ಉಡುಪಿ: ಪೋಕ್ಸೋ ಪ್ರಕರಣದಲ್ಲಿ ಸಾಕ್ಷ್ಯ ಹೇಳಿದ ವ್ಯಕ್ತಿಯ ಅಪಹರಿಸಿ ಹಲ್ಲೆ
Team Udayavani, May 5, 2023, 9:20 PM IST
ಉಡುಪಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷ್ಯ ಹೇಳಿದ ವ್ಯಕ್ತಿಯನ್ನು ಅಪಹರಿಸಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಹಿಂಸೆ ನೀಡಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಟ್ಟೆ ಲೆಮಿನಾ ಕ್ರಾಸ್ ನಿವಾಸಿ ಅಬ್ದುಲ್ ಜಬ್ಟಾರ್ (38) ಮೇಲೆ ಹಲ್ಲೆ ನಡೆದಿದೆ. ಜಬ್ಟಾರ್ ಮೇ 3ರಂದು ಉಡುಪಿ ಪೋಕ್ಸೋ ನ್ಯಾಯಾಲಯಕ್ಕೆ ಸಾಕ್ಷಿ ನುಡಿಯಲು ಹೋಗಿದ್ದರು. ಸಾಕ್ಷಿ ನುಡಿದು ಸಂಬಂಧಿಕರ ಮನೆಗೆ ಆಟೋದಲ್ಲಿ ತೆರಳುತ್ತಿದ್ದಾಗ ಉಡುಪಿ ಗುಂಡಿಬೈಲು ರಸಿಕಾ ಬಾರ್ ಬಳಿ ಎರಡು ಕಾರು ಮತ್ತು ಒಂದು ದ್ವಿಚಕ್ರ ವಾಹನದಲ್ಲಿ ಬಂದು ಅಡ್ಡಗಟ್ಟಿ ಅಬ್ದುಲ್ ಜಬ್ಟಾರ್ ಅವರ ಬಟ್ಟೆಯನ್ನು ಕಳಚಿ ಹಲ್ಲೆ ಮಾಡಿದ್ದಾರೆಂದು ದೂರಲಾಗಿದೆ.
ತಂಡದಲ್ಲಿದ್ದ ಆರೋಪಿಗಳಾದ ಫಾರೂಕ್, ಶಾರೂಕ್, ಅನಿಲ್, ಇಕ್ಬಾಲ್ ಸಾಣೂರ್ ಸೇರಿಕೊಂಡು ಜಬ್ಟಾರ್ ಅವರನ್ನು ಆಟೋ ರಿಕ್ಷಾದಿಂದ ಹೊರಗೆ ಎಳೆದು ಕಾರಿನೊಳಗೆ ಬಲಾತ್ಕಾರವಾಗಿ ಕೂರಿಸಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅಲ್ಲಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಬಳಿಕ ಮೇ 4ರಂದು ಬೆಳಗ್ಗೆ 10 ಗಂಟೆಗೆ ಬಂಟಕಲ್ ಬಿ.ಸಿ. ರೋಡ್ ಪಂಜಿಮಾರು ಬಳಿ ಕರೆದೊಯ್ದು ಪೊದೆಯೊಂದಕ್ಕೆ ದೂಡಿ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಿ ನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.