ಟೆರರ್ ಚಿತ್ರದಲ್ಲಿ ಶ್ರೀನಗರ ಕಿಟ್ಟಿ
Team Udayavani, May 6, 2023, 2:12 PM IST
ನಟ ಆದಿತ್ಯ ಅಭಿನಯದ “ಟೆರರ್’ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಈಗಾಗಲೇ ಸದ್ದಿಲ್ಲದೆ ಸಿನಿಮಾದ ಶೇಕಡ 30ರಷ್ಟು ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ “ಟೆರರ್’ ಸಿನಿಮಾದ ಮೊದಲ ಟೀಸರ್ ಅನ್ನು ಬಿಡುಗಡೆ ಮಾಡಿದೆ.
ಇನ್ನೊಂದು ವಿಶೇಷವೆಂದರೆ, “ಟೆರರ್’ ಸಿನಿಮಾದಲ್ಲಿ ನಟ ಆದಿತ್ಯ ಅವರೊಂದಿಗೆ ನಟ ಶ್ರೀನಗರ ಕಿಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇನ್ನು ಆದಿತ್ಯ ಮತ್ತು ಶ್ರೀನಗರ ಕಿಟ್ಟಿ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದರ ಬಗ್ಗೆ ಮಾತನಾಡುವ “ಟೆರರ್’ ಸಿನಿಮಾದ ನಿರ್ಮಾಪಕ ಸಿಲ್ಕ್ ಮಂಜು, “ಸುಮಾರು 20 ವರ್ಷಗಳ ಹಿಂದೆಯೇ “ಕಂಠಿ’ ಸಿನಿಮಾದ ನಿರ್ದೇಶಕ ಭರತ್ ಅವರ ನಿರ್ದೇಶನದಲ್ಲಿ ಆದಿತ್ಯ ಮತ್ತು ಶ್ರೀನಗರ ಕಿಟ್ಟಿ ಅವರೊಂದಿಗೆ ಒಟ್ಟಿಗೆ ಸಿನಿಮಾ ಮಾಡುವ ಯೋಜನೆ ಹಾಕಿಕೊಂಡಿದ್ದೆವು. ಈ ಸಿನಿಮಾಕ್ಕೆ ಒಂದಷ್ಟು ತಯಾರಿ ಕೂಡ ನಡೆದಿತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಮುಂದುವರೆಯಲಿಲ್ಲ. ಈಗ ಮತ್ತೂಮ್ಮೆ ಆದಿತ್ಯ ಮತ್ತು ಶ್ರೀನಗರ ಕಿಟ್ಟಿ ಇಬ್ಬರನ್ನೂ ಒಂದೇ ಸಿನಿಮಾದಲ್ಲಿರುವಂತೆ ಮಾಡುವ ಅವಕಾಶ ಬಂದಿದೆ.
“ಟೆರರ್’ ಸಿನಿಮಾದಲ್ಲಿ ಆದಿತ್ಯ ನಾಯಕನಾಗಿ ಕಾಣಿಸಿಕೊಂಡರೆ, ಶ್ರೀನಗರ ಕಿಟ್ಟಿ ಅಂಥದ್ದೇ ಮತ್ತೂಂದು ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ’ ಎಂದು ಮಾಹಿತಿ ನೀಡಿದರು. ಸುಮಾರು ಆರು ವರ್ಷಗಳ ಬಳಿಕ ಶ್ರೀನಗರ ಕಿಟ್ಟಿ “ಗೌಳಿ’ ಸಿನಿಮಾದ ಮೂಲಕ ರೀ-ಎಂಟ್ರಿ ಪಡೆದುಕೊಂಡಿದ್ದರು. ಅದಾದ ಬಳಿಕ ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ನಟ ಪ್ರಜ್ವಲ್ ದೇವರಾಜ್ ಅಭಿನಯದ “ವೀರಂ’ ಸಿನಿಮಾದಲ್ಲಿ ನಾಯಕನ ಅಣ್ಣನ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದರು.
ಅದಾದ ಬಳಿಕ ಈಗ “ಟೆರರ್’ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಮತ್ತೂಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪಾತ್ರದ ಬಗ್ಗೆ ಚಿತ್ರತಂಡ ಹೆಚ್ಚಿನ ಗುಟ್ಟು ಬಿಟ್ಟುಕೊಟ್ಟಿಲ್ಲ. ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ಆಗಸ್ಟ್ ವೇಳೆಗೆ “ಟೆರರ್’ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿತ್ತು, ಶ್ರೀನಗರ ಕಿಟ್ಟಿ ಹೊಸ ಗೆಟಪ್ ಹೇಗಿರಲಿದೆ ಎಂಬುದು ಆ ವೇಳೆಗೆ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.