ಗಂಗಾವತಿಯಲ್ಲಿ ಅಂಜನಾದ್ರಿ ಜಪ

Team Udayavani, May 5, 2023, 8:13 AM IST

anjanadri

ಕೊಪ್ಪಳ: ಭತ್ತದ ನಾಡು, ಅಂಜನಾದ್ರಿಯ ನೆಲೆವೀಡು ಗಂಗಾವತಿ ಚುನಾವಣ ಕಣ ರಂಗೇರಿದೆ. ಬಿಜೆಪಿ ಶಾಸಕ ಪರಣ್ಣಮುನವಳ್ಳಿ, ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್‌ ಅನ್ಸಾರಿ, ಕೆಆರ್‌ಪಿಪಿಯಿಂದ ಗಾಲಿ ಜನಾರ್ದನ ರೆಡ್ಡಿ ಆರ್ಭಟಿಸುತ್ತಿದ್ದಾರೆ.

ಹಾಲಿ ಶಾಸಕ ಪರಣ್ಣ ಮುನವಳ್ಳಿ ಹಿಂದುತ್ವದ ಜಪ ಮಾಡುತ್ತಲೇ ಗಂಗಾವತಿ ಕ್ಷೇತ್ರದಲ್ಲಿ ಗೆಲುವಿಗೆ ಯತ್ನ ನಡೆಸಿದ್ದಾರೆ. 2008ರಲ್ಲಿ ಗೆದ್ದಿದ್ದ ಪರಣ್ಣ 2018ರಲ್ಲೂ ಗೆಲುವು ಕಂಡಿದ್ದರು. 3ನೇ ಬಾರಿ ಗೆಲ್ಲಲು ಶತಾಯಗತಾಯ ಕಸರತ್ತಿನಲ್ಲಿದ್ದಾರೆ. ಇದು ಹಿಂದುತ್ವದ ಅಳಿವು- ಉಳಿವಿನ ಪ್ರಶ್ನೆ, ಹಿಂದುತ್ವ ಗೆಲ್ಲಲು ನನಗೆ ಮತ ನೀಡಿ ಎನ್ನುತ್ತಿದ್ದಾರೆ.
ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್‌ ಅನ್ಸಾರಿ 2004ರಲ್ಲಿ ಜೆಡಿಎಸ್‌ನಿಂದ ಗೆದ್ದಿದ್ದರು. ಮತ್ತೆ 2013ರಲ್ಲಿ ದಳದಿಂದ ಗೆದ್ದು, 2018ರಲ್ಲಿ ಕೈನಿಂದ ಸ್ಪ ರ್ಧಿಸಿ ಸೋಲು ಕಂಡಿದ್ದರು. ಈಗ ಮತ್ತೆ ಹೇಗಾದರೂ ಮಾಡಿ ಕ್ಷೇತ್ರ ಕೈ ವಶಕ್ಕೆ ರಣತಂತ್ರ ಹೆಣೆಯುತ್ತಿದ್ದಾರೆ. ಇವರಿಬ್ಬರಿಗೂ ಟಕ್ಕರ್‌ ನೀಡಲು ಅಂಜನಾದ್ರಿಯ ಜಪ ಮಾಡುತ್ತ, ಬಸವಣ್ಣ ಆದರ್ಶ ಎನ್ನುತ್ತಲೇ ಕೆಆರ್‌ಪಿಪಿ ಗಾಲಿ ಜನಾರ್ದನ ರೆಡ್ಡಿ ಕ್ಷೇತ್ರದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿ ಇಬ್ಬರನ್ನು ನಿದ್ದೆಗೆಡಿಸಿದ್ದಾರೆ. ನಗರಸಭೆ ಹಲವು ಸದಸ್ಯರು ಸೇರಿ, ಹೋಬಳಿ, ಗ್ರಾ.ಪಂ.ವಾರು ಮುಖಂಡರನ್ನು ಆಪರೇಶನ್‌ ಮಾಡಿ ತಮ್ಮ ಫ‌ುಟ್ಬಾಲ್‌ ಆಟ ಆರಂಭಿಸಿದ್ದಾರೆ. ಕ್ಷೇತ್ರದಲ್ಲೀಗ ತ್ರಿಕೋನ ಸ್ಪರ್ಧೆಯ ಆಟವು ಜೋರಾಗಿ ನಡೆಯುತ್ತಿದೆ.

ಪ್ಲಸ್‌-ಮೈನಸ್‌ ಲೆಕ್ಕಾಚಾರ: ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಕ್ಷೇತ್ರದಲ್ಲಿ ಕೆಲವೊಂದು ಹಗರಣಗಳ ಆರೋಪಕ್ಕೆ ತುತ್ತಾಗಿ ಮುಜುಗರ ಅನುಭವಿಸಿದ್ದಾರೆ. ಇದು ಅವರಿಗೆ ಮೈನಸ್‌ ಆಗುವ ಸಾಧ್ಯತೆ ಇದೆ. ಆದರೆ ಪ್ರತೀ ಹಳ್ಳಿಗೂ ಜನರೊಂದಿಗೆ ಸಂಪರ್ಕ ಹೊಂದಿರುವುದು ಇವರಿಗೆ ಪ್ಲಸ್‌. ಇನ್ನು ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್‌ ಅನ್ಸಾರಿ ಪ್ರಚಾರದ ವೈಖರಿಯೇ ವಿಭಿನ್ನವಾಗಿದೆ. ರಾತ್ರಿ ಪ್ರಚಾರ ಆರಂಭಿಸುವುದು ಕಾರ್ಯಕರ್ತರಲ್ಲಿ, ಮುಖಂಡರಲ್ಲಿ ಬೇಸರ ತರಿಸಿದೆ. ಸಂಜೆ 5ರಿಂದ ಮಧ್ಯರಾತ್ರಿವರೆಗೂ ಹಳ್ಳಿಯಲ್ಲಿ ಪ್ರಚಾರ ನಡೆಸುವ ಅನ್ಸಾರಿ ಟೀಕೆಗಳಿಗೆ ತುತ್ತಾಗಿದ್ದಾರೆ. ಇವರು ಜನಸಂರ್ಪಕಕ್ಕೆ ರಾತ್ರಿಯೇ ಇವರನ್ನು ಭೇಟಿಯಾಗುವ ಪರಿಸ್ಥಿತಿ ಇಂದಿಗೂ ಇದೆ. ಕೈನಲ್ಲಿ ಆಂತರಿಕ ಬೇಗುದಿ ಇನ್ನೂ ತಣ್ಣಗಾಗಿಲ್ಲ.

ಇನ್ನು ಜನಾರ್ದನ ರೆಡ್ಡಿ ಆಪರೇಶ‌ನ್‌ ಆಟ ಶುರು ಮಾಡಿರುವುದು, ಹಿಂದೆ ಬಳ್ಳಾರಿ ಗಣಿ ಹಗರಣಗಳ ಲೆಕ್ಕಾಚಾರ, ಜನರಿಗೆ ನೇರ ಸಂಪರ್ಕಕ್ಕೆ ಸಿಗದಿರುವುದು. ಯಾವುದೇ ನಾಯಕರ ಸಂಪರ್ಕಕ್ಕೂ ದೊರೆಯದೇ ಇರುವುದು ಮೈನಸ್‌ ಎಂದೆನಿಸಿದೆ. ಕ್ಷೇತ್ರದಲ್ಲಿ ಅಧಿ ಪತ್ಯಕ್ಕೆ ಎಲ್ಲ ಪ್ರಯೋಗಗಳು ಇವರಿಂದ ನಡೆದಿವೆ.

~ ದತ್ತು ಕಮ್ಮಾರ

ಟಾಪ್ ನ್ಯೂಸ್

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.