ಕೃಷ್ಣರಾಜದಲ್ಲಿ ಬಿಜೆಪಿ-ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿ

Team Udayavani, May 8, 2023, 2:49 PM IST

ಕೃಷ್ಣರಾಜದಲ್ಲಿ ಬಿಜೆಪಿ-ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿ

ಮೈಸೂರು: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಈ ಬಾರಿ ಜಿದ್ದಾಜಿದ್ದಿಯ ಕ್ಷೇತ್ರಗಳಲ್ಲಿ ಒಂದಾಗಿದೆ. ಕಳೆದ ಕೆಲವು ವರ್ಷಗಳಿಂದ ಬಿಜೆಪಿ-ಕಾಂಗ್ರೆಸ್‌ ನಡುವಿನ ಸೆಣಸಾಟಕ್ಕೆ ವೇದಿಕೆಯಾಗಿದ್ದು, ಈ ಬಾರಿಯೂ ಈ ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಕ್ಷೇತ್ರದಲ್ಲಿ ಬ್ರಾಹ್ಮಣ, ವೀರಶೈವ- ಲಿಂಗಾಯತ, ಪರಿಶಿಷ್ಟ ಜಾತಿ, ಕುರುಬ, ಒಕ್ಕಲಿಗ, ಅಲ್ಪಸಂಖ್ಯಾತ, ನಾಯಕ ಸಮುದಾಯಗಳು ಪ್ರಾಬಲ್ಯ ಹೊಂದಿದ್ದು, ಈ ಜಾತಿ ಲೆಕ್ಕಾಚಾರದಲ್ಲಿಯೇ ಪ್ರಮುಖ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲುವಿಗಾಗಿ ತಂತ್ರ ರೂಪಿಸಿವೆ. 1967 ರಚನೆಯಾದ ಕೆ.ಆರ್‌. ಕ್ಷೇತ್ರದಲ್ಲಿ ಈವರೆಗೆ ಒಂದು ಉಪಚುನಾವಣೆ ಸೇರಿ 15 ಚುನಾವಣೆಗಳು ನಡೆದಿದ್ದು, ಮೊದಲು ಸಾಹುಕಾರ್‌ ಚೆನ್ನಯ್ಯ ಸ್ವತಂತ್ರ ಅಭ್ಯರ್ಥಿಯಾಗಿ ಕ್ಷೇತ್ರದ ಮೊದಲ ಶಾಸಕರಾಗಿ ಆಯ್ಕೆಯಾಗುತ್ತಾರೆ. ಬಳಿಕ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಲಾ ಮೂರು ಬಾರಿ ಜಯ ಕಂಡಿದ್ದರೆ, ಬಿಜೆಪಿ 5 ಬಾರಿ ಈ ಕ್ಷೇತ್ರದಲ್ಲಿ ಗೆಲುವು ಪಡೆದಿದೆ.

ಬ್ರಾಹ್ಮಣ ಮತದಾರರೇ ಹೆಚ್ಚಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಜಕೀಯ ಚಿತ್ರಣವೇ ಬದಲಾಗಿದೆ. ನಾಲ್ಕು ಬಾರಿ ಶಾಸಕ ರಾಗಿ ಆಯ್ಕೆಯಾಗಿದ್ದ, ಹಾಲಿ ಶಾಸಕ ಎಸ್‌.ಎ. ರಾಮದಾಸ್‌ ಗೆ ಬಿಜೆಪಿ ಟಿಕೆಟ್‌ ಕೈತಪ್ಪಿದ್ದು, ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ.

ಹೊಸ ಮುಖಕ್ಕೆ ಮಣೆ ಹಾಕಿರುವುದು, ಬದಲಾದ ರಾಜಕೀಯ ತಂತ್ರಗಾರಿಕೆ ಈ ಬಾರಿಯ ಚುನಾವ ಣೆಯ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದು ಎಲ್ಲರ ಕುತೂಹಲದ ವಿಚಾರವಾಗಿದೆ. ಜತೆಗೆ ಶ್ರೀವತ್ಸ ಗೆಲುವಿಗೆ ಟಿಕೆಟ್‌ ವಂಚಿತರಾದ ಶಾಸಕ ರಾಮದಾಸ್‌ ಶ್ರಮಿಸು ತ್ತಿದ್ದು, ಎಲ್ಲೆಡೆ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕಾಂಗ್ರೆಸ್‌ನಿಂದ ಈ ಬಾರಿಯೂ ಎಂ.ಕೆ. ಸೋಮಶೇಖರ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರೆ, ಜೆಡಿಎಸ್‌ ಅಭ್ಯರ್ಥಿಯಾಗಿ ಕೆ.ವಿ. ಮಲ್ಲೇಶ್‌ ಮತ್ತೆ ಅಖಾಡಕ್ಕೆ ಧಮುಕಿದ್ದಾರೆ. ಈ ಮೂವರು ಅಭ್ಯರ್ಥಿಗಳು ಸೇರಿ ಒಟ್ಟಾರೆ ಈ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದು, ಬಿರುಸಿನ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

1994 ರಿಂದ 2018ರವರೆಗೆ ಪ್ರತಿ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತಾ ಬಂದಿದ್ದ ಶಾಸಕ ಎಸ್‌.ಎ. ರಾಮದಾಸ್‌, ಒಟ್ಟು 6 ಚುನಾವಣೆಗಳನ್ನು ಎದುರಿಸಿ 4 ಬಾರಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಶಾಸಕ ರಾಮದಾಸ್‌ ಬಿಜೆಪಿಯ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಕೊನೆ ಕ್ಷಣದಲ್ಲಿ ಟಿಕೆಟ್‌ ಕೈತಪ್ಪಿತು. ಇದು ಬಿಜೆಪಿ ಅಭ್ಯರ್ಥಿಯ ಮತಗಳಿಕೆಯ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬ ಕುತೂಹಲ ಮೂಡಿಸಿದೆ. ಆದರೂ, ತನ್ನ ಸಾಂಪ್ರದಾಯಿಕ ಮತಗಳ ಆಧಾರದ ಮೇಲೆ ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿದೆ.

ಇತ್ತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಕೆ. ಸೋಮಶೇಖರ್‌ ಒಟ್ಟು 5 ಚುನಾವಣೆಗಳನ್ನು ಎದುರಿಸಿ ಎರಡು ಬಾರಿ ಗೆಲುವು ಸಾಧಿಸಿದ್ದಾರೆ. ಎರಡು ಬಾರಿ ಜೆಡಿಎಸ್‌ ಹಾಗೂ ಮೂರು ಬಾರಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ತಲಾ ಒಂದು ಬಾರಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದಾರೆ. ಈ ಬಾರಿಯ ಚುನಾವಣೆ 6ನೇಯದ್ದಾಗಿದ್ದು, 2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿ ಎಚ್‌.ವಿ. ರಾಜೀವ್‌ ಸ್ಪರ್ಧೆಯಿಂದ ಬಿಜೆಪಿ ಮತಗಳ ವಿಭಜನೆಯಿಂದ ಎಂ.ಕೆ. ಸೋಮಶೇಖರ್‌ ಸುಲಭವಾಗಿ ಗೆಲುವು ಸಾಧಿಸಿದ್ದರು. ಆದರೆ, 2018ರಲ್ಲಿ ರಾಜಕೀಯ ಚಿತ್ರಣ ಬದಲಾಗಿ ಬಿಜೆಪಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಂಡಿದೆ. ಆದರೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಾಯಕತ್ವ, ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳ ಜತೆಗೆ ರಾಮದಾಸ್‌ಗೆ ಟಿಕೆಟ್‌ ಕೈತಪ್ಪಿರುವುದರ ಲಾಭ ಪಡೆದು ಗೆಲ್ಲುವ ತವಕದಲ್ಲಿ ಕಾಂಗ್ರೆಸ್‌ ಇದೆ.

ವೀರಶೈವ- ಲಿಂಗಾಯತ ಸಮುದಾಯಕ್ಕೆ ಸೇರಿದ ಮಹಾನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್‌ ಅವರನ್ನು ಎರಡನೇ ಬಾರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿರುವ ಜೆಡಿಎಸ್‌ ವೀರಶೈವ -ಲಿಂಗಾಯತ ಸಮುದಾಯದ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೆಳೆದು ಗೆಲುವು ಸಾಧಿಸುವ ತವಕದಲ್ಲಿದೆ. ಕಳೆದ ಬಾರಿ ಮಲ್ಲೇಶ್‌ 11,607 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದುಕೊಂಡಿದ್ದರು.

ಕಳೆದ 35 ವರ್ಷಗಳಿಂದ ನಾನು ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಿದ ಅನುಭವವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳ ಸಾಧನೆ ಮುಂದಿಟ್ಟುಕೊಂಡು ಚುನಾವಣೆ ಪ್ರಚಾರ ನಡೆಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಎಸ್‌.ಎ. ರಾಮದಾಸ್‌ ಅವರೇ ನನಗೆ ಮಾದರಿ. ಟಿ.ಎಸ್‌. ಶ್ರೀವತ್ಸ, ಬಿಜೆಪಿ ಅಭ್ಯರ್ಥಿ

ಕ್ಷೇತ್ರದಲ್ಲಿ ಈ ಹಿಂದೆ ನಾನು ಮಾಡಿದ ಕೆಲಸ, ಹಿಂದಿನ ನಮ್ಮ ಸರ್ಕಾರ ನೀಡಿದ ಯೋಜನೆ, ಮುಂದೆ ನಾವು ನೀಡಿರುವ ಭರವಸೆ ನನ್ನ ಗೆಲುವಿನ ಶ್ರೀರಕ್ಷೆಯಾಗಿದೆ. ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ. ನನ್ನೆಲ್ಲಾ ಕೆಲಸಗಳನ್ನು ಜನರ ಮುಂದಿಟ್ಟು ಮತಯಾಚಿಸುತ್ತಿರುವೆ. ಎಂ.ಕೆ. ಸೋಮಶೇಖರ್‌, ಕಾಂಗ್ರೆಸ್‌ ಅಭ್ಯರ್ಥಿ.

ಎರಡು ಬಾರಿ ಮಹಾನಗರ ಪಾಲಿಕೆ ಸದಸ್ಯನಾಗಿ ಕೆಲಸ ಮಾಡಿದ ಅನುಭವ ಇದೆ. ಒಂದು ಬಾರಿ ಎಂಎಲ್‌ಎ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದೇನೆ. ನಮ್ಮ ಸರ್ಕಾರದ ಅವಧಿಯಲ್ಲಿ ಪೊಲೀಸ್‌ ಠಾಣೆಗಳಿಗೆ ಉತ್ತಮ ಕಟ್ಟಡ ನಿರ್ಮಿಸ ಲಾಗಿದೆ. ಕ್ಷೇತ್ರದಲ್ಲಿ ಜೆಡಿಎಸ್‌ ಪರ ಒಲವಿದೆ. ಎಚ್‌.ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಸರ್ಕಾರದ ರೈತ ಪರ, ಮಹಿಳಾ ಪರ ಯೊಜನೆಗಳು ನನ್ನ ಗೆಲುವಿಗೆ ನೆರವಾಗಲಿವೆ. ಕೆ.ವಿ. ಮಲ್ಲೇಶ್‌, ಜೆಡಿಎಸ್‌ ಅಭ್ಯರ್ಥಿ

ಸತೀಶ್‌ ದೇಪುರ

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.