ಪಾಕ್ಗೆ ರಹಸ್ಯ ಮಾಹಿತಿ ಸೋರಿಕೆ: ಡಿಆರ್ಡಿಒ ವಿಜ್ಞಾನಿ ಬಂಧನ
Team Udayavani, May 5, 2023, 6:22 AM IST
ಮುಂಬಯಿ: ಭಾರತದ ರಕ್ಷಣ ವ್ಯವಸ್ಥೆಯ ಕೆಲವು ಗೌಪ್ಯ ಮಾಹಿತಿಗಳನ್ನು ಪಾಕಿಸ್ಥಾನದ ಗುಪ್ತಚರ ಏಜೆಂಟ್ಗೆ ಸೋರಿಕೆ ಮಾಡಿರುವ ಆರೋಪದ ಮೇರೆಗೆ ವಿಜ್ಞಾನಿಯೊಬ್ಬರನ್ನು ಗುರುವಾರ ಬಂಧಿಸಲಾಗಿದೆ.
ರಕ್ಷಣ ಸಂಶೋಧನ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ)ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಹಿರಿಯ ಹುದ್ದೆಯಲ್ಲಿದ್ದ ಅಧಿಕಾರಿಯನ್ನು ಮಹಾರಾಷ್ಟ್ರ ಭಯೋತ್ಪಾದನ ನಿಗ್ರಹ ತಂಡ (ಎಟಿಎಸ್) ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಎಟಿಎಸ್ ಪ್ರಕಟನೆಯನ್ನೂ ಹೊರಡಿಸಿದೆ. ಅದರಲ್ಲಿ ಆರೋಪಿಯು ಪಾಕಿಸ್ಥಾನದ ಗುಪ್ತಚರ ಸಂಸ್ಥೆಯ ಏಜೆಂಟ್ ಜತೆಗೆ ವಾಟ್ಸ್ಆ್ಯಪ್ ಹಾಗೂ ವೀಡಿಯೋ ಕಾಲ್ಗಳ ಮೂಲಕ ಸಂಪರ್ಕದಲ್ಲಿದ್ದರು.
ತಮ್ಮ ಅಧಿಕಾರದ ದುರುಪಯೋಗ ಪಡಿಸಿಕೊಂಡು, ದೇಶದ ಭದ್ರತೆಗೆ ತೊಡಕಾಗುವಂಥ ಗೌಪ್ಯ ಮಾಹಿತಿಗಳನ್ನು ಪಾಕ್ ಗುಪ್ತಚರ ಸಂಸ್ಥೆಗೆ ಹಂಚಿಕೊಂಡಿದ್ದಾರೆ. ಈ ಹಿನ್ನೆಲೆ ಮುಂಬಯಿಯ ಕಲಾಚೌಕಿ ಎಟಿಎಸ್ ಘಟಕದಲ್ಲಿ ರಹಸ್ಯ ಮಾಹಿತಿ ಸೋರಿಕೆ ಸಂಬಂಧಿತ ಕಾಯ್ದೆಗಳ ಅನ್ವಯ ಕೇಸು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಘಟನೆಯು ಹನಿಟ್ರ್ಯಾಪ್ ಎಂದು ಆರೋಪಿ ತಿಳಿಸಿದ್ದಾರೆ. ಆದ್ದರಿಂದ ಆ ನಿಟ್ಟಿನಲ್ಲೂ ತನಿಖೆಯನ್ನು ಚುರುಕುಗೊಳಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.