ರಾಹುಲ್ಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಬಡ್ತಿಗೆ ವಿರೋಧ
Team Udayavani, May 6, 2023, 7:22 AM IST
ಹೊಸದಿಲ್ಲಿ: ರಾಹುಲ್ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣದಲ್ಲಿ ತೀರ್ಪು ನೀಡಿದ್ದ ನ್ಯಾಯಾಧೀಶರು ಸಹಿತ 68 ನ್ಯಾಯಾಧೀಶರಿಗೆ ನೀಡಿರುವ ಬಡ್ತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ನ್ಯಾಯಮೂರ್ತಿಗಳಾದ ಎಂ.ಎಆರ್.ಷಾ ಅವರ ನ್ಯಾಯಪೀಠವು ಈ ಅರ್ಜಿಯನ್ನು ಮೇ 8ರಂದು ವಿಚಾರಣೆ ನಡೆಸಲಿದೆ. ಶೇ.65 ಮೀಸಲಾತಿ ಆಧಾರದಲ್ಲಿ ಈ 68 ನ್ಯಾಯಾಧೀಶರಿಗೆ ಬಡ್ತಿ ನೀಡಲಾಗಿತ್ತು. ಆದರೆ ಈ ಬಡ್ತಿಯನ್ನು ರದ್ದುಗೊಳಿಸುವಂತೆ ಹಾಗೂ ಮೀಸಲಾತಿ ಜತಗೆ ಬಡ್ತಿಯಲ್ಲಿ ನ್ಯಾಯಾ ಧೀಶರ ಹಿರಿತನದ ಆಧಾರವನ್ನು ಪರಿಗಣ ಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಇದರಲ್ಲಿ ಸೂರತ್ ಮ್ಯಾಜಿಸ್ಟ್ರೇಟ್ ನ್ಯಾಯಾ ಲಯದ ನ್ಯಾಯಾಧೀಶ, ರಾಹುಲ್ ವಿರುದ್ಧ ತೀರ್ಪು ಹಸು¾ಖ್ಬಾಯ್ ಹರೀಶ್ ಕೂಡ ಸೇರಿದ್ದಾರೆ. ಹಿರಿಯ ಸಿವಿಲ್ ಜಡ್ಜ್ ಕೇಡರ್ನ ನ್ಯಾಯಾಂಗ ಅಧಿಕಾರಿಗಳಾದ ರವಿಕುಮಾರ್ ಮೆಹ್ತಾ ಹಾಗೂ ಸಚಿನ್ ಪ್ರತಾಪ್ರಾಯ ಮೆಹ್ತಾ ಸುಪ್ರೀಂಕೋರ್ಟ್ ನಲ್ಲಿ ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಮಾರ್ಚ್10 ರಂದು ಗುಜರಾತ್ ಹೈಕೋರ್ಟ್ 68 ಮಂದಿಯ ಈ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು.
ವಿದ್ಯಾರ್ಥಿಗಳೊಂದಿಗೆ ರಾಹುಲ್ ಸಂವಾದ
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಿಲ್ಲಿ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ಪುರುಷರ ಹಾಸ್ಟೆಲ್ನಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಬಿಳಿ ಟೀಶರ್ಟ್, ಪ್ಯಾಂಟ್ ಧರಿಸಿದ್ದ ಅವರು ವಿದ್ಯಾರ್ಥಿಗಳ ಸಮಸ್ಯೆಗಳೇನೆಂದು ತಿಳಿಯಲು ಬಯಸಿದ್ದರು ಎಂದು ಮೂಲ ಗಳು ಹೇಳಿವೆ.
ಕಳೆದ ತಿಂಗಳು ರಾಹುಲ್ ಗಾಂಧಿ, ಯುಪಿಎಸಿ ಪರೀಕ್ಷೆಗಳಿಗೆ ಸಿದ್ಧರಾಗಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದರು. ಆಗವರು ರಸ್ತೆ ಬದಿಯಲ್ಲಿ ಒಂದು ಕುರ್ಚಿ ಹಾಕಿಕೊಂಡು ಕುಳಿತು ವಿದ್ಯಾರ್ಥಿಗಳು ಮತ್ತವರ ನಿರೀಕ್ಷೆಗಳನ್ನು ಆಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.