ನಾಳೆ ಬಿ.ಸಿ.ರೋಡಿನಲ್ಲಿ ಯುಪಿ ಸಿಎಂ ಯೋಗಿ ರೋಡ್‌ ಶೋ

40 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ: ದೇವಪ್ಪ ಪೂಜಾರಿ

Team Udayavani, May 5, 2023, 6:29 PM IST

1-asdsads

2018ರ ಚುನಾವಣೆಯ ಸಂದರ್ಭ ಯೋಗಿ ಅವರು ಬಿ.ಸಿ.ರೋಡಿನಲ್ಲಿ ರಾಜೇಶ್‌ ನಾೖಕ್‌ ಪರ ಪ್ರಚಾರ ನಡೆಸಿದ ಸಂದರ್ಭ.

ಬಂಟ್ವಾಳ: ಬಿಜೆಪಿಯ ಪ್ರಚಾರಕ್ಕೆ ಮತ್ತಷ್ಟು ಬಿರುಸು ನೀಡಲು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮೇ 6ರಂದು ಸಂಜೆ 4ಕ್ಕೆ ಬಿ.ಸಿ.ರೋಡಿನಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಪರ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 40 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು.

ಅವರು ಗುರುವಾರ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯೋಗಿ ಕಾರ್ಯಕ್ರಮದ ದೃಷ್ಟಿಯಿಂದ ಈಗಾಗಲೇ ಪಕ್ಷದ ವತಿಯಿಂದ 59 ಗ್ರಾಮಗಳ ಎಲ್ಲಾ ಬೂತ್‌ಗಳಲ್ಲೂ ಸಭೆಗಳನ್ನು ನಡೆಸಲಾಗಿದ್ದು, ಪ್ರತಿ ಬೂತ್‌ನಿಂದ ಕನಿಷ್ಠ 100 ಮಂದಿ ಭಾಗವಹಿಸಲಿದ್ದಾರೆ.

ಸಂಜೆ 4ರ ಸುಮಾರಿಗೆ ಬಂಟ್ವಾಳ ವಿದ್ಯಾಗಿರಿ ಎಸ್‌ವಿಎಸ್‌ ಕಾಲೇಜಿನ ಬಳಿಯ ಹೆಲಿಪ್ಯಾಡ್‌ಗೆ ಆಗಮಿಸಲಿದ್ದು, ಬಿ.ಸಿ.ರೋಡಿನ ಕೈಕಂಬದಿಂದ ಖಾಸಗಿ ಬಸ್ಸು ನಿಲ್ದಾಣದವರೆಗೆ ರೋಡ್‌ ಶೋ ನಡೆಸಲಿರುವ ಯೋಗಿ ಅವರು ಬಳಿಕ ರೋಡ್‌ ಶೋ ವಾಹನದಲ್ಲೇ ನಿಂತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್‌ ಕಟೀಲು, ಅಭ್ಯರ್ಥಿ ರಾಜೇಶ್‌ ನಾೖಕ್‌ ಸೇರಿದಂತೆ ಮೊದಲಾದ ಪ್ರಮುಖರು ಪಾಲ್ಗೊಳ್ಳುತ್ತಾರೆ.

ಭದ್ರತೆಯ ದೃಷ್ಟಿಯಿಂದ ರೋಡ್‌ ಶೋ ವೇಳೆ ವಾಹನ ಸಂಚಾರ ನಿಷೇಧದ ಜತೆಗೆ ಸಂಪೂರ್ಣವಾಗಿ ಬ್ಯಾರಿಕೇಡ್‌ ಅಳವಡಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕಾರ್ಯಕರ್ತರನ್ನೂ ಮೆಟಲ್‌ ಡಿಟೆಕ್ಟರ್‌ ಮೂಲಕ ತಪಾಸಣೆ ನಡೆಸಿಯೇ ಒಳಗೆ ಬಿಡಲಿದ್ದು, ಸುಮಾರು 500 ಮಂದಿ ಸ್ವಯಂಸೇವಕರು ರೋಡ್‌ ಶೋ ವಾಹನದ ಹಿಂದೆ-ಮುಂದೆ ಇರುತ್ತಾರೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್‌ ಇಲಾಖೆ ತೆಗೆದುಕೊಳ್ಳುವ ನಿರ್ಧಾರಗಳಿಗೆ ಪಕ್ಷ ಸಹಕಾರ ನೀಡಲಿದೆ ಎಂದರು.

ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ದೃಷ್ಟಿಯಿಂದ ಈಗಾಗಲೇ ಪ್ರಚಾರ ಕಾರ್ಯ ವ್ಯವಸ್ಥಿತ ರೀತಿಯಲ್ಲಿ ನಡೆದಿದ್ದು, ಅಭ್ಯರ್ಥಿ ರಾಜೇಶ್‌ ನಾೖಕ್‌ ಜತೆಗೆ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಹರಿಕೃಷ್ಣ ಬಂಟ್ವಾಳ್‌ ಸೇರಿದಂತೆ ಹಲವು ನಾಯಕರು ಗ್ರಾಮಗಳಿಗೆ ಕಾರ್ಯಕರ್ತರ ಸಭೆ, ಮನೆ ಮನೆ ಪ್ರಚಾರ ನಡೆಸಿದ್ದಾರೆ ಎಂದರು.

ರವೀಶ್‌ ಶೆಟ್ಟಿ ಕರ್ಕಳ, ಎ.ಗೋವಿಂದ ಪ್ರಭು, ಹರಿದಾಸ್‌, ಚಿದಾನಂದ ರೈ ಕಕ್ಯ, ಪುರುಷೋತ್ತಮ ಶೆಟ್ಟಿ ವಾಮದಪದವು, ಕಿಶೋರ್‌ ಪಲ್ಲಿಪಾಡಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಗೆಲುವಿನ ಅಂತರ ದ್ವಿಗು
ಬಂಟ್ವಾಳದಲ್ಲಿ ಕಳೆದ ಬಾರಿ 16 ಸಾವಿರ ಮತಗಳಿಂದ ಬಿಜೆಪಿ ಗೆದ್ದಿದ್ದು, ಅದನ್ನು ದ್ವಿಗುಣಗೊಳಿಸುವ ದೃಷ್ಟಿಯಿಂದ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಸೋಲಿನ ಭೀತಿಯಿಂದ ಕಾಂಗ್ರೆಸ್‌ ಹತಾಶ ಹೇಳಿಕೆಗಳನ್ನು ನೀಡುತ್ತಿದ್ದು, ಸಮುದಾಯಗಳನ್ನು ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದೆ ಎಂದು ದೇವಪ್ಪ ಪೂಜಾರಿ ತಿಳಿಸಿದರು.

ಬಜರಂಗ ದಳ ನಿಷೇಧ ಪ್ರಸ್ತಾಪಕ್ಕೆ ಖಂಡನೆ
ಬಂಟ್ವಾಳದಲ್ಲಿ ರಾಜೇಶ್‌ ನಾೖಕ್‌ ಯಾವ ರೀತಿ ಅಭಿವೃದ್ಧಿ ಮಾಡಿದ್ದಾರೆ ಎಂಬುದು ಕ್ಷೇತ್ರದ ಮತದಾರರಿಗೆ ತಿಳಿದಿದ್ದು, ಹೀಗಾಗಿ ಮತ್ತೆ ಅವರನ್ನು ಗೆಲ್ಲಿಸುವ ಕಾರ್ಯ ಮಾಡಲಿದ್ದಾರೆ. ಒಂದು ವರ್ಗದ ಓಲೈಕೆಯ ದೃಷ್ಟಿಯಿಂದ ಕಾಂಗ್ರೆಸ್‌ ಬಜರಂಗ ದಳ ನಿಷೇಧದ ಕುರಿತು ಪ್ರಸ್ತಾಪಿಸಿದ್ದು, ಬಂಟ್ವಾಳ ಬಿಜೆಪಿ ಅದನ್ನು ಖಂಡಿಸುತ್ತದೆ ಎಂದು ಅಧ್ಯಕ್ಷರು ತಿಳಿಸಿದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

ud

Puttur: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.