IST
ಮಂಗಳೂರು: ಒಂದು ಕೋಟಿ ರೂ. ಸಾಲ ನೀಡುವುದಾಗಿ ಹೇಳಿ 10.14 ಲ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ಸ್ವಂತ ವ್ಯವಹಾರ ನಡೆಸುವ ಸಲುವಾಗಿ ಗೂಗಲ್ನಲ್ಲಿ ಸಾಲಕ್ಕಾಗಿ ಹುಡುಕಾಟ ನಡೆಸಿದ್ದರು. ಬಳಿಕ ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ತಾನು ಕ್ರಾಂತಿ ಫೈನಾನ್ಸ್ ಎಂಬ ಕಂಪೆನಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ಸ್ವಂತ ವ್ಯವಹಾರ ಮಾಡಲು ಒಂದು ಕೋ.ರೂ. ಸಾಲ ಒದಗಿಸುವುದಾಗಿ ನಂಬಿಸಿ ಆತನ ಕಂಪೆನಿಯ ಕೆಲವು ದಾಖಲೆಗಳನ್ನು ಕಳುಹಿಸಿಕೊಟ್ಟಿದ್ದ. ಅನಂತರ ಸಾಲ ಒದಗಿಸಲು ಪ್ರೊಸೆಸಿಂಗ್ ಶುಲ್ಕ ಪಾವತಿಸುವಂತೆ ದೂರುದಾರರಿಗೆ ತಿಳಿಸಿದ. ಮೊದಲಿಗೆ 12,500 ರೂ. ಪಾವತಿಸಲು ಹೇಳಿದ್ದ. ಅದರಂತೆ ದೂರುದಾರ ಹಣ ಪಾವತಿಸಿದರು.
ಅನಂತರವೂ ಹಣ ಪಾವತಿಸುವಂತೆ ಅಪರಿಚಿತ ವ್ಯಕ್ತಿ ಹೇಳಿ ಹಂತ ಹಂತವಾಗಿ 2022ರ ಡಿ.29ರಿಂದ ಜ.19ರ ಅವಧಿಯಲ್ಲಿ ಒಟ್ಟು 10,14,106 ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾನೆ. ಆದರೆ ಯಾವುದೇ ಹಣ ವಾಪಸ್ ನೀಡದೆ ವಂಚಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.