ಸ್ವಂತ ಬಲದಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ

Team Udayavani, May 7, 2023, 2:36 PM IST

ಸ್ವಂತ ಬಲದಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ

ಮಳವಳ್ಳಿ: ಹಿಂದೆ ಐದು ವರ್ಷ ಆಡಳಿತ ನಡೆಸಿ, ಬಹುಮತ ಕಳೆದುಕೊಂಡ ಕಾಂಗ್ರೆಸ್‌ ಇನ್ನೂ 50 ವರ್ಷ ಕಳೆದರೂ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಪಟ್ಟಣದ ಅನಂತ್‌ರಾಂ ವೃತ್ತದ ಬಳಿ ಆಯೋಜಿಸಿದ್ದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನಮ್ಮ ಪಕ್ಷದಿಂದ ಆಯ್ಕೆಯಾಗಿರುವ ವಿಧಾನ ಪರಿಷತ್‌ ಸದಸ್ಯರೊಬ್ಬರು, ಕಾಂಗ್ರೆಸ್‌ಗೆ ಬಹುಮತ ನೀಡಿ ಎಂದು ಹೇಳಿಕೆ ನೀಡಿದ್ದಾರೆ. ಅವರಿಗೆ ಗೊತ್ತಿಲ್ಲ ಅನ್ನಿಸುತ್ತದೆ, ಹಿಂದೆ ಐದು ವರ್ಷ ಅಧಿಕಾರ ಮಾಡಿ, ಬಹುಮತದಿಂದ 78 ಸ್ಥಾನಕ್ಕಿಳಿದ ಕಾಂಗ್ರೆಸ್‌ ಈ ಬಾರಿಯ ಚುನಾವಣೆಯಲ್ಲಿ 38ಕ್ಕೆ ಇಳಿಯಲಿದೆ. ನಮ್ಮ ಜೊತೆ ಸರ್ಕಾರ ರಚನೆ ಮಾಡಿ, ಕುತಂತ್ರದಿಂದ ಸರ್ಕಾರ ಪತನಗೊಳಿಸಿದವರು ಈಗ ಮುಸ್ಲಿಂ ಸಮುದಾಯದ ಮತ ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ. ಅವರಿಗೆ ಯಾವುದೇ ಕಾರಣಕ್ಕೆ ಅದರಲ್ಲಿ ಯಶಸ್ಸು ಸಿಗುವುದಿಲ್ಲ ಎಂದು ಹೇಳಿದರು.

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ: ಈ ಬಾರಿಯ ಚುನಾವಣೆಯು ಬಡವರ ಬದುಕಿಗೆ ಹೊಸ ಕಾಯಕಲ್ಪ ನೀಡುವ ಚುನಾವಣೆಯಾಗಿದೆ. ಹೀಗಾಗಿ ಪಂಚರತ್ನ ಯಾತ್ರೆ ಮೂಲಕ ಪ್ರವಾಸ ಮಾಡಿ ಜನರ ಮನ ಗೆದ್ದಿರುವೆ. ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಸ್ವಾತಂತ್ರ್ಯ ಬಂದು 75 ವರ್ಷವಾದರೂ ಬಡವರ ಬದುಕು ಇದುವರೆಗೂ ಸುಧಾರಣೆ ಕಂಡಿಲ್ಲ. ಮುಂದಿನ ಜೆಡಿಎಸ್‌ ಸರ್ಕಾರದಲ್ಲಿ ರೈತರು, ಬಡವರು, ನಿರುದ್ಯೋಗಿಗಳ ಸಮಸ್ಯೆ ನಿವಾರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ನನಗೆ ಶಕ್ತಿ ತುಂಬಿ: ಪಂಚರತ್ನ ಯೋಜನೆಗಳ ಅನುಷ್ಠಾನಕ್ಕೆ ಬಹುಮತದ ಜೆಡಿಎಸ್‌ ಸರ್ಕಾರ ರಚನೆ ಆಗಬೇಕು. ಹೀಗಾಗಿ ಜೆಡಿಎಸ್‌ ಗೆಲ್ಲಿಸಿ ನನಗೆ ಶಕ್ತಿ ತುಂಬಬೇಕು. ಯಾವುದೇ ಸಮಾಜಗಳಿಗೆ ಗೌರವ ನೀಡದ ಕಾಂಗ್ರೆಸ್‌ ಅಭ್ಯರ್ಥಿಯನ್ನು ಸೋಲಿಸಿ, ಮನೆಗೆ ಕಳಿಸುವ ತೀರ್ಮಾನ ಮಾಡಿ. ಇದು ಅವರ ಕೊನೆಯ ಚುನಾವಣೆ ಆಗಬೇಕು. ನಿಮ್ಮ ಅಭ್ಯರ್ಥಿ ಕುಮಾರಣ್ಣ ಎಂದು ಅಂತಾ ಭಾವಿಸಿ ಜೆಡಿಎಸ್‌ಗೆ ಮತ ನೀಡಿ ಎಂದು ಮನವಿ ಮಾಡಿದರು.

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಕುರುಬ ಸಮುದಾಯದ ಮುಖಂಡರು ಬಂಡೂರು ಕುರಿ ಮರಿಯೊಂದನ್ನು ನೀಡಿದರು. ಜೆಡಿಎಸ್‌ ಅಭ್ಯರ್ಥಿ ಡಾ.ಕೆ.ಅನ್ನದಾನಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ, ಜೆಡಿಎಸ್‌ ಯುವ ಘಟಕದ ಜಿಲ್ಲಾ ಅಧ್ಯಕ್ಷ ಬಿ.ರವಿ ಕಂಸಾಗರ, ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಜಯರಾಮು, ಜೆಡಿಎಸ್‌ ತಾಲೂಕು ಘಟಕದ ಅಧ್ಯಕ್ಷ ವಿ.ಎಂ.ವಿಶ್ವನಾಥ್‌, ಪುರಸಭೆ ಉಪಾಧ್ಯಕ್ಷ ಎಂ.ಟಿ.ಪ್ರಶಾಂತ್‌, ಮುಖಂಡರಾದ ರಾಜು, ನಂಜುಂಡಯ್ಯ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.