ಹುಟ್ಟೂರ ಜನತೆಯ ಸೇವೆಗಾಗಿ ನನ್ನ ಜೀವನವನ್ನೇ ಮುಡಿಪಾಗಿಡುತ್ತೇನೆ : ಗುರ್ಮೆ ಸುರೇಶ್ ಶೆಟ್ಟಿ
ಕಾಪು ಪುರಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತಯಾಚನೆ
Team Udayavani, May 9, 2023, 2:48 PM IST
ಕಾಪು : ರಾಜಕೀಯದಿಂದ ಹಣ ಸಂಪಾದನೆ ಮಾಡಬೇಕಾಗಿಲ್ಲ. ಭಗವಂತ ನನಗೆ ಜೀವನಕ್ಕೆ ಬೇಕಾಗುವಷ್ಟನ್ನು ನೀಡಿದ್ದಾನೆ. ತಾಯಿಯ ಪ್ರೇರಣೆಯಂತೆ ಸಮಾಜದ ಸೇವೆ ಮಾಡುತ್ತಿದ್ದ ನನಗೆ ಬಿಜೆಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿ, ನನ್ನ ಹುಟ್ಟೂರಿನ ಜನತೆಯ ಸೇವೆ ಮಾಡುವ ಅವಕಾಶವನ್ನು ಮಾಡಿಕೊಟ್ಟಿದೆ. ಚುನಾವಣೆಯಲ್ಲಿ ಗೆದ್ದು ಹುಟ್ಟೂರ ಜನತೆಯ ಸೇವೆಗಾಗಿ ನನ್ನ ಜೀವನವನ್ನೇ ಮುಡಿಪಾಗಿಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತದಾರರಲ್ಲಿ ಮನವಿ ಮಾಡಿದರು.
ಕಾಪು ಪುರಸಭೆ ವ್ಯಾಪ್ತಿಯ ಕಾಪು ಪೇಟೆ ಸಹಿತ ವಿವಿಧೆಡೆಗಳಲ್ಲಿ ಮತಯಾಚನೆ ನಡೆಸಿ, ಕಾಪು ಪೇಟೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕರ್ತರ ಶ್ರಮಕ್ಕೆ ಋಣಿ : ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ರಾಷ್ಟ್ರ ದೊಡ್ಡದು ಎಂಬ ಶ್ರೇಷ್ಟ ಚಿಂತನೆಯೊಂದಿಗೆ ಮುನ್ನಡೆಯುತ್ತಿರುವ ಬಿಜೆಪಿ ರಾಜ್ಯದಲ್ಲಿ 72 ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದೆ. ನನ್ನನ್ನು ಗುರುತಿಸಿ ಪಕ್ಷ ನನಗೆ ಅವಕಾಶ ಮಾಡಿಕೊಟ್ಟಿದೆ. ಪಕ್ಷ ಅಭ್ಯರ್ಥಿಯನ್ನಾಗಿ ಘೋಷಿಸಿದ ಬಳಿಕ ಶಾಸಕರಾದಿಯಾಗಿ ಪಕ್ಷದ ಪ್ರಮುಖರು, ಕಾರ್ಯಕರ್ತರು ನಿರಂತರ ಕ್ಷೇತ್ರ ಸಂಚಾರ ನಡೆಸಿ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ನನ್ನ ಜತೆಗಿದ್ದು ಈ ಚುನಾವಣಾ ಯಜ್ಞದಲ್ಲಿ ಪಾಲ್ಗೊಳ್ಳುತ್ತಿರುವ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇನ್ನುಳಿದ ಅವಧಿಯಲ್ಲೂ ಪಕ್ಷಕ್ಕಾಗಿ ಕೆಲಸ ಮಾಡೋಣ. ಬಿಜೆಪಿಯನ್ನು ಗೆಲ್ಲಿಸೋಣ ಎಂದರು.
ಗುರ್ಮೆ ಅವರನ್ನು ಸರಕಾರದ ಭಾಗವಾಗಿಸೋಣ : ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಕಾಪು ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಹಿಂದೆಂದೂ ಕಂಡರಿಯದ, ಕೇಳರಿಯದ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆದಿವೆ. ನನ್ನ ಅವಧಿಯಲ್ಲಿ ಸರಕಾರದ ಮುಂದೆ ಪ್ರಸ್ತಾವಿಸಿರುವ ಹಲವು ಯೋಜನೆಗಳು ಮಂಜೂರಾತಿ ಹಂತದಲ್ಲಿವೆ. ಗುರ್ಮೆ ಸುರೇಶ್ ಶೆಟ್ಟಿ ಅವರು ನನ್ನ ಉತ್ತರಾಧಿಕಾರಿಯಾಗಿ, ನಾನು ಮತ್ತು ಕ್ಷೇತ್ರದ ಜನತೆ ಕಂಡಿರುವ ಅಭಿವೃದ್ಧಿ ಕುರಿತಾದ ಕನಸುಗಳನ್ನು ಸಾಕಾರಗೊಳಿಸಲು ಕಟಿಬದ್ಧರಾಗಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಗುರ್ಮೆ ಅವರನ್ನು ಸರಕಾರದ ಭಾಗವಾಗುವ ಅವಕಾಶ ಕಲ್ಪಿಸಿಕೊಡೋಣ ಎಂದರು.
ಮತಗಳ ಮೂಲಕ ಉತ್ತರಿಸೋಣ : ಗುರ್ಮೆ
ಕುತಂತ್ರದ ರಾಜಕಾರಣ ನಡೆಸುವುದರಲ್ಲಿ ಕಾಂಗ್ರೆಸಿಗರು ನಿಸ್ಸೀಮರು. ಕಾಂಗ್ರೆಸ್ ಪಕ್ಷ ನಮ್ಮನ್ನು ಎಷ್ಟು ತುಳಿಯುತ್ತದೆಯೋ ನಾವು ಅಷ್ಟು ಎತ್ತರಕ್ಕೆ ಬೆಳೆಯುತ್ತಿದ್ದೇವೆ. ನನಗೆ ಬಡತನವೇನೆಂದು ಗೊತ್ತಿದೆ. ಹಸಿವು ಏನೆಂದು ಗೊತ್ತಿದೆ. ಅವಮಾನ ಏನೆಂದು ಗೊತ್ತಿದೆ. ರಾಜಕೀಯಕ್ಕೆ ಬಂದು ಹಣ ಮಾಡಬೇಕಾದ ಅವಶ್ಯಕತೆಯಿಲ್ಲ. ಭಗವಂತನ ನನಗೇನು ಕೊಟ್ಟಿದ್ದಾನೋ ಅದರಲ್ಲಿ ಒಂದಿಷ್ಟನ್ನು ಸಮಾಜಕ್ಕೆ ಕೊಡುತ್ತಿದ್ದೇನೆ. ಚುನಾವಣಾ ಹಿನ್ನೆಲೆಯಲ್ಲಿ ಎದುರಾಳಿಗಳು ನನ್ನ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ರಾಜಕೀಯವಾಗಿ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ಮತ್ತು ಅಪಮಾನಗಳಿಗೆ ಮತರದಾರರು ತಮ್ಮ ಮತಗಳ ಮೂಲಕ ಸೂಕ್ತ ಉತ್ತರವನ್ನು ನೀಡುವಂತೆ ಅವರು ವಿನಂತಿಸಿದರು.
ಮೋದಿ ಕೈ ಬಲಪಡಿಸುವ ಚುನಾವಣೆ : ಚುನಾವಣೆಯಲ್ಲಿನ ಗೆಲುವು ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಮಾತ್ರ ಸೀಮಿತವಲ್ಲ. ಇಲ್ಲಿ ಧರ್ಮ ಗೆಲ್ಲಿದೆ, ಮೋದಿಯವರ ಸಂಕಲ್ಪ ಗೆಲ್ಲಬೇಕಿದೆ. ಬಿಜೆಪಿ ರಾಷ್ಟ್ರ ಧರ್ಮದ ಚಿಂತನೆಗಳು ಗೆಲ್ಲಬೇಕಿದೆ. ಇಲ್ಲಿ ನೀವು ನೀಡುವ ಪ್ರತೀ ಮತಗಳು ಪ್ರಧಾನಿ ಮೋದಿಯವರ ಕೈ ಬಲಪಡಿಸುತ್ತದೆ. ಭಾರವನ್ನು ವಿಶ್ವಗುರುವನ್ನಾಗಿ ಮಾಡುವ ಮೋದಿಯವರ ಕನಸನ್ನು ನನಸಾಗಿಸಲು ನಾವೆಲ್ಲರೂ ಶ್ರಮಿಸೋಣ ಎಂದು ಹೇಳಿದರು.
ಬಿಜೆಪಿ ಮುಖಂಡರಾದ ಶ್ರೀಕಾಂತ್ ನಾಯಕ್, ವೀಣಾ ಶೆಟ್ಟಿ, ಗೀತಾಂಜಲಿ ಸುವರ್ಣ, ನವೀನ್ ಎಸ್. ಕೆ., ವಿಜಯ್ ಕರ್ಕೆàರ, ಅನಿಲ್ ಕುಮಾರ್, ಸಂದೀಪ್ ಶೆಟ್ಟಿ, ರತ್ನಾಕರ ಶೆಟ್ಟಿ, ಹರಿಣಿ ದೇವಾಡಿಗ, ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಗೋಪ ಪೂಜಾರಿ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿರಿಯಡಕ ದೇವಸ್ಥಾನದ ವಿಚಾರದಲ್ಲಿ ಬಿಜೆಪಿಯನ್ನು ದೂಷಿಸಬೇಡಿ : ಕುಯಿಲಾಡಿ
ಹಿರಿಯಡಕ : ಹಿರಿಯಡಕ ವೀರಭದ್ರ ದೇವಸ್ಥಾನದ ವಿಚಾರವಾಗಿ ಕಾಂಗ್ರೆಸ್ ಪಕ್ಷ ಅನಗತ್ಯವಾಗಿ ಬಿಜೆಪಿಯ ಮೇಲೆ ಆರೋಪ ಹೊರಿಸುತ್ತಿದೆ.
ಹಿರಿಯಡಕ, ಬೊಮ್ಮರಬೆಟ್ಟು ಪರಿಸರದಲ್ಲಿ ಸಾರ್ವಜನಿಕ ಪ್ರಚಾರ ಸಭೆಗಳಲ್ಲಿ ಬಿಜೆಪಿಯನ್ನು ದೂಷಿಸುತ್ತಿರುವುದನ್ನು ಖಂಡಿಸಿರಿವ ಅವರು, ಹಿರಿಯಡಕ ವೀರಭದ್ರ ದೇವಸ್ಥಾನದ ವಿಷಯದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು, ಶಾಸಕರು ಮತ್ತು ಸಚಿವರು ಯಾವುದೇ ರೀತಿಯ ಹಸ್ತಕ್ಷೇಪ ಮಾಡಿಲ್ಲ. ದೇವಸ್ಥಾನ ಮತ್ತು ಕುಟುಂಬದ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ರಿಮಾಂಡ್ ಆಗಿ, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಕೈಯ್ಯಲ್ಲಿದೆ. ಚುನಾವಣೆ ಸಂದರ್ಭದಲ್ಲಿ ದೇವಸ್ಥಾನದ ಹೆಸರಿನಲ್ಲಿ ಬಿಜೆಪಿಯನ್ನು ಬೀದಿಗೆಳೆಯುವ ಅಗತ್ಯವಿಲ್ಲ. ಇದು ದೇವಸ್ಥಾನ, ಕುಟುಂಬ, ಕೋರ್ಟ್, ಸರಕಾರದ ವ್ಯವಸ್ಥೆಗೆ ಸೀಮೀತವಾದ ವಿಚಾರವಾಗಿದೆ. ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ನಡೆಸುತ್ತಿರುವ ಅಪಪ್ರಚಾರಕ್ಕೆ ಮತದಾರರೇ ಸೂಕ್ತ ಉತ್ತರ ಕೊಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.