![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 6, 2023, 4:00 PM IST
ಶಿಡ್ಲಘಟ್ಟ: ಕರ್ನಾಟಕದಲ್ಲಿ ಬಿಜೆಪಿ ಶಕ್ತಿ ಕುಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಗೊತ್ತಾಗಿದೆ ಹೀಗಾಗಿ ಜನರನ್ನು ಮರಳು ಮಾಡಲು ಕರ್ನಾಟಕದಲ್ಲಿ ರೋಡ್ ಶೋ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಲೇವಡಿ ಮಾಡಿದರು.
ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎನ್ ರವಿಕುಮಾರ್ ಅವರ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕರ್ನಾಟಕದಲ್ಲಿ ಶಕ್ತಿ ಕುಂದಿದೆ ಎಂದು ಅರಿವಾಗಿದೆ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿಲ್ಲ ಆದ್ರೂ ಸಹ ಪ್ರಧಾನಮಂತ್ರಿಗಳು ಮಾಡುತ್ತಿದ್ದಾರೆ ಆ ಪಕ್ಷಕ್ಕೆ ಯಾವ ಸ್ಥಿತಿ ಬಂದಿದೆ ಎಂಬುದನ್ನು ಇದರಿಂದ ಅರ್ಥವಾಗುತ್ತದೆ ಕರ್ನಾಟಕದ ಜನರು ಬುದ್ಧಿವಂತ ಇದ್ದಾರೆ ಅವರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.
ಕರ್ನಾಟಕದಲ್ಲಿ ಜಾತ್ಯಾತೀತ ಸರ್ಕಾರ ರಚನೆ ಮಾಡುವ ಸಲುವಾಗಿ ಕಾಂಗ್ರೆಸ್ ಪಕ್ಷದೊಂದಿಗೆ ಬೇಷರತ್ತಾಗಿ ಸಮಿಶ್ರ ಸರ್ಕಾರವನ್ನು ಕುಮಾರಸ್ವಾಮಿ ನೇತೃತ್ವದಲ್ಲಿ ರಚಿಸಲಾಯಿತು ಆದರೇ ಕೆಲ ಕಾಂಗ್ರೆಸ್ ಮುಖಂಡರು ಸಮ್ಮಿಶ್ರ ಸರಕಾರವನ್ನು ಪತನಗೊಳಿಸಲು ಪ್ರಾರಂಭದಿಂದ ಷಡ್ಯಂತರ ಮತ್ತು ಹೊನ್ನಾರಗಳನ್ನು ನಡೆಸುತ್ತಾ ಬಂದರು ಕೊನೆಯದಾಗಿ ಸರ್ಕಾರವನ್ನು ಬೀಳಿಸಲು 18 ಜನರನ್ನು ಮುಂಬೈ ಕಳಿಸಿದರು ಯಾರು ಎಂದು ಆತ್ಮಾವಲೋಕನ ಮಾಡಿಕೊಳಲಿ ಕರ್ನಾಟಕದಲ್ಲಿ ಜಾತ್ಯತೀತ ಸರ್ಕಾರ ಅಧಿಕಾರಕ್ಕೆ ಬರಲುಬ ಕೆಲ ಕಾಂಗ್ರೆಸ್ಸಿಗರಿಗೆ ಇಷ್ಟವಿಲ್ಲ ಹೀಗಾಗಿ ಅವರು ಸಮಿಶ್ರ ಸರ್ಕಾರವನ್ನು ಪತನಗೊಳಿಸಿದರು ಎಂದು ಆರೋಪಿಸಿದರು.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ದೇಶದ ಪ್ರಧಾನಮಂತ್ರಿಯಾಗಿ ಮಹಿಳೆಯರಿಗೆ, ಮುಸ್ಲಿಂ ಮತ್ತು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿದ್ದೇನೆ ರಾಜ್ಯದ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕೆಲಸ ಮಾಡಿದ್ದೇನೆ ಆದರೆ ಕರ್ನಾಟಕ ಬಯಲುಸೀಮೆ ಪ್ರದೇಶಗಳಿಗೆ ಎತ್ತಿನಹೊಳೆ ಯೋಜನೆ ಬರ್ತಾಯಿದೆ ಎಂದು ವ್ಯಂಗ್ಯವಾಡಿದರು.
ನನಗೆ 90 ವರ್ಷ ವಯಸ್ಸಾದರೂ ಸಹ ಪ್ರತಿನಿತ್ಯ ಹತ್ತರಿಂದ ಹನ್ನೆರಡು ಸಭೆಯಲ್ಲಿ ಭಾಗವಹಿಸಿ ರಾತ್ರಿ 3ಗಂಟೆಗೆ ಮಲಗುತ್ತಿದ್ದೇನೆ ಕರ್ನಾಟಕ ರಾಜ್ಯದ ಹಿಂದೂ-ಮುಸ್ಲಿಂ ಎಂಬ ಭೇದಭಾವವಿಲ್ಲದೆ ಭಾರತಾಂಬೆಯ ಮಕ್ಕಳಾಗಿ ಎಲ್ಲರೂ ಅನೂನ್ಯದಿಂದ ಬದುಕಬೇಕು ಕರ್ನಾಟಕದ ಅಭಿವೃದ್ಧಿಗಾಗಿ ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ರವಿಕುಮಾರ್ ಅವರನ್ನು ಕಾಣಬೇಕು ನನ್ನ ಆಸೆಯನ್ನು ಈಡೇರಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸದಸ್ಯ ಇಂಚರ ಗೋವಿಂದರಾಜು, ಜೆಡಿಎಸ್ ಅಭ್ಯರ್ಥಿ ಬಿಎನ್ ರವಿಕುಮಾರ್, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಝಫ್ರಲ್ಲಾ ಖಾನ್, ಜೆಡಿಎಸ್ ವಕ್ತಾರೆ ಯುಟಿ ಫರ್ಝಾನ ಖಾನ್, ಬಂಕ್ ಮುನಿಯಪ್ಪ, ಮೇಲೂರು ಮಂಜುನಾಥ್, ಹೈದರ್ ಅಲೀ, ರಹಮತ್ತುಲ್ಲಾ, ಅಂಜದ್, ಹೆಚ್.ಎಸ್.ಫಯಾಝ್, ತಾಜ್ ಪಾಷ, ತಾಲೂಕು ಜೆಡಿಎಸ್ ಅಧ್ಯಕ್ಷ ವೆಂಕಟೇಶ್, ಸದಾಶಿವ, ಮುಗಿಲಡಪಿ ನಂಜಪ್ಪ, ಕೆ ಎಸ್ ಮಂಜುನಾಥ್, ಉಮೇಶ್, ತಾದೂರು ರಘು ಮತ್ತಿತರರು ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.