ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಮಸ್ಟರಿಂಗ್ ಕೇಂದ್ರದಲ್ಲಿ ಪರದಾಡಿದ ಚುನಾವಣಾ ಸಿಬ್ಬಂದಿ
Team Udayavani, May 9, 2023, 2:16 PM IST
ಹುಬ್ಬಳ್ಳಿ: ಬಿರುಬಿಸಿಲಿನ ತಾಪಕ್ಕೆ ಮಳೆರಾಯ ತಂಪೆರದಿದ್ದು, ನಗರದಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿಯುತ್ತಿದೆ. ಕಳೆದ ಒಂದು ಗಂಟೆಯಿಂದಲೂ ಧಾರಾಕಾರ ಮಳೆ ಬೀಳುತ್ತಿದೆ.
ಭಾರಿ ಮಳೆಯಿಂದ ತಗ್ಗು ಪ್ರದೇಶಗಳಿಗೆ ಮಳೆ ನೀರು ಹೊಕ್ಕಿದೆ. ಅಲ್ಲಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆಯುತ್ತಿರುವುದರಿಂದ ಮಳೆ ನೀರು ಸಂಪೂರ್ಣ ರಸ್ತೆಯನ್ನು ಆವರಿಸಿದೆ. ಇದರಿಂದ ಜನ ಓಡಾಟಕ್ಕೂ ತೊಂದರೆಯಾಗಿದೆ. ಯಾವುದು ರಸ್ತೆ, ಯಾವುದು ಗುಂಡಿ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ದ್ವಿಚಕ್ರ ವಾಹನ ಸವಾರರು ರಸ್ತೆ ದಾಟಲು ಪರದಾಡುವಂತಾಗಿದೆ.
ಮಳೆ ನೀರು ಚರಂಡಿಗೆ ಸರಾಗವಾಗಿ ಹರಿಯದ ಪರಿಣಾಮ ರಸ್ತೆ ಮೇಲೆಯೇ ನಿಂತಿದ್ದು. ಕೆಲವಡೆ ಬೈಕ್ ಗಳು ಮಳೆ ನೀರಿನಿಂದ ಆವೃತವಾಗಿವೆ. ಇನ್ನು ಮಾರುಕಟ್ಟೆ ಪ್ರದೇಶದಲ್ಲಿನ ಪರಿಸ್ಥಿತಿಯಂತೂ ಹೇಳತೀರದು. ಮಳೆಯಾಗುವ ಸೂಚನೆ ಇದ್ದರೂ ಇಷ್ಟೊಂದು ಧಾರಕಾರ ಮಳೆಯನ್ನು ಜನರು ನಿರೀಕ್ಷಿಸಿರಲಿಲ್ಲ.
ಇನ್ನೂ ಇಲ್ಲಿನ ಲ್ಯಾಮಿಂಗ್ಟನ್ ಶಾಲೆಯಲ್ಲಿ ಚುನಾವಣಾ ಮಸ್ಟರಿಂಗ್ ಕೇಂದ್ರವಿದ್ದು, ಮಳೆಯಿಂದಾಗಿ ಮಸ್ಟರಿಂಗ್ ಕಾರ್ಯವು ಅಸ್ತವ್ಯವಸ್ತವಾಗಿದೆ. ಊಟದ ಸಮಯಕ್ಕೆ ಮಳೆ ಸುರಿದ ಪರಿಣಾಮ ಇಡಿ ಶಾಮಿಯಾನ ಸೋರಲಾರಂಭಿಸಿದೆ. ಇನ್ನು ಮತಯಂತ್ರ ಸೇರಿದಂತೆ ಇತರೆ ಸಾಮಾಗ್ರಿಗಳನ್ನು ತೆಗೆದುಕೊಂಡು ವಾಹನದ ಬಳಿ ಹೋಗಲಾರದಂತಹ ಸ್ಥಿತಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.