ಮಾನಹಾನಿಕರ ವೀಡಿಯೋ ಪ್ರಸಾರ ಬೆದರಿಕೆ: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ದೂರು
Team Udayavani, May 5, 2023, 5:20 AM IST
ಮಂಗಳೂರು: ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಆರೋಪಿಗಳಾದ ಶಿವಶಂಕರ್ ಶೆಟ್ಟಿ ಮತ್ತು ವಿಜೆ ಅಜಯ್ ಅಂಚನ್ ಮಾನಹಾನಿಕರ ವರದಿ ಬಿತ್ತರಿಸುವುದಾಗಿ ಬೆದರಿಕೆ ಹಾಕಿ 25 ಲ.ರೂ. ಬೇಡಿಕೆ ಇಟ್ಟಿದ್ದರು. ಹಣ ನೀಡದ ಕಾರಣಕ್ಕೆ ಯೂಟ್ಯೂಬ್ನಲ್ಲಿ ಮಾನಹಾನಿಕರ ವೀಡಿಯೋ ಪ್ರಸಾರ ಮಾಡಿ ಬೇಡಿಕೆ ಈಡೇರಿಸದಿದ್ದಲ್ಲಿ ಇನ್ನಷ್ಟು ವೀಡಿಯೋಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಎ. 28ರಂದು ವಿಜೆ ಅಜಯ್ ಅಂಚನ್ ಮಾಲಕತ್ವದ ಯೂಟ್ಯೂಬ್ ಚಾನೆಲ್ನಲ್ಲಿ ಒಂದು ವೀಡಿಯೋವನ್ನು ಹರಿಯಬಿಟ್ಟಿದ್ದು ಈ ವೀಡಿಯೋದಲ್ಲಿ ಅಜಯ್ ಅಂಚನ್, ಶಿವಶಂಕರ್ ಶೆಟ್ಟಿ ಅವರನ್ನು ಸಂದರ್ಶಿಸುವ ರೀತಿಯಲ್ಲಿ ತೋರಿಸಲಾಗಿದೆ. ಅದರಲ್ಲಿ ಅಶೋಕ್ ರೈ ಜನರಿಗೆ ಮೋಸ ಮಾಡಿದ್ದಾರೆ ಎಂಬುದಾಗಿ ಸುಳ್ಳು ಹೇಳಿಕೆ ನೀಡಲಾಗಿದೆ ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Thumbe: ಅಗೆದಲ್ಲಿ ಕಡೆಗೂ ಡಾಮರು
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.