BMTC ಬಸ್ ನಲ್ಲಿ ಪ್ರಯಾಣಿಸಿದ ರಾಹುಲ್; ಕೊನೆಯ ದಿನದ ಮತಬೇಟೆ
ಕೈ ನಾಯಕನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಹಿಳೆಯರು
Team Udayavani, May 8, 2023, 3:01 PM IST
ಬೆಂಗಳೂರು: ರಾಜಯದಲ್ಲಿ ಚುನಾವಣ ಬಹಿರಂಗ ಪ್ರಚಾರದ ಅಂತಿಮ ದಿನವಾದ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ನಲ್ಲಿ ಪ್ರಯಾಣಿಸಿ ಕಾಲೇಜು ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥ ಮಹಿಳೆಯರೊಂದಿಗೆ ಮಾತನಾಡಿದರು.
ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ‘ಕೆಫೆ ಕಾಫಿ ಡೇ’ ಔಟ್ಲೆಟ್ನಲ್ಲಿ ಒಂದು ಕಾಫಿ ಕುಡಿದ ನಂತರ ರಾಹುಲ್ ಗಾಂಧ ಬಿಎಂಟಿಸಿ ಬಸ್ಗೆ ಏರಿದರು.ಲಿಂಗರಾಜಪುರಂನಲ್ಲಿ ಬಸ್ನಿಂದ ಇಳಿದ ಗಾಂಧಿ ಅಲ್ಲಿ ಮತ್ತೆ ಬಸ್ ನಿಲ್ದಾಣದಲ್ಲಿ ಮಹಿಳೆಯರೊಂದಿಗೆ ಮಾತನಾಡಿದರು.
”ಶಕ್ತಿ! ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸಲಿದೆ ಕಾಂಗ್ರೆಸ್! ಇದರ ಪ್ರಯುಕ್ತ ರಾಹುಲ್ ಗಾಂಧಿಯವರು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸಿ ಪ್ರಯಾಣಿಕರೊಂದಿಗೆ ಮಾತನಾಡಿ ಅವರ ಅಭಿಪ್ರಾಯವನ್ನು ಸಂಗ್ರಹಿಸಿದರು.” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಕರ್ನಾಟಕದ ಬಗ್ಗೆ ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಮಹಿಳಾ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ಗೃಹಲಕ್ಷ್ಮಿ ಯೋಜನೆ (ಮನೆಯ ಮುಖ್ಯಸ್ಥ ಮಹಿಳೆಗೆ ತಿಂಗಳಿಗೆ 2,000 ರೂ.) ಮತ್ತು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ)ಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಕಾಂಗ್ರೆಸ್ನ ‘ಖಾತರಿ’ ಸೇರಿದಂತೆ ವಿಷಯಗಳ ಕುರಿತು ಅವರು ಚರ್ಚಿಸಿದರು.
ಶಕ್ತಿ!
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸಲಿದೆ ಕಾಂಗ್ರೆಸ್!
ಇದರ ಪ್ರಯುಕ್ತ ಶ್ರೀಯುತ ರಾಹುಲ್ ಗಾಂಧಿಯವರು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸಿ ಪ್ರಯಾಣಿಕರೊಂದಿಗೆ ಮಾತನಾಡಿ ಅವರ ಅಭಿಪ್ರಾಯವನ್ನು ಸಂಗ್ರಹಿಸಿದರು. @RahulGandhi pic.twitter.com/HgRpQPHOIM
— Karnataka Congress (@INCKarnataka) May 8, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್ಇ
B Z Zameer ahmed khan ಹೇಳಿಕೆ ಹಿಂದೆ ಎಚ್ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.