ಪಕ್ಷಗಳು, ಅಧಿಕಾರಿಗಳಿಗೆ ತಲೆನೋವಾದ ಮತದಾನ ಬಹಿಷ್ಕಾರ!
Team Udayavani, May 8, 2023, 7:10 AM IST
ಸುಳ್ಯ: ಅಭಿವೃದ್ಧಿ ವಿಷಯ ಸಂಬಂಧವಾಗಿ ಗ್ರಾಮಸ್ಥರು ರಾಜಕೀಯ ನಾಯಕರ ಮುಂದೆ ನಾನಾ ತೆರನಾದ ಬೇಡಿಕೆಗಳನ್ನಿಡುವುದು ಸಾಮಾನ್ಯ. ಆ ಬೇಡಿಕೆಗಳು ಈಡೇರದೇ ಇದ್ದಲ್ಲಿ ಆಕ್ರೋಶ, ಅಸಮಾಧಾನ ತೋರ್ಪಡಿಸುತ್ತಾರೆ. ಕೆಲವರು ಚುನಾವಣೆ ಸಂದರ್ಭದಲ್ಲೇ ಮತದಾನ ಬಹಿ ಷ್ಕಾರದ ನಿರ್ಧಾರ ಕೈಗೊಳ್ಳುತ್ತಾರೆ. ತಮ್ಮ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರದರ್ಶಿ ಸಲು ಗ್ರಾಮದಲ್ಲಿ ಬ್ಯಾನರ್‌ಗಳನ್ನು ಅಳವಡಿಸಿ ರಾಜಕೀಯ ಪಕ್ಷಗಳು ಮತ್ತು ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ.
ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್‌ಗಳು ಹಲವು ಗ್ರಾಮಗಳಲ್ಲಿ ಕಂಡುಬಂದಿವೆ. ವಿಧಾನಸಭೆ ಚುನಾವಣೆಗೆ ವರ್ಷ ಬಾಕಿ ಇರುವಾಗಲೇ ಕ್ಷೇತ್ರದ ಅಲ್ಲಲ್ಲಿ ರಸ್ತೆ, ಸೇತುವೆ, ಕುಡಿಯುವ ನೀರು, ಹಕ್ಕುಪತ್ರ ಮತ್ತಿತರ ಸಮಸ್ಯೆಗಳನ್ನು ಮುಂದಿಟ್ಟು ಮತದಾನ ಬಹಿಷ್ಕಾರ ನಿರ್ಧಾರದ ಬ್ಯಾನರ್ ಅಳವಡಿಸಲಾಗಿತ್ತು. ಇಂದಿನವರೆಗೂ ಅದು ಮುಂದುವರಿದಿದೆ.
ನಾಯಕರು, ಅಧಿಕಾರಿಗಳಿಗೆ ತಲೆನೋವು
ಆರಂಭದಲ್ಲಿ ಈ ಬಗ್ಗೆ ಹೆಚ್ಚು ತಲೆಕೆಡಿಸಿ ಕೊಳ್ಳದ ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಚುನಾವಣೆ ಘೋಷಣೆಯಾ ಗುತ್ತಿದ್ದಂತೆಯೇ ಎಚ್ಚೆತ್ತು ಈ ಗ್ರಾಮಗಳತ್ತ ದೃಷ್ಟಿ ಹರಿಸಿದ್ದಾರೆ. ಇನ್ನು ಬಹಿಷ್ಕಾರದ ಬ್ಯಾನರ್‌ಗಳು ಮತ್ತಷ್ಟು ಗ್ರಾಮಗಳಲ್ಲಿ ಕಾಣಿಸಿಕೊಳ್ಳಲಾರಂಭಿಸಿದ ಬಳಿಕವಂತೂ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳಿಗೆ ಇದರ ಬಿಸಿ ತಟ್ಟತೊಡಗಿತು. ಆ ಬಳಿಕ ಇಂತಹ ಗ್ರಾಮಗಳಿಗೆ ತೆರಳಿ, ಅಲ್ಲಿನ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಿಕೊಡುವ ಮತ್ತು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡತೊಡಗಿದ್ದಾರೆ. ಕೆಲವು ಗ್ರಾಮಸ್ಥರು ಈ ಭರವಸೆಗಳಿಂದ ತೃಪ್ತರಾಗಿ ಬಹಿಷ್ಕಾರ ನಿರ್ಧಾರವನ್ನು ವಾಪಸ್ ಪಡೆದುಕೊಂಡರೆ ಮತ್ತೆ ಕೆಲವು ಗ್ರಾಮಗಳ ಸ್ಥಳೀಯರು ಯಾವುದಕ್ಕೂ ಮಣಿಯದೇ “ಕೆಲಸ ಆದರೆ ಬ್ಯಾನರ್ ತೆಗೆಯುತ್ತೇವೆ’ ಎಂದು ಪಟ್ಟು ಹಿಡಿಯುತ್ತಾರೆ. ಈ ಚುನಾವಣೆಯಲ್ಲೂ ಇಂಥ ಪ್ರಸಂಗಗಳು ನಡೆದಿವೆ. ಇದೀಗ ರಾಜಕೀಯ ಪಕ್ಷಗಳು ಮತ್ತು ನಾಯಕರಿಗೆ ಬಲುದೊಡ್ಡ ಸವಾಲಾಗಿ ಪರಿಣಮಿಸಿದೆ.
ಇನ್ನು ಕೆಲವೆಡೆ ಗ್ರಾಮಸ್ಥರು ಅಧಿಕಾರಿಗಳು ಮತ್ತು ರಾಜಕೀಯ ನಾಯಕರನ್ನು ತರಾಟೆಗೆ ತೆಗೆದುಕೊಂಡ ಘಟನೆಗಳೂ ನಡೆದಿವೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆ ಮತದಾನ ಬಹಿಷ್ಕಾರ ಕೂಗಿನಿಂದಲೇ ಒಂದು ಹಂತದಲ್ಲಿ ಪ್ರಚಾರ ಪಡೆದಿದೆ ಎನ್ನಬಹುದು.
ಮತದಾನಕ್ಕೆ 2 ದಿನ ಮಾತ್ರವೇ ಉಳಿದಿದ್ದು ಸುಳ್ಯದ ಹಲವೆಡೆ ಬಹಿಷ್ಕಾರದ ಕೂಗು ಕೇಳಿ ಬರುತ್ತಿದೆ.ಆಡಳಿತ ನಡೆಸುವವರ ನಿರ್ಲಕ್ಷ್ಯವೇ ಇಂಥ ಘಟನೆಗಳು ನಡೆಯಲು ಕಾರಣ ಎಂಬುದು ಕ್ಷೇತ್ರದಾರರ ಅಂಬೋಣ.
ಎಲ್ಲರೂ ಮತ ಚಲಾಯಿಸುವಂತೆ ಅಧಿಕಾರಿಗಳು, ರಾಜಕೀಯ ಪಕ್ಷಗಳು ಪ್ರಯತ್ನ ಪಡುತ್ತಿರುವುದು ಉತ್ತಮ ಕೆಲಸವೇ. ಆದರೆ ಚುನಾವಣೆ ಬಳಿಕ, ಅಧಿಕಾರ ಸಿಕ್ಕ ಮೇಲೂ ಜನರ ಸಮಸ್ಯೆ ನಿವಾರಣೆ, ಅಭಿವೃದ್ಧಿ ವಿಚಾರದಲ್ಲೂ ಇದೇ ಪ್ರಯತ್ನ ಇರಲಿ ಎಂಬ ಮಾತು ನಾಗರಿಕರದ್ದು.
- ದಯಾನಂದ ಕಲ್ನಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.