ಅಂಕೋಲಾಕ್ಕೆ ಪ್ರಧಾನಿ ಬಂದು ಹೋದ ಮೇಲೆ ಆತ್ಮವಿಶ್ವಾಸ ಹೆಚ್ಚಿದೆ: ವೆಂಕಟೇಶ ನಾಯಕ್


Team Udayavani, May 4, 2023, 3:49 PM IST

ಅಂಕೋಲಾಕ್ಕೆ ಪ್ರಧಾನಿ ಬಂದು ಹೋದ ಮೇಲೆ ಆತ್ಮವಿಶ್ವಾಸ ಹೆಚ್ಚಿದೆ: ವೆಂಕಟೇಶ ನಾಯಕ್

ಕಾರವಾರ: ಜಿಲ್ಲೆಯಲ್ಲಿ ಬುಧವಾರ ನಡೆದ ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ ನಂತರ ನಮ್ಮ ಆತ್ಮವಿಶ್ವಾಸ ಹೆಚ್ಚಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ್ ಹೇಳಿದರು‌.

ಕಾರವಾರದಲ್ಲಿ ಗುರುವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ಮಾಡಿದ ಅವರು ಬಿಜೆಪಿ ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಸಮಾವೇಶಕ್ಕೆ ನಿರೀಕ್ಷೆಗೂ ಮೀರಿ ಜನರು ಬಂದಿದ್ದರು. ಬಿಗಿ ಭದ್ರತಾ ಕಾರಣ ನೀರನ್ನು ಸಹ ಮಾಧ್ಯಮದವರಿಗೆ ಕೊಡಲಾಗದ್ದಕ್ಕೆ ಕ್ಷಮೆಯಾಚಿಸಿದರು. ಪಕ್ಷದ ಅಭ್ಯರ್ಥಿಯೋರ್ವರು, ಅನ್ಯ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಕಣಕ್ಕೆ ನಿಂತಿರುವ ಗೆಳೆಯನ ಗೆಲುವಿಗೆ ಯತ್ನಿಸಿದ ಸುದ್ದಿ ಇದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧ್ಯಕ್ಷರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. ಕಾರವಾರ ಅಭ್ಯರ್ಥಿ ವಿರುದ್ಧ ಪಕ್ಷೇತರನನ್ನು ನಿಲ್ಲಿಸಿದ ಸಂಗತಿಗೂ ಸಹ ವೆಂಕಟೇಶ ನಾಯಕ್ ಉತ್ತರಿಸಿ, ಈ ಬಗ್ಗೆ ಮಾಹಿತಿ ಇಲ್ಲ. ಅಂಥದ್ದೇನು ಪಕ್ಷದಲ್ಲಿ ಇಲ್ಲ ಎಂದರು.

ಗಂಗಾಧರ ಭಟ್ ಉಚ್ಛಾಟನೆ: ಕಾರವಾರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿರುವ ಗಂಗಾಧರ ಭಟ್ಟರನ್ನು ಪಕ್ಷದ ರಾಜ್ಯ ಶಿಸ್ತು ಸಮಿತಿ ಲಿಂಗರಾಜ್ ಅವರು ಉಚ್ಚಾಸಿದ್ದಾರೆ. ಹಾಗಾಗಿ ಗಂಗಾಧರ ಭಟ್ಟರಿಗೂ ಪಕ್ಷಕ್ಕೂ ಸಂಬಂಧ ಮುಗಿದಿದೆ ಎಂದರು. ಕಾಂಗ್ರೆಸ್ ಭಜರಂಗ ದಳ ನಿಷೇಧಕ್ಕೆ ಮುಂದಾಗುತ್ತದೆ ಎಂಬುದನ್ನು ಖಂಡಿಸುವೆ ಎಂದ ಅವರು ಹನುಮಂತ ನಮ್ಮ ದೇವರು. ದಕ್ಷಿಣ ಭಾರತದ ಮಹತ್ವದ ದೈವ. ಆತನ ಬಳಗ ಭಜರಂಗ ದಳವನ್ನು ನಿಷೇಧ ಮಾಡಲು ಮುಂದಾಗುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ನಿಲುವು ನಮಗೆ ಒಳ್ಳೆಯದೇ ಆಗಿದೆ. ಅದನ್ನು ಹನುಮ‌ ಭಕ್ತರು ಗಂಭೀರವಾಗಿ ತೆಗೆದುಕೊಳ್ಳಲಿದ್ದಾರೆಂದರು.

ಗೋ ಹತ್ಯೆ ನಿಷೇಧ ತೆಗೆದು ಹಾಕುವ ಲಕ್ಷಣ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ತಂದ ಕಾನೂನುಗಳು ರದ್ದಾಗಲಿ ಎಂದ ಅವರು ಇದಕ್ಕೆ ಜನ ಅವಕಾಶ ಕೊಡುವುದಿಲ್ಲ ಎಂದರು.

ಸಂಸದ ಸಿಂಗಾಪುರಕ್ಕೆ: ಪ್ರಧಾನಿ ನರೇಂದ್ರ ಮೋದಿ ಉತ್ತರ ಕನ್ನಡ  ಜಿಲ್ಲೆಗೆ  ಬಂದಾಗ ಸಂಸದ ಅನಂತ ಕುಮಾರ್ ಹೆಗಡೆ ಗೈರು ಹಾಜರಿ ಎಷ್ಟರ ಮಟ್ಟಿಗೆ ಸರಿ ಎಂದು ಪತ್ರಕರ್ತರು ಪ್ರಶ್ನಿಸಿದಾಗ , ಪ್ರಧಾನಿ ಕಾರ್ಯಕ್ರಮ ಇದೆ ಎಂದು ತಿಳಿಸಲು ಸಂಸದ ಅನಂತ ಕುಮಾರ್ ಹೆಗಡೆಗೆ ಪೋನ್ ಮಾಡಿದ್ದೆ. ಆಗ ಅವರು ಬರುತ್ತೇನೆ ಎಂದಿದ್ದರು. ನಂತರ ಮತ್ತೆ ಕರೆ ಮಾಡಿದಾಗ ಸಿಂಗಾಪುರ ಪ್ರವಾಸದಲ್ಲಿರುವುದಾಗಿ ಹೇಳಿದರು. ಪಕ್ಷದ ಚಟುವಟಿಕೆ, ಹಾಗೂ ಅಭ್ಯರ್ಥಿಗಳ ಪ್ರಚಾರಕ್ಕೆ ಸಹ ಕೆನರಾ‌ ಸಂಸದ ಅನಂತ ಕುಮಾರ್ ಹೆಗಡೆ ಬರುತ್ತಿಲ್ಲವಲ್ಲ ಎಂಬ ಪ್ರಶ್ನೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷರು ಮೌನವಾದರು. ಪಕ್ಷದ ಹಿರಿಯರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದಷ್ಟೇ ಉತ್ತರಿಸಿದರು.

ಬಿಜೆಪಿ ಬಾಗಿಲು ತಟ್ಟಿದ್ದ ಅಸ್ನೋಟಿಕರ್; ಬಿಜೆಪಿ ಬಾಗಿಲು ತಟ್ಟುತ್ತಿದ್ದ ಹಾಗೂ ಈ ಸಲ ಬಿಜೆಪಿ ಟಿಕೆಟ್ ಗೆ ಯತ್ನಿಸಿದ್ದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಇವತ್ತಿನಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ನಿಂತಿದ್ದರಲ್ಲಾ ಎಂಬ ಪ್ರಶ್ನೆಗೆ ಅವರು ಏನು ಅಂತ ಪಕ್ಷಕ್ಕೆ ಗೊತ್ತಿದೆ. ನಮ್ಮಲ್ಲಿ ಒಮ್ಮೆ ಹೊರ ಹಾಕಿದವರನ್ನು ಒಳಗೆ ತಗೋಳೋದು ಕಷ್ಟ. ಅವರು ಪಕ್ಷಾಂತರಿ. ಅವರ ಹಿನ್ನೆಲೆ ಕಾಂಗ್ರೆಸ್. ಹಾಗಾಗಿ ಅವರ ಬಗ್ಗೆ ನಾವು ಅಷ್ಟು ಯೋಚಿಸುವುದಿಲ್ಲ ಎಂದರು. ಅವರು ಯಾರ ಪ್ರಚಾರ ಮಾಡಿದರೂ ನಮಗೆ ಅಭ್ಯಂತರ ಇಲ್ಲ.ನಮ್ಮ ಅಭ್ಯರ್ಥಿ ಕಾರವಾರದಲ್ಲಿ 25 ಸಾವಿರ ಮತಗಳ  ಅಂತರದಲ್ಲಿ ಗೆಲ್ಲಲಿದ್ದಾರೆ ಎಂದರು‌ .

ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ನಾಯಕ, ಮನೋಜ್ ಭಟ್, ರೇಶ್ಮಾ ಮಾಳ್ಸೇಕರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.