GST ಸಂಗ್ರಹದಲ್ಲಿ ದಾಖಲೆ: ಸದೃಢ ಆರ್ಥಿಕತೆಗೆ ಮತ್ತಷ್ಟು ಪುಷ್ಟಿ


Team Udayavani, May 4, 2023, 6:14 AM IST

GST

ಹೊಸ ಆರ್ಥಿಕ ವರ್ಷ 2023-24ನೇ ಸಾಲಿನ ಮೊದಲ ತಿಂಗಳಲ್ಲಿ 1.87ಲಕ್ಷ ಕೋಟಿ ರೂ. ಜಿಎಸ್‌ಟಿ ವರಮಾನ ಸಂಗ್ರಹವಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಆರು ವರ್ಷಗಳ ಹಿಂದೆ ಅಂದರೆ 2017ರ ಜುಲೈ 1ರಂದು ದೇಶಾದ್ಯಂತ ಜಿಎಸ್‌ಟಿ ಪದ್ಧತಿಯನ್ನು ಜಾರಿಗೊಳಿಸಿದ ಬಳಿಕ ಜಿಎಸ್‌ಟಿ ಸಂಗ್ರಹ ಪ್ರಮಾಣ ಸಾರ್ವಕಾಲಿಕ ಮಾಸಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಇದು ದೇಶದ ಒಟ್ಟಾರೆ ಆರ್ಥಿಕತೆಯ ದೃಷ್ಟಿಯಿಂದ ಆಶಾವಾದದ ಬೆಳವಣಿಗೆಯಾಗಿದ್ದು ಪ್ರಸಕ್ತ ಹಣಕಾಸು ವರ್ಷದಲ್ಲೂ ನಿರೀಕ್ಷೆಗೂ ಮೀರಿದ ಬೆಳವಣಿಗೆಯನ್ನು ದಾಖಲಿಸಿ ದೇಶದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯನ್ನು ಹುಟ್ಟು ಹಾಕಿದೆ.

ಕಳೆದ ವರ್ಷದ ಎಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಇದಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದ ಎಪ್ರಿಲ್‌ನಲ್ಲಿ ಶೇ. 12ರಷ್ಟು ಏರಿಕೆಯಾಗಿದೆ. ಇದೇ ವೇಳೆ ಕಳೆದ ಹಣಕಾಸು ವರ್ಷದಲ್ಲಿ 18.10 ಲ. ಕೋ. ರೂ.ಗಳಷ್ಟು ಜಿಎಸ್‌ಟಿ ಸಂಗ್ರಹವಾಗಿದೆ. ಇದರ ಹಿಂದಿನ ವರ್ಷಕ್ಕೆ ಹೋಲಿಸಿ ದರೆ ಒಟ್ಟಾರೆ ಜಿಎಸ್‌ಟಿ ವರಮಾನದಲ್ಲಿ ಶೇ. 22ರಷ್ಟು ಹೆಚ್ಚಳವಾಗಿದೆ. ಪ್ರತಿ ಯೊಂದೂ ವಲಯದಲ್ಲೂ ಜಿಎಸ್‌ಟಿ ಸಂಗ್ರಹ ಪ್ರಮಾಣ ಏರಿಕೆಯನ್ನು ಕಂಡಿ ರುವುದು ಹೊಸ ಭರವಸೆಯನ್ನು ಮೂಡಿಸಿದೆ. ಇದೇ ವೇಳೆ ಪ್ರಸಕ್ತ ವರ್ಷದ ಎ.20ರಂದು 9.8 ಲಕ್ಷ ವಹಿವಾಟುಗಳಿಂದ 68,228 ಕೋ. ರೂ. ಸಂಗ್ರಹವಾಗಿದ್ದು ಇದು ಒಂದೇ ದಿನದಲ್ಲಿ ಸಂಗ್ರಹವಾದ ಅತೀ ಗರಿಷ್ಠ ಜಿಎಸ್‌ಟಿ ವರಮಾನ.

ಜಾಗತಿಕ ಅನಿಶ್ಚಿತತೆಗಳ ಹೊರತಾಗಿಯೂ ಭಾರತೀಯ ಆರ್ಥಿಕತೆಯು ಪ್ರಗತಿಯ ಹಾದಿಯಲ್ಲಿ ದಾಪುಗಾಲಿಡುತ್ತಿರುವುದರ ಲಕ್ಷಣ ಇದಾಗಿದೆ ಎಂದು ಕೈಗಾರಿಕೆ, ವಾಣಿಜ್ಯ ಮತ್ತು ಆರ್ಥಿಕ ಕ್ಷೇತ್ರದ ತಜ್ಞರು ವಿಶ್ಲೇಷಿಸಿದ್ದಾರೆ. ಬೇಡಿಕೆಯಲ್ಲಿನ ಹೆಚ್ಚಳದ ಕಾರಣದಿಂದಾಗಿಯೇ ಎಲ್ಲ ವಲಯಗಳಲ್ಲಿಯೂ ಚೇತೋಹಾರಿ ಪ್ರಗತಿ ದಾಖಲಾಗಿದ್ದು ಸಹಜವಾಗಿಯೇ ವಹಿವಾಟು ಮತ್ತು ಆದಾಯದಲ್ಲಿ ಮುನ್ನಡೆ ಸಾಧಿಸುವಂತಾಗಿದೆ. ಜಿಎಸ್‌ಟಿ ಪದ್ಧತಿಯ ಬಗೆಗೆ ತೆರಿಗೆದಾರರಿಗೆ ವಿಶ್ವಾಸ ಮೂಡಿ ರುವುದನ್ನು ಇದು ಸಾಬೀತುಪಡಿಸಿದೆ. ಜಿಎಸ್‌ಟಿ ಜಾರಿಯಾದ ಬಳಿಕ ಸರಕಾರ ಹಂತಹಂತವಾಗಿ ವ್ಯವಸ್ಥೆಯಲ್ಲಿ ಸುಧಾರಣ ಕ್ರಮಗಳನ್ನು ಕೈಗೊಂಡಿದ್ದು ಕೂಡ ದಾಖಲೆ ಪ್ರಮಾಣ ತೆರಿಗೆ ಸಂಗ್ರಹಕ್ಕೆ ಸಹಕಾರಿಯಾಗಿರುವುದು ಸ್ಪಷ್ಟ. ಮತ್ತೂಂದು ಧನಾತ್ಮಕ ಬೆಳವಣಿಗೆ ಎಂದರೆ ಕಳೆದ ಕೆಲವು ತಿಂಗಳುಗಳಿಂದೀಚೆಗೆ ಜಿಎಸ್‌ಟಿ ಸಂಗ್ರಹ ಪ್ರಮಾಣ ಶೇ.11-13ರ ಬೆಳವಣಿಗೆಯನ್ನು ದಾಖಲಿಸಿರುವುದು. ಇದೇ ವೇಳೆ ಕರ್ನಾಟಕ ಜಿಎಸ್‌ಟಿ ವರಮಾನದಲ್ಲಿ 2ನೇ ಸ್ಥಾನದಲ್ಲಿದ್ದು ಕಳೆದ ತಿಂಗಳು 14,593 ಕೋ.ರೂ. ಸಂಗ್ರಹವಾಗಿರುವುದು ರಾಜ್ಯದ ಪಾಲಿಗೆ ಹೆಮ್ಮೆಯ ಸಂಗತಿ.

ಕೋವಿಡ್‌ ಹೊಡೆತದಿಂದಾಗಿ ಭಾರತದಲ್ಲಿಯೂ ಒಂದಿಷ್ಟು ಆರ್ಥಿಕ ತಲ್ಲಣ ಗಳು ಗೋಚರಿಸಿದ್ದವು. ಆದರೆ ಈ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಂತೆಯೇ ಉಕ್ರೇನ್‌ಮೇಲಿನ ರಷ್ಯಾ ಯುದ್ಧ ಜಗತ್ತಿನ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಪೂರೈಕೆ ಮತ್ತು ಬೇಡಿಕೆ ವ್ಯವಸ್ಥೆಗೆ ಪೆಟ್ಟು ಬಿದ್ದಿದೆ. ಇದರಿಂದಾ ಗಿಯೇ ಜಗತ್ತಿನ‌ ಬಹು ತೇಕ ರಾಷ್ಟ್ರಗಳು ಜಾಗತಿಕ ಆರ್ಥಿಕ ಹಿಂಜರಿತದ ಕರಿನೆರಳಲ್ಲಿ ಸಿಲುಕಿವೆ. ಆದರೆ ಈ ಎಲ್ಲ ಪ್ರತಿಕೂಲ ಪರಿಸ್ಥಿತಿಯಲ್ಲೂ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಪರಿ ಕಲ್ಪನೆಗಳಾದ ಆತ್ಮ ನಿರ್ಭರ ಭಾರತ, ಮೇಕ್‌ ಇನ್‌ ಇಂಡಿಯಾದಡಿ ದೇಶದಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಿ ಆರ್ಥಿಕ ಚಟುವಟಿಕೆಗಳು ವೇಗ ಪಡೆದುಕೊಳ್ಳಲು ಕಾರಣವಾಯಿತು. ಇದರಿಂದಾಗಿ ಎಲ್ಲ ಕ್ಷೇತ್ರಗಳಲ್ಲೂ ಭಾರತ ಸಹಜ ಸ್ಥಿತಿಗೆ ಮರಳಿದ್ದಲ್ಲದೆ ದೇಶದ ಆರ್ಥಿಕತೆಯೂ ಹಳಿಗೆ ಮರಳಿತು. ಇದಕ್ಕೆ ಸಾಕ್ಷ್ಯ ಎಂಬಂತೆ ಈಗ ಜಿಎಸ್‌ಟಿ ಸಂಗ್ರಹ ದಾಖಲೆ ಪ್ರಮಾಣದಲ್ಲಾಗಿದ್ದು ಸದ್ಯೋಭವಿಷ್ಯದಲ್ಲಿ ಭಾರತ ವಿಶ್ವದ ಬಲಾಡ್ಯ ಆರ್ಥಿಕ ರಾಷ್ಟ್ರಗಳ ಪಟ್ಟಿಯಲ್ಲಿ ಮುಂಚೂಣಿಯ ಸ್ಥಾನ ಪಡೆಯುವುದನ್ನು ಖಾತರಿ ಪಡಿಸಿದೆ.

ಟಾಪ್ ನ್ಯೂಸ್

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.