UP ಮತ್ತೊಂದು ಎನ್‌ಕೌಂಟರ್; ಕುಖ್ಯಾತ ದರೋಡೆಕೋರ ಗುಂಡಿಗೆ ಬಲಿ
Team Udayavani, May 4, 2023, 3:47 PM IST
ಮೀರತ್ : ಉತ್ತರಪ್ರದೇಶದಲ್ಲಿ ಗುರುವಾರ ಮತ್ತೊಂದು ಎನ್‌ಕೌಂಟರ್ ನಡೆಸಲಾಗಿದ್ದು, ಯುಪಿ ಎಸ್‌ಟಿಎಫ್‌ನೊಂದಿಗಿನ ಎನ್‌ಕೌಂಟರ್‌ನಲ್ಲಿ ಕುಖ್ಯಾತ ದರೋಡೆಕೋರ ಅನಿಲ್ ದುಜಾನಾನನ್ನ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೀರತ್‌ನ ಭೋಲಾ ಝಲ್‌ನಲ್ಲಿ ಸಕ್ರಿಯವಾಗಿರುವ ಬಗ್ಗೆ ಖಚಿತವಾದ ಮಾಹಿತಿ ಪಡೆದ ನಂತರ ಎಸ್‌ಟಿಎಫ್ ಅನಿಲ್ ದುಜಾನಾನನ್ನು ಸುತ್ತುವರೆದಿದೆ. ಪೊಲೀಸರ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಎನ್‌ಕೌಂಟರ್ ಮಾಡಲಾಗಿದೆ.
ಪಶ್ಚಿಮ ಯುಪಿಯ ಕುಖ್ಯಾತ ಕ್ರಿಮಿನಲ್ ಅನಿಲ್ ದುಜಾನಾನನ್ನು 2021 ರಲ್ಲಿ ದೆಹಲಿ ಪೊಲೀಸರ ಕ್ರೈಂ ಬ್ರಾಂಚ್ ಬಂಧಿಸಿತ್ತು. ದುಜಾನಾ ವಿರುದ್ಧ 18 ಕೊಲೆಗಳು, ಸುಲಿಗೆ, ಲೂಟಿ, ಭೂಕಬಳಿಕೆ ಮತ್ತು ಇತರವು ಸೇರಿದಂತೆ 62 ಪ್ರಕರಣಗಳು ದಾಖಲಾಗಿವೆ. 2012 ರಿಂದ ಜೈಲಿನಲ್ಲಿದ್ದ, ಆದರೆ 2021 ರಲ್ಲಿ ಜಾಮೀನು ಪಡೆದಿದ್ದ. ನಂತರ, ಹಳೆಯ ಪ್ರಕರಣಗಳಲ್ಲಿ ಹಾಜರಾಗದ ಕಾರಣ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಅನ್ನು ಹೊರಡಿಸಿತ್ತು.
2012 ರಲ್ಲಿ ತ್ರಿವಳಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಂತರ, ಅನಿಲ್ ದುಜಾನಾ ಜೈಲಿನಿಂದ ಇತರ ಅಪರಾಧಿಗಳಾದ ರಣದೀಪ್ ಭಾಟಿ ಮತ್ತು ಅಮಿತ್ ಕಸಾನಾ ಅವರ ಸಹಾಯದಿಂದ ತನ್ನ ಅಪರಾಧ ಸಾಮ್ರಾಜ್ಯವನ್ನು ನಿರ್ವಹಿಸಲು ಪ್ರಾರಂಭಿಸಿದ್ದ. ದುಜಾನಾ ಜೈಲಿನಲ್ಲಿ ಕುಳಿತು ಕೊಲೆ, ಸುಲಿಗೆ ಮತ್ತು ಇತರ ಅಪರಾಧ ಚಟುವಟಿಕೆಗಳನ್ನು ಕಾರ್ಯಗತಗೊಳಿಸಲು ತನ್ನ ಸಹಾಯಕರನ್ನು ಯೋಜಿಸಿ ನಿರ್ದೇಶಿಸುತ್ತಿದ್ದ.
ದುಜಾನಾ ಕುಟುಂಬ ಸುಂದರ್ ಭಾಟಿ ಗ್ಯಾಂಗ್‌ನೊಂದಿಗೆ ದೀರ್ಘಕಾಲದ ದ್ವೇಷವನ್ನು ಹೊಂದಿತ್ತು. 2012 ರಲ್ಲಿ, ದುಜಾನಾ ಮತ್ತು ಅವನ ಗ್ಯಾಂಗ್ ಸುಂದರ್ ಭಾಟಿ ಮತ್ತು ಅವನ ನಿಕಟ ಸಹಚರರ ಮೇಲೆ AK-47 ರೈಫಲ್‌ನಿಂದ ದಾಳಿ ಮಾಡಿತ್ತು. ಎರಡು ಪ್ರತಿಸ್ಪರ್ಧಿ ಗ್ಯಾಂಗ್‌ಗಳು ಸರ್ಕಾರಿ ಗುತ್ತಿಗೆಗಳು, ಸ್ಟೀಲ್ ಬಾರ್‌ಗಳ ಕಳ್ಳತನ ಮತ್ತು ಟೋಲ್ ಪ್ಲಾಜಾ ಒಪ್ಪಂದಗಳ ಮೇಲೆ ಆಗಾಗ್ಗೆ ಮುಖಾಮುಖಿಯಾಗುತ್ತಿದ್ದವು. ಭಾಟಿ ಗ್ಯಾಂಗ್‌ನಿಂದ ಬೆದರಿಕೆಯಿಂದಾಗಿ, ಪೊಲೀಸರು ಬುಲೆಟ್ ಪ್ರೂಫ್ ಜಾಕೆಟ್‌ನಲ್ಲಿ ದುನಾನಾನನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.