ಪ್ರವೀಣ್ ನೆಟ್ಟಾರು ಪ್ರಕರಣ: ‘ಪಿಎಫ್‌ಐ ಮಾಸ್ಟರ್ ಟ್ರೈನರ್’ ತುಫೈಲ್ ವಿರುದ್ಧ ಚಾರ್ಜ್‌ಶೀಟ್

ಇನ್ನಿಬ್ಬರ ವಿರುದ್ಧ ಪೂರಕ ಚಾರ್ಜ್‌ಶೀಟ್ ; ಮತ್ತಷ್ಟು ಸ್ಪೋಟಕ ಮಾಹಿತಿ ಬಹಿರಂಗ

Team Udayavani, May 4, 2023, 3:36 PM IST

NIA (2)

ಹೊಸದಿಲ್ಲಿ : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಮಂಗಳವಾರ ಇನ್ನಿಬ್ಬರು ಆರೋಪಿ ಪಿಎಫ್‌ಐ ಕಾರ್ಯಕರ್ತರ ವಿರುದ್ಧ ಪೂರಕ ಚಾರ್ಜ್‌ಶೀಟ್ ಸಲ್ಲಿಸಿದೆ.

ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾದ ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ತುಫೈಲ್ ಎಂ ಹೆಚ್ ಎಂದು ಗುರುತಿಸಲಾಗಿದ್ದು, ಆತ ತಲೆಮರೆಸಿಕೊಂಡಿದ್ದ, ಎನ್‌ಐಎ ತಂಡವುಬೆಂಗಳೂರಿನಲ್ಲಿ ಪತ್ತೆಹಚ್ಚಿ ಬಂಧಿಸಿದೆ. ಕೊಡಗು ಜಿಲ್ಲೆಯ ನಿವಾಸಿಯಾದ ತುಫೈಲ್ ಎಂ.ಹೆಚ್. ಕೊಡಗು ಜಿಲ್ಲೆಯ ಪಿಎಫ್‌ಐ ‘ಸೇವಾ ತಂಡ’ಗಳ ಉಸ್ತುವಾರಿ ಮತ್ತು ನಿಷೇಧಿತರಿಗೆ ಶಸ್ತ್ರಾಸ್ತ್ರ ತರಬೇತಿ ಸೇರಿದಂತೆ ಸುಧಾರಿತ ತರಬೇತಿಯನ್ನು ನಿಯಮಿತವಾಗಿ ನೀಡುವ ‘ಪಿಎಫ್‌ಐ ಮಾಸ್ಟರ್ ಟ್ರೈನರ್’ ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ.

ಎನ್‌ಐಎ ತನಿಖೆಯ ಪ್ರಕಾರ ತುಫೈಲ್ ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮತ್ತು ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾದ ಎಂಬ ಮೂವರು ದುಷ್ಕರ್ಮಿಗಳಿಗೆ ಆಶ್ರಯ ನೀಡಿದ್ದರು ಎಂದು ತಿಳಿದು ಬಂದಿದೆ.

ತುಫೈಲ್  ಮತ್ತು ಮಹಮ್ಮದ್ ಜಬೀರ್  ವಿರುದ್ಧ ಐಪಿಸಿ ಮತ್ತು ಯುಎ (ಪಿ) ಆಕ್ಟ್, 1967 ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳನ್ನು ಚಾರ್ಜ್‌ಶೀಟ್ ಮಾಡಲಾಗಿದೆ.

ಜುಲೈ 26, 2022 ರಂದು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದ ಈ ಕೊಲೆ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು.ಆರಂಭಿಕ ಚಾರ್ಜ್‌ಶೀಟನ್ನು 2023 ಜನವರಿ 20 ರಂದು NIA ಸಲ್ಲಿಸಿತ್ತು. PFI ಹಲವರನ್ನು ಹತ್ಯೆಗೈಯಲು ರಹಸ್ಯ ಹಿಟ್ ಸ್ಕ್ವಾಡ್‌ಗಳನ್ನು (ಕಿಲ್ಲರ್ ಸ್ಕ್ವಾಡ್‌) ರಚಿಸಿದೆ ಎಂದು NIA ನಂತರ ಹೇಳಿತ್ತು.

ಆರೋಪಿ ಮಹಮ್ಮದ್ ಜಬೀರ್ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷನಾಗಿದ್ದು, ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿದ್ದ ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ. ಮಸೂದ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಹೇಳಿ ಪ್ರಚೋದನಕಾರಿ ಭಾಷಣವನ್ನೂ ಮಾಡಿದ್ದ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 2022 ಜುಲೈ 27 ರಂದು ಎಫ್‌ಐಆರ್ ಮತ್ತು 4 ಆಗಸ್ಟ್ 2022 ರಂದು NIA ಯಿಂದ ಮರು ನೋಂದಣಿಯಾದ ಪ್ರಕರಣಗಳ ತನಿಖೆಗಳು ಮುಂದುವರೆದಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.