ದಸರಾ ಜಂಬೂ ಸವಾರಿಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ
Team Udayavani, May 7, 2023, 7:38 PM IST
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.
ಬಲರಾಮನಿಗೆ ಸುಮಾರು 67 ವರ್ಷ ಪ್ರಾಯವಾಗಿತ್ತು ಕಳೆದ ಕಳೆದ ಹತ್ತು ದಿನಗಳಿಂದ ಬಾಯಿಯಲ್ಲಿ ಹುಣ್ಣಾಗಿ ನಿತ್ರಾಣಗೊಂಡಿದ್ದ, ಬಲರಾಮನಿಗೆ ಟಿ.ಬಿ.(ಕ್ಷಯ) ಇರಬಹುದೆಂದು ವೈದ್ಯರು ಶಂಕಿಸಿದ್ದರು., ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಲಿದೆ.
ಸ್ಥಳದಲ್ಲೇ ಬೀಡು ಬಿಟ್ಟಿದ್ದರು
ಆಹಾರ ಸೇವಿಸಲು, ನೀರು ಕುಡಿಯಲು ಆಗದಂತಹ ಸ್ಥಿತಿ ಉಂಟಾಗಿದ್ದರಿಂದ ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿ ಚಿಕಿತ್ಸೆ ನೀಡುತ್ತಿದ್ದರು. ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಆರ್‌ಎಫ್‌ಓ ರತ್ನಾಕರ್, ಡಿಆರ್‌ಎಫ್‌ಓ ಸಿದ್ದರಾಜು ನೇತೃತ್ವದ ತಂಡ ಹಾಗೂ ಬಲರಾಮನ ಮಾವುತ ತಿಮ್ಮ, ಕವಾಡಿ ಮಂಜನಾಥ ಹಾಗೂ ಸಿಬಂದಿ ಸ್ಥಳದಲ್ಲೇ ಇದ್ದು, ಅಸ್ವಸ್ಥ ಬಲರಾಮನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.